Namma Metro: ಮೆಟ್ರೋದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ ಕಾಮುಕರಿಗೆ ಚಾಟಿ ಬೀಸಿದ BMRCL, ಮಹತ್ವದ ನಿರ್ಧಾರ

ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ ಮಹಿಳೆಯರ ಮೇಲಿನ ಅನುಚಿತ ವರ್ತನೆ ಹೆಚ್ಚಾಗುತ್ತಿದೆ. ಹೀಗಾಗಿ ಮೆಟ್ರೋದಲ್ಲಿ ಮಹಿಳೆಯರ ಮೇಲಿನ ಅನುಚಿತ ವರ್ತನೆ ಕಡಿವಾಣಕ್ಕೆ ದಂಡ ಪರಿಷ್ಕರಣೆ ‌ಮಾಡಿದ ಬಿಎಂಆರ್​ಸಿಎಲ್. ಅನುಚಿತವಾಗಿ ವರ್ತಿಸಿದರೆ 10 ಸಾವಿರ ದಂಡ ಕಟ್ಟಬೇಕಾಗುತ್ತೆ.

Namma Metro: ಮೆಟ್ರೋದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ ಕಾಮುಕರಿಗೆ ಚಾಟಿ ಬೀಸಿದ BMRCL, ಮಹತ್ವದ ನಿರ್ಧಾರ
ನಮ್ಮ ಮೆಟ್ರೋ
Follow us
| Updated By: ಆಯೇಷಾ ಬಾನು

Updated on: Jan 31, 2024 | 1:40 PM

ಬೆಂಗಳೂರು, ಜ.31: ಇತ್ತೀಚೆಗೆ ನಮ್ಮ ಮೆಟ್ರೋದಲ್ಲಿ (Namma Metro) ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನಡೆಯುತ್ತಿರುವ ಬಗ್ಗೆ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಈ ಬಗ್ಗೆ ಟಿವಿ9 ಕೂಡ ವರದಿ ಮಾಡಿತ್ತು. ಸದ್ಯ ಈಗ ಮಹಿಳೆಯರ ಸೇಫ್ಟಿಗಾಗಿ ಬಿಎಂಆರ್​ಸಿಎಲ್ (BMRCL) ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇನ್ಮುಂದೆ ನಮ್ಮ ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರುವ ಮುನ್ನ ಪುರುಷರು ಹತ್ತಾರು ಬಾರಿ ಯೋಜಿಸಬೇಕು. ಏಕೆಂದರೆ ಇದೀಗ ದಂಡದ ಮೊತ್ತವನ್ನು 10 ಸಾವಿರಕ್ಕೆ ಏರಿಸಲಾಗಿದೆ. ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನೀಡುವುದು ಅಥವಾ ನಿಯಮ ಉಲ್ಲಂಘನೆ ಮಾಡಿದರೆ 10 ಸಾವಿರ ದಂಡ ಪಾವತಿಸಬೇಕು. ಜೊತೆಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗುತ್ತೆ.

ಬೆಂಗಳೂರು ಮೆಟ್ರೋದಲ್ಲಿ ಮಹಿಳೆಯರಿಗೆ ಸಾಲು ಸಾಲು ಲೈಂಗಿಕ ಕಿರುಕುಳ ಬಳಿಕ ಎಚ್ಚೆತ್ತುಕೊಂಡ ಬಿಎಂಆರ್​ಸಿಎಲ್ ಮೆಟ್ರೋದಲ್ಲಿ ಮಿತಿಮೀರುತ್ತಿರುವ ಅಸಭ್ಯ ವರ್ತನೆಗೆ ಕಡಿವಾಣ ಹಾಕಲು ಮುಂದಾಗಿದೆ. ಇನ್ಮುಂದೆ ನಮ್ಮ ಮೆಟ್ರೋದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ರೆ ಭಾರೀ ದಂಡ ಕಟ್ಬೇಕು. ದಂಡ ಪರಿಷ್ಕರಣೆ ಮಾಡಿ ಬಿಎಂಆರ್​ಸಿಎಲ್ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ದಂಡ ಪರಿಷ್ಕರಣೆ ಮಾಡಲಾಗಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಸಾಲು ಸಾಲು ಅವಘಡ; ಎಚ್ಚೆತ್ತ ಬಿಎಂಆರ್​ಸಿಎಲ್, ಪ್ರಯಾಣಿಕರ ಸುರಕ್ಷತೆಗೆ ಫ್ಲಾಟ್ ಫಾರ್ಮ್ ಸ್ಕ್ರೀನ್ ಡೋರ್ ನಿರ್ಮಾಣ

ಕಳೆದ ಕೆಲ ದಿನಗಳ ಹಿಂದೆ ಮೆಟ್ರೋ ಪ್ರಯಾಣದ ವೇಳೆ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಅಸಭ್ಯ ವರ್ತನೆ ತೋರಿದ ಬಗ್ಗೆ ಪ್ರಕರಣಗಳು ದಾಖಲಾಗಿದ್ದವು. ಪದೇ ಪದೇ ಈ ರೀತಿಯ ವರ್ತನೆಗಳು ಮರುಕಳಿಸಿದರಿಂದ ಮೆಟ್ರೋ ಹತ್ತೋಕೆ ಮಹಿಳಾ ಪ್ರಯಾಣಿಕರು ಹಿಂದೇಟು ಹಾಕುತ್ತಿದ್ದರು. ಹೀಗಾಗಿ ಅನುಚಿತ ವರ್ತನೆ ಮಾಡುವವರ ಮೇಲೆ ಬಿಎಂಆರ್​ಸಿಎಲ್ ದಂಡಾಸ್ತ್ರ ಪ್ರಯೋಗಿಸಿದೆ. ಇನ್ಮೇಲೆ ಮಹಿಳೆಯರ ಮೇಲೆ ಅನುಚಿತ ವರ್ತನೆ ತೋರಿದ್ರೆ 500 ಅಲ್ಲ ಬರೋಬ್ಬರಿ 10,000 ದಂಡ ಕಟ್ಬೇಕು. ಈ ಮೊದಲು ಅನುಚಿತ ವರ್ತನೆ ತೋರಿದ್ರೆ ಮೆಟ್ರೋ ಆಕ್ಟ್ ಪ್ರಕಾರ 500 ರೂಪಾಯಿ ದಂಡ ಹಾಕಲಾಗ್ತಿತ್ತು. ಇದೀಗ ದಂಡದ ಮೊತ್ತವನ್ನು 10 ಸಾವಿರಕ್ಕೆ ಏರಿಸಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ