Namma Metro: ಮೆಟ್ರೋದಲ್ಲಿ ಸಿಕ್ಕ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್​, ಪ್ರಾಮಾಣಿಕತೆಗೆ ಮೆಚ್ಚುಗೆ

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

ಹೋಂಗಾರ್ಡ್ಸ್​Image Credit source: Indian Express
Follow us
Kiran Surya
| Updated By: ನಯನಾ ರಾಜೀವ್

Updated on:Nov 29, 2023 | 11:20 AM

ಚಿನ್ನಕಂಡಾಕ್ಷಣ ಯಾರದ್ದಾದರೇನು ಎಂದು ತೆಗೆದುಕೊಂಡು ಹೋಗುವವರೇ ಹೆಚ್ಚು, ಅಂತಹ ಸಮಯದಲ್ಲಿ ಚಿನ್ನದುಂಗುರವನ್ನು ಮಾಲೀಕರಿಗೆ ಒಪ್ಪಿಸಿದ ಹೋಂಗಾರ್ಡ್ಸ್(Home Guards) ಪ್ರಾಮಾಣಿಕತೆಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದ ಹೊಸ ಶಾಖೆಯಲ್ಲಿ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿರುವ ದಿವ್ಯಾ ಪ್ರಿಯದರ್ಶಿನಿ ಎಂಬುವವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಮೆಟ್ರೋ ನಿಲ್ದಾಣದಿಂದ ಬೆನ್ನಿಗಾನಹಳ್ಳಿ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು.

ಅಲ್ಲಿಂದ ತಮ್ಮ ಬ್ಯಾಂಕ್​ಗೆ ಹೋಗಿದ್ದಾರೆ, ಬೆನ್ನಿಗಾನಹಳ್ಳಿ ನಿಲ್ದಾಣದಿಂದ ಹೊರಡುವಾಗ ಉಂಗುರ ಇಲ್ಲದಿರುವುದು ಗೊತ್ತಾಗಿದೆ. ತಕ್ಷಣವೇ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ಕೊಟ್ಟಿದ್ದರು.

ಅಲ್ಲಿದ್ದ ಹೋಂಗಾರ್ಡ್ಸ್​ ಚಿನ್ನದ ಉಂಗುರ ಸಿಕ್ಕದ ತಕ್ಷಣ ಅದನ್ನು ಸಹಾಯಕ ಸುರಕ್ಷತಾ ಅಧಿಕಾರಿಗೆ ಒಪ್ಪಿಸಿದ್ದಾರೆ. ಸೋಮವಾರ ಸಂಜೆ 6.45ರ ಸುಮಾರಿಗೆ ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣದ 2ನೇ ಪ್ಲಾಟ್​ಫಾರ್ಮ್​ನಲ್ಲಿ ರೈಲು ನಿಂತಾಗ ರೈಲಿನ ಲೇಡಿಸ್ ಕೋಚ್ ಬಳಿ ಉಂಗುರು ಬಿದ್ದಿತ್ತು.

ಮತ್ತಷ್ಟು ಓದಿ: ನಮ್ಮ ಮೆಟ್ರೋ 3ನೇ ಹಂತ: ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ ಬಿಎಂಆರ್​ಸಿಎಲ್

ಆ ಉಂಗುರವನ್ನು ಗಮನಿಸಿದ ಹೋಂಗಾರ್ಡ್‌ಗಳಾದ ಶಿಲ್ಪಾ ಜಿ ಆರ್ ಮತ್ತು ಈಶ್ವರಮ್ಮ ಅವರು ಬಿಎಂಆರ್​ಸಿಎಲ್ ಸಹಾಯಕ ಸುರಕ್ಷತಾ ಅಧಿಕಾರಿ ಕೆಎನ್​ ರಾಜಣ್ಣ ಅವರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಆ ಉಂಗುರವನ್ನು ದಿವ್ಯಾ ಅವರಿಗೆ ನೀಡಲಾಗಿದೆ, ಹೋಂ​ ಗಾರ್ಡ್ಸ್​ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಉಂಗುರ ಸುಮಾರು 30 ಸಾವಿರ ರೂ.ನಷ್ಟು ಬೆಲೆಬಾಳುವಂಥದ್ದಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Wed, 29 November 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್