AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ?

ನಮ್ಮ ಮೆಟ್ರೋದಲ್ಲಿ ಸೀಲ್ಡ್ ಮದ್ಯದ ಬಾಟಲಿಗಳನ್ನು ಸಾಗಿಸಲು ಶೀಘ್ರದಲ್ಲೇ ಅನುಮತಿ ನೀಡುವ ಸಾಧ್ಯತೆ ಇದೆ. BMRCL ಈ ಕುರಿತು ಸಮಾಲೋಚನೆ ನಡೆಸುತ್ತಿದ್ದು, ದೆಹಲಿ ಮೆಟ್ರೋದ ಮಾದರಿಯನ್ನು ಅನುಸರಿಸಲು ಚಿಂತಿಸುತ್ತಿದೆ. ಹಾಗಿದ್ದರೆ ಯಾವಾಗಿನಿಂದ ಈ ಅವಕಾಶ ಪ್ರಯಾಣಿಕರಿಗೆ ಸಿಗುವ ಸಾಧ್ಯತೆ ಇದೆ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ?
ನಮ್ಮ ಮೆಟ್ರೋ ರೈಲುImage Credit source: Google
ಪ್ರಸನ್ನ ಹೆಗಡೆ
|

Updated on:Feb 18, 2026 | 3:59 PM

Share

ಬೆಂಗಳೂರು, ಫೆಬ್ರವರಿ 18: ಮದ್ಯಪ್ರಿಯರಿಗೆ ಬಿಎಂಆರ್​​ಸಿಎಲ್​ ಶೀಘ್ರವೇ ಶುಭಸುದ್ದಿ ಕೊಡುವ ನಿರೀಕ್ಷೆ ಇದ್ದು, ಸೀಲ್ಡ್ ಮಾಡಿರುವ ಮದ್ಯದ ಬಾಟಲಿಗಳನ್ನು ನಮ್ಮ ಮೆಟ್ರೋ ರೈಲುಗಳಲ್ಲಿ ಸಾಗಿಸಲು ಅನುಮತಿ ನೀಡುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮೂಲಗಳ ಪ್ರಕಾರ, ಈ ವಿಷಯವನ್ನು ಹಲವು ಬಾರಿ ಚರ್ಚಿಸಲಾಗಿದ್ದು, ಇತ್ತೀಚಿನ ಸಭೆಯಲ್ಲಿಯೂ ಮತ್ತೆ ಪ್ರಸ್ತಾಪಿಸಲಾಗಿದೆ. ತಾತ್ವಿಕ ಅನುಮತಿ ದೊರೆತಿದ್ದರೂ, ಜಾರಿಗೆ ಬರಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎನ್ನಲಾಗಿದೆ.

ದೆಹಲಿ ಮಾದರಿಯನ್ನು ನಮ್ಮ ಮೆಟ್ರೋದಲ್ಲಿಯೂ ಅನುಸರಿಸುವ ಬಗ್ಗೆ ಚರ್ಚೆ ನಡೆದಿದೆ. ಪ್ರಸ್ತುತ ದೆಹಲಿ ಮೆಟ್ರೋದ ಏರ್‌ಪೋರ್ಟ್ ಮಾರ್ಗದಲ್ಲಿ ಮದ್ಯ ಸಾಗಿಸಲು ಅನುಮತಿ ಇದೆ. ನಮ್ಮ ಮೆಟ್ರೋ ಏರ್‌ಪೋರ್ಟ್‌ಗೆ ಸಂಪರ್ಕ ಹೊಂದಿದ ಬಳಿಕ, ರಾಜ್ಯದಲ್ಲಿಯೂ ಮೆಟ್ರೋಗಳಲ್ಲಿ ಮದ್ಯ ಸಾಗಾಟಕ್ಕೆ ಅನುಮತಿ ನೀಡುವ ಬಗ್ಗೆ ಸಮಾಲೋಚನೆ ನಡೆದಿದೆ. BMRCL ಅಧಿಕಾರಿಗಳ ಪ್ರಕಾರ ಮದ್ಯದ ಬಾಟಲಿ ಸಾಗಿಸಲು ಯಾವುದೇ ವಿಶೇಷ ಅನುಮತಿ ಅಥವಾ ಪ್ರತ್ಯೇಕ ಪರವಾನಗಿ ಅಗತ್ಯವಿಲ್ಲ. ಅನುಮೋದನೆ ಸಿಕ್ಕ ಬಳಿಕ ಮೆಟ್ರೋ ನಿಯಮಾವಳಿಗಳಲ್ಲಿ ಅಗತ್ಯ ತಿದ್ದುಪಡಿ ನಡೆಯಲಿದೆ.

ಇದನ್ನೂ ಓದಿ: ಪಿಂಕ್ ಲೈನ್ ಮೆಟ್ರೋ ಆರಂಭ ಯಾವಾಗ? ಮಹತ್ವದ ಮಾಹಿತಿ ಹಂಚಿಕೊಂಡ ಬಿಎಂಆರ್​ಸಿಎಲ್

ನಮ್ಮ ಮೆಟ್ರೋದಲ್ಲಿ ಮದ್ಯ ಸಾಗಿಸಲು ಪ್ರಸ್ತುತವಾಗಿ ಅನುಮತಿ ಇಲ್ಲ. ಹೀಗಿದ್ದರೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಮೆಟ್ರೋದಲ್ಲಿ ಮದ್ಯ ಸೇವಿಸಿರುವವರು ಪ್ರಯಾಣಿಸಬಹುದು. ಆದರೆ ಸೇವನೆ ಅನುಮತಿಸಿದ ಮಿತಿಯೊಳಗೇ ಇರಬೇಕು ಎಂದಿದ್ದರೂ ಆ ಕುರಿತ ಸ್ಪಷ್ಟ ವಿವರಣೆ ನೀಡಲಾಗಿಲ್ಲ. ಪ್ರಯಾಣಿಕರು ಅಸಭ್ಯವಾಗಿ ವರ್ತಿಸಬಾರದು ಅಥವಾ ಇತರರಿಗೆ ಅಸೌಕರ್ಯ ಉಂಟುಮಾಡಬಾರದು ಎಂಬುದೇ ಈ ನಿಯಮದ ಉದ್ದೇಶ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಮದ್ಯ ಸಾಗಿಸಲು ಏಕೆ ನಿಷೇಧ ಎಂಬ ಪ್ರಶ್ನೆ ಕೇಳಿಬರುತ್ತಿದೆ. ರೈಲಿನೊಳಗೆ ತಿನ್ನುವುದು ಮತ್ತು ಕುಡಿಯುವುದಕ್ಕೆ ಅನುಮತಿ ಇಲ್ಲದಿದ್ದರೂ ಸೀಲ್ಡ್ ಮಾಡಿದ ಬಾಟಲಿಯನ್ನು ಸಾಮಾನ್ಯ ಸರಕುಗಳಂತೆ ಸಾಗಿಸಲು ತೊಂದರೆ ಇರಬಾರದು ಎಂಬ ಅಭಿಪ್ರಾಯ ವ್ಯಕ್ತವಾಗಿವೆ. ಕೆಲವೆಡೆ ಭದ್ರತಾ ಸಿಬ್ಬಂದಿ ಬಾಟಲಿಗಳನ್ನು ಸಾಗಿಸಲು ಅವಕಾಶ ನೀಡಿದ ಉದಾಹರಣೆಗಳೂ ಇವೆ ಎಂದು ಅಧಿಕಾರಿಗಳು ತಿಳಿಸಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:53 pm, Wed, 18 February 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ