AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Bengaluru Habba: ಮಾರ್ಚ್​ 25, 26ಕ್ಕೆ ನಮ್ಮ ಬೆಂಗಳೂರು ಹಬ್ಬ ಆಯೋಜನೆ

ಬೆಂಗಳೂರಿನ ಸಂಸ್ಕೃತಿ ಮತ್ತು ವಿಕಸನವನ್ನು ನಗರದಲ್ಲಿ ನೆಲೆಸಿರುವ ಪರ ಭಾಷಿಕರಿಗೆ ಮತ್ತು ನಾಡಿನ ಜನರಿಗೆ ಪರಿಚಯಿಸಲು ಉದ್ದೇಶದಿಂದ ನಮ್ಮ ಬೆಂಗಳೂರು ಹಬ್ಬವನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್​ ಹೇಳಿದ್ದಾರೆ.

Namma Bengaluru Habba: ಮಾರ್ಚ್​ 25, 26ಕ್ಕೆ ನಮ್ಮ ಬೆಂಗಳೂರು ಹಬ್ಬ ಆಯೋಜನೆ
ನಮ್ಮ ಬೆಂಗಳೂರು ಹಬ್ಬ ಲಾಂಛನ ಬಿಡುಗಡೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 22, 2023 | 10:23 AM

Share

ಬೆಂಗಳೂರು: ಬೆಂಗಳೂರಿನ ಸಂಸ್ಕೃತಿ ಮತ್ತು ವಿಕಸನವನ್ನು ನಗರದಲ್ಲಿ ನೆಲೆಸಿರುವ ಪರ ಭಾಷಿಕರಿಗೆ ಮತ್ತು ನಾಡಿನ ಜನರಿಗೆ ಪರಿಚಯಿಸಲು ಉದ್ದೇಶದಿಂದ ನಮ್ಮ ಬೆಂಗಳೂರು ಹಬ್ಬವನ್ನು (Namma Bengaluru Habba) ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್​ ಅಶೋಕ್​ (R Ashok) ಹೇಳಿದ್ದಾರೆ. ಮಾರ್ಚ್​ 25 ಮತ್ತು 26 ರಂದು ಎರಡು ದಿನಗಳ ಕಾಲ ನಡೆಯಲಿದೆ. ಕಾರ್ಯಕ್ರಮವು ಕಬ್ಬನ್​ ಪಾರ್ಕ್​ ಮತ್ತು ವಿಧಾನಸೌಧ ಸುತ್ತ ಮುತ್ತ ನಡೆಯಲಿದೆ. ಈ ಹಬ್ಬದಲ್ಲಿ ನಾಟಕ, ಕಲೆ, ಸಾಂಪ್ರದಾಯಿಕ, ನೃತ್ಯ ಮತ್ತು ಸಾಂಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ವಿಧಾನಸೌಧದಲ್ಲಿ ಬೆಂಗಳೂರು ಹಬ್ಬದ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು ಈ ವರ್ಷ ಸಮಯಾವಕಾಶದ ಕೊರತೆಯಿಂದ ಚಿಕ್ಕ ಪ್ರಮಾಣದಲ್ಲಿ ಮಾಡಲಾಗುತ್ತಿದೆ. ಬರುವ ವರ್ಷದಲ್ಲಿ ಮೈಸೂರು ದಸರಾ ರೀತಿ ಅದ್ಧೂರಿಯಾಗಿ ಮಾಡಲಾಗುವುದು. ಈ ಬೆಂಗಳೂರು ಹಬ್ಬವನ್ನು ಮಾರ್ಚ್​ ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಶಾಕ್​, ಮಾರುಕಟ್ಟೆಯಲ್ಲಿ ಹೆಚ್ಚಿದ ಹೂ, ಹಣ್ಣುಗಳ ಬೆಲೆ

ಇನ್ನು ವಿಧಾನಸೌಧದ ಮುಂಭಾಗದಲ್ಲಿ ನಿರ್ಮಾಣಗೊಂಡಿರುವ ನಾಡಪ್ರಭು ಕೆಂಪೇಗೌಡ ಮತ್ತು ಜಗಜ್ಯೋತಿ ಬಸವೇಶ್ವರ ಅವರ ಪ್ರತಿಮೆಯನ್ನು ಮಾರ್ಚ್​ 26ರಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಲೋಕಾರ್ಪಣೆಗೊಳಿಸಲಿದ್ದಾರೆ. ಬೆಂಗಳೂರಿನ ಸಂಸ್ಕೃತಿ ಮತ್ತು ಪರಿವರ್ತನೆಯನ್ನು ಪ್ರದರ್ಶಿಸುವುದು ಉತ್ಸವದ ಉದ್ದೇಶವಾಗಿದೆ. ನಗರಕ್ಕೆ ಬರುವವರೆಲ್ಲರೂ ಬೆಂಗಳೂರಿಗರಾಗಬೇಕು ಮತ್ತು ಅದರ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡಬೇಕು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿ ಬೆಂಗಳೂರು ಹಬ್ಬವನ್ನು ಆಯೋಜಿಸಲಾಗಿದ್ದು, ಇಲಾಖೆಯ ಅಧಿಕಾರಿಗಳು ಮಾತನಾಡಿ, ಬೆಂಗಳೂರು ಹಬ್ಬವನ್ನು ನಡೆಸಲು ಬಹಳ ಸಮಯದಿಂದ ನಡೆಸಲು ಚಿಂತನೆ ನಡೆಸಲಾಗಿತ್ತು. ಆದರೆ ಅನುಮತಿ ಮತ್ತು ನಿಧಿಯ ಸಮಸ್ಯೆಯಿಂದ ವಿಳಂಬಾಯ್ತು. ಈಗ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಅದರ ಪ್ರಕಾರ ಮುಂದಿನ ವರ್ಷದ ಬೆಂಗಳೂರು ಹಬ್ಬಕ್ಕೆ ಆರು ತಿಂಗಳ ಮೊದಲು ಸಮಿತಿಯನ್ನು ರಚಿಸಲಾಗುವುದು, ಈ ಸಮಿತಿಯು ಎಲ್ಲ ವ್ಯವಸ್ಥೆಗಳು ನೋಡಿಕೊಳ್ಳಲಿದೆ.

ಅಲ್ಲದೆ ಮುಂದಿನ ವರ್ಷದಿಂದ ಜನವರಿಯಲ್ಲಿ ಸಂಕ್ರಾಂತಿ ವಾರದ ಮೊದಲ ಶನಿವಾರ ಮತ್ತು ಭಾನುವಾರದಂದು ಬೆಂಗಳುರು ಹಬ್ಬವನ್ನು ಆಯೋಜಿಸಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ