ಬಿಜೆಪಿ ವರಿಷ್ಠರು ಮತ್ತು ಕಾರ್ಯಕರ್ತರಿಗೆ ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಿಷ್ಟು

ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಕ್ಕೂ ಮುನ್ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ನಳಿನ್ ಕುಮಾರ್ ಅವರು ಧನ್ಯವಾದ ಹೇಳಿ ಪತ್ರವೊಂದನ್ನು ಬರೆದಿದ್ದು ಈ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ನನ್ನ ಮೇಲೆ ನಂಬಿಕೆಯಿಟ್ಟು ಜವಾಬ್ದಾರಿ ವಹಿಸಿದ ಪಕ್ಷದ ನಾಯಕರು, ಸಂಘಟನಾ ಕಾರ್ಯದಲ್ಲಿ ಹೆಗಲಿಗೆ ಹೆಗಲಾಗಿ ನಿಂತ ಪಕ್ಷದ ರಾಜ್ಯ ನಾಯಕರು, ದೇವದುರ್ಲಭ ಕಾರ್ಯಕರ್ತರಿಗೆ ನನ್ನ ವಂದನೆಗಳು ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಬಿಜೆಪಿ ವರಿಷ್ಠರು ಮತ್ತು ಕಾರ್ಯಕರ್ತರಿಗೆ ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಿಷ್ಟು
ನಳಿನ್ ಕುಮಾರ್ ಕಟೀಲ್
Follow us
TV9 Web
| Updated By: ಆಯೇಷಾ ಬಾನು

Updated on:Nov 15, 2023 | 1:59 PM

ಬೆಂಗಳೂರು, ನ.15: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ (BY Vijayendra) ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಪಕ್ಷದ ಬಾವುಟ ನೀಡಿ ನಳಿನ್ ಕುಮಾರ್ ಕಟೀಲು (Nalin Kumar Kateel) ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಇನ್ನು ತನ್ನ ಮೇಲಿದ್ದ ಜವಾಬ್ದಾರಿಯನ್ನು ಹಸ್ತಾರ ಮಾಡುವ ಮುನ್ನವೇ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ವರಿಷ್ಠರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ್ದಾರೆ. ತಮ್ಮ ಎಕ್ಸ್(ಟ್ವಿಟರ್) ಖಾತೆಯಲ್ಲಿ ಪಕ್ಷದ ರಾಜ್ಯ ನಾಯಕರು, ದೇವದುರ್ಲಭ ಕಾರ್ಯಕರ್ತರಿಗೆ ನನ್ನ ವಂದನೆಗಳು ಎಂದು ಪತ್ರ ಬರೆದು ಪೋಸ್ಟ್ ಹಂಚಿಕೊಂಡಿದ್ದಾರೆ.

ದೇಶದ ಅತಿದೊಡ್ಡ ಪಕ್ಷದ ರಾಜ್ಯಾಧ್ಯಕ್ಷನಾಗಿ ಈ 4 ವರ್ಷ 3 ತಿಂಗಳ ಅವಧಿಯಲ್ಲಿ ಮಾತೃಸಮಾನ ಪಕ್ಷದ ಸಂಘಟನೆಗಾಗಿ ಶ್ರದ್ಧೆಯಿಂದ ದುಡಿದಿದ್ದೇನೆ. ನನ್ನ ಮೇಲೆ ನಂಬಿಕೆಯಿಟ್ಟು ಜವಾಬ್ದಾರಿ ವಹಿಸಿದ ಪಕ್ಷದ ನಾಯಕರು, ಸಂಘಟನಾ ಕಾರ್ಯದಲ್ಲಿ ಹೆಗಲಿಗೆ ಹೆಗಲಾಗಿ ನಿಂತ ಪಕ್ಷದ ರಾಜ್ಯ ನಾಯಕರು, ದೇವದುರ್ಲಭ ಕಾರ್ಯಕರ್ತರಿಗೆ ನನ್ನ ವಂದನೆಗಳು ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತೇವೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಪದಗ್ರಹಣ ಮಾಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ವಿಜಯೇಂದ್ರ ಪಟ್ಟಾಭಿಷೇಕವಾಗಿದೆ. ಬಿಜೆಪಿ ಕಚೇರಿಗೆ ಆಗಮಿಸಿದ ವಿಜಯೇಂದ್ರಗೆ ಪೂರ್ಣಕುಂಭ ಸ್ವಾಗತ ದೊರೆಯಿತು. ನಂತ್ರ ಗೋ ಪೂಜೆ ಮಾಡಿದ ವಿಜಯೇಂದ್ರ ಪೂರ್ಣಾಹುತಿಯಲ್ಲಿ ಭಾಗಿಯಾಗಿದ್ರು. ಈ ವೇಳೆ ಕಾರ್ಯಕರ್ತರು ವಿಜಯೇಂದ್ರ ಪರ ಘೋಷಣೆ ಕೂಗಿದ್ರು. ಇದಾದ ಬಳಿಕ ಪಕ್ಷದ ಬಾವುಟವನ್ನ ನೀಡೋ ಮೂಲಕ ನಳಿನ್ ಕುಮಾರ್ ಕಟೀಲು ಅಧಿಕಾರ ಹಸ್ತಾಂತರ ಮಾಡಿದ್ರು. ಬಿ.ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಮಧ್ಯಪ್ರದೇಶದಲ್ಲಿದ್ದ ಸಿ.ಟಿ ರವಿ ಸೇರಿದಂತೆ ಸೋಮಣ್ಣ, ಯತ್ನಾಳ್, ಅರವಿಂದ್ ಬೆಲ್ಲದ್ ಸಮಾರಂಭಕ್ಕೆ ಗೈರಾಗಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:59 pm, Wed, 15 November 23