AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ನಮ್ಮ ಮೆಟ್ರೋ ರೈಲು ಸಂಚಾರಕ್ಕೆ 10 ವರ್ಷ ಪೂರ್ಣ! ಪ್ರಯಾಣಿಕರಿಗೆ ಕೃತಜ್ಞತೆ

Namma Metro: ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೊದಲಿಗೆ ಮೆಟ್ರೋ ಸಂಚಾರ ಆರಂಭ ಆಗಿತ್ತು. 6 ಕಿ.ಮೀ. ಮಾರ್ಗದಲ್ಲಿ ಮೊದಲ ಬಾರಿಗೆ ಮೆಟ್ರೋ ಸಂಚರಿಸಿತ್ತು.

Bengaluru Metro: ನಮ್ಮ ಮೆಟ್ರೋ ರೈಲು ಸಂಚಾರಕ್ಕೆ 10 ವರ್ಷ ಪೂರ್ಣ! ಪ್ರಯಾಣಿಕರಿಗೆ ಕೃತಜ್ಞತೆ
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 20, 2021 | 3:42 PM

Share

ಬೆಂಗಳೂರು: ನಮ್ಮ ಮೆಟ್ರೋ (Namma Metro) ಸಂಚಾರಕ್ಕೆ 10 ವರ್ಷ ಪೂರ್ಣವಾಗಿದೆ. 2011 ರ ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕಾರ್ಯಾರಂಭವಾಗಿತ್ತು. ಅಂದು ಹಳಿಗೆ ಇಳಿದಿದ್ದ ನಮ್ಮ ಮೆಟ್ರೋ ರೈಲು ಇಂದಿಗೆ 10 ವರ್ಷಗಳನ್ನು ಪೂರೈಸಿಕೊಂಡಿದೆ. ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಮೊದಲಿಗೆ ಮೆಟ್ರೋ ಸಂಚಾರ ಆರಂಭ ಆಗಿತ್ತು. 6 ಕಿ.ಮೀ. ಮಾರ್ಗದಲ್ಲಿ ಮೊದಲ ಬಾರಿಗೆ ಮೆಟ್ರೋ ಸಂಚರಿಸಿತ್ತು.

ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಿಕರು, ಮೆಟ್ರೋಗೆ ಭೂಮಿ ನೀಡಿದವರಿಗೆ ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್​ ಕೃತಜ್ಞತೆ ಸಮರ್ಪಣೆ ಮಾಡಿದ್ದಾರೆ. ಪ್ರಸ್ತುತ 56 ಕಿ.ಮೀ. ನಮ್ಮ ಮೆಟ್ರೋ ಸಂಚಾರ ನಡೆಸುತ್ತಿದೆ. ಇದನ್ನು 175 ಕಿ.ಮೀ.ಗೆ ವಿಸ್ತರಿಸಬೇಕೆಂಬುದು ನಮ್ಮ ಉದ್ದೇಶ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ 2024ರ ಡಿಸೆಂಬರ್​​ ವೇಳೆಗೆ ಈ ಮೆಟ್ರೋ ಕಾಮಗಾರಿ ಪೂರ್ಣ ಆಗಲಿದೆ. 175 ಕಿ.ಮೀ. ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ಬಿಎಂಆರ್​ಸಿಎಲ್​ ಎಂಡಿ ಅಂಜುಂ ಪರ್ವೇಜ್​ ಹೇಳಿದ್ದಾರೆ.

855 ಮೀಟರ್ ಸುರಂಗ ಕೊರೆದ ವಿಂದ್ಯಾ ಯಂತ್ರ ಅಕ್ಟೋಬರ್ 13 ರಂದು ನಮ್ಮ ಮೆಟ್ರೋ ಮತ್ತೊಂದು ಟಿಬಿಎಂ ಬ್ರೇಕ್​ ಥ್ರೂ ಪಡೆದುಕೊಂಡಿದೆ. ‘ವಿಂದ್ಯಾ’ ಯಂತ್ರ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದಿದೆ. ಕಳೆದ ತಿಂಗಳು ಹೊರಬಂದಿದ್ದ ಟಿಬಿಎಂ ‘ಊರ್ಜಾ’ ಯಂತ್ರ, ಸುರಂಗ ಕೊರೆಯಲು ಯಶಸ್ವಿಯಾಗಿತ್ತು. ಅಕ್ಟೋಬರ್ 13 ರಂದು 2ನೇ ಯಂತ್ರ ವಿಂದ್ಯಾ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದಿದೆ. ಕಂಟೋನ್ಮೆಂಟ್​ನಿಂದ ಶಿವಾಜಿನಗರದವರೆಗೆ ಸುರಂಗ ಮಾರ್ಗ ಕೊರೆಯಲಾಗಿದೆ. 855 ಮೀಟರ್​ ಸುರಂಗ ಕೊರೆದು ವಿಂದ್ಯಾ ಯಂತ್ರ ಹೊರಬಂದಿದೆ.

ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮೊದಲು ಸೂಚನೆ ನೀಡಿದ್ದರು. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ರೈಲಿನಲ್ಲಿ ಬಾಲಕನ ಉಯ್ಯಾಲೆ ಆಟ; ವಿಡಿಯೋ ವೈರಲ್

ಇದನ್ನೂ ಓದಿ: ಮೆಟ್ರೋ ಕಾಮಗಾರಿ ನಡೆಯುತ್ತಿರುವ ಟ್ಯಾನರಿ ರಸ್ತೆಯಲ್ಲಿ 30 ಅಡಿ ಮಣ್ಣು ಕುಸಿತ, ಪರಿಹಾರ ಕೇಳಿದ ಜಾಗದ ಮಾಲೀಕ

Published On - 3:40 pm, Wed, 20 October 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್