AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಭಾರೀ ಮಳೆ: ಮೆಟ್ರೋ ತಡೆಗೋಡೆ ಕುಸಿತ, 6 ಕಾರು, 2 ಬೈಕ್ ಜಖಂ

ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ರಸ್ತೆಗಳು ಜಲಾವೃತವಾಗಿದ್ದು, ನಮ್ಮ ಮೆಟ್ರೋ ತಡೆಗೋಡೆ ಕುಸಿದಿದೆ,

ಬೆಂಗಳೂರಲ್ಲಿ ಭಾರೀ ಮಳೆ: ಮೆಟ್ರೋ ತಡೆಗೋಡೆ ಕುಸಿತ, 6 ಕಾರು, 2 ಬೈಕ್ ಜಖಂ
metro compound collapsed
TV9 Web
| Edited By: |

Updated on: Oct 20, 2022 | 12:19 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ವರುಣಾರ್ಭಟ ಮುಂದುವರಿದಿದೆ. ಅವಾಂತರಗಳ ಸರಮಾಲೆಯೇ ಸೃಷ್ಟಿಯಾಗುತ್ತಿದ್ದು, ಇಂದು(ಅ.19) ಮೆಟ್ರೋ ಕಾಂಪೌಂಡ್ ಕುಸಿದಿದೆ. ಬೆಂಗಳೂರಿನ ಮಂತ್ರಿಮಾಲ್ ಸಮೀಪದ ಜೆಡಿಎಸ್ ಕೇಂದ್ರ ಕಚೇರಿ ಮುಂಭಾಗದ ಮೆಟ್ರೋ ತಡೆಗೋಡೆ ಕುಸಿದಿದ್ದು, ಕಾರು, ಬೈಕ್​ಗಳು ಜಖಂಗೊಂಡಿವೆ.

ತಡೆಗೋಡೆಯ ಪಕ್ಕದಲ್ಲಿ ಕಾರು ಹಾಗೂ ಬೈಕ್​ಗಳನ್ನು ನಿಲ್ಲಿಸಲಾಗಿತ್ತು. ಆದ್ರೆ, ಮೆಟ್ರೋ ತಡೆಗೋಡೆ ಕುಸಿತದಿಂದ 6 ಕಾರುಗಳು ಹಾಗೂ ಎರಡು ಬೈಕ್​ಗೆ ಹಾನಿಯಾಗಿದೆ. ಇದರಿಂದ ವಾಹನದ ಮಾಲೀಕರು ಕಂಗಾಲಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಬಹುತೇಕ ಬೆಂಗಳೂರಿನ ಎಲ್ಲಾ ಅಂಡರ್​​ಪಾಸ್​ಗಳಲಿ ನೀರು ತಂಬಿ ನಂದಿಯಂತಾಗಿವೆ. ಇನ್ನು ಚಿಕ್ಕಪೇಟೆ, ಸುಲ್ತಾನ್ ಪೇಟೆಯಲ್ಲಿ ಹಲವು ಅಂಗಡಿಗಳು ಜಲಾವೃತವಾಗಿ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ.

ವಿಲ್ಸನ್ ಗಾರ್ಡ್, ಶಾಂತಿನಗರ, ಶಿವಾನಂದ ಸರ್ಕಲ್ ಸೇರಿದಂತೆ ಹಲವು ಕಡೆಗಳಲ್ಲಿ ಧಾರಾಕಾರ ಮಳೆಗೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಮೇಲೆ ಸುಮಾರು ಎರಡು ಅಡಿಯಷ್ಟು ನೀರು ನಿಂತಿದೆ. ಇದರಿಂದ ವಾಹನ ಸವಾರು ಪರದಾಡುವಂತಾಗಿದೆ.

ಇನ್ನೂ 5 ದಿನ ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ ಮುಂದಿನ ಐದು ದಿನ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲೂ ಇನ್ನೂ 5 ದಿನ ಮಳೆಯ ಎಚ್ಚರಿಕೆ ನೀಡಲಾಗಿದೆ. ತಗ್ಗು ಪ್ರದೇಶ ಹಾಗೂ ರಾಜಾಕಾಲುವೆ ಅಕ್ಕಪಕ್ಕದಲ್ಲಿ ವಾಸಿಸುವ ಜನರು ಜಾಗ್ರತೆಯಿಂದ ಇರಬೇಕಿದೆ.

Follow Us
TV9 Web
TV9 Web

TV9 Kannada

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ