AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ: 15 ನಿಮಿಷ ನಿಂತಲ್ಲೇ ನಿಂತ ರೈಲುಗಳು

ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಇಂದು (ಮೇ 5) ಸೇವಾ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆಯ ಕಾರಣ 15 ನಿಮಿಷಗಳ ಕಾಲ ರೈಲುಗಳು ನಿಂತಲ್ಲೇ ನಿಂತಿದ್ದು, ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವಿಷಯ ಹಂಚಿಕೊಂಡಿದ್ದಾರೆ. ಆ ಬೆನ್ನಲ್ಲೇ ಮೆಟ್ರೋ ಕಾರ್ಯಾಚರಣೆಯಲ್ಲಿ ಉಂಟಾಗಿದ್ದ ವ್ಯತ್ಯಯದ ಬಗ್ಗೆ ಬಿಎಂಆರ್​ಸಿಎಲ್ ಮಾಹಿತಿ ನೀಡಿದ್ದು, ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದಿದೆ.

ನಮ್ಮ ಮೆಟ್ರೋ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ: 15 ನಿಮಿಷ ನಿಂತಲ್ಲೇ ನಿಂತ ರೈಲುಗಳು
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on:May 05, 2026 | 7:51 PM

Share

ಬೆಂಗಳೂರು, ಮೇ 05: ಇವತ್ತೂ ಕೂಡ ನಮ್ಮ ಮೆಟ್ರೋ ನೇರಳೆ ಮಾರ್ಗದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಸುಮಾರು 15 ನಿಮಿಷಗಳ ಕಾಲ ನೇರಳೆ ಮಾರ್ಗದ ಕುಂದಲಹಳ್ಳಿ ಸ್ಟೇಷನ್​ನಲ್ಲಿ ಮೆಟ್ರೋ ರೈಲುಗಳು ನಿಂತಲ್ಲೇ ನಿಂತಿರುವ ಬಗ್ಗೆ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.  ಆ ಬೆನ್ನಲ್ಲೇ ಈ ಬಗ್ಗೆ ಮಾಹಿತಿ ನೀಡಿರುವ ಬಿಎಂಆರ್​​ಸಿಎಲ್,​​ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ತಿಳಿಸಿದೆ.

  • ನಮ್ಮ ಮೆಟ್ರೋ ನೇರಳೆ ಮಾರ್ಗದ ಕಾರ್ಯಾಚರಣೆಯಲ್ಲಿ ವ್ಯತ್ಯಯ
  • 15 ನಿಮಿಷಗಳ ಕಾಲ ನಿಂತಲ್ಲೇ ನಿಂತ ಮೆಟ್ರೋ ರೈಲುಗಳು
  • ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡ ಪ್ರಯಾಣಿಕರು

ಇದನ್ನೂ ಓದಿ: ತಾಂತ್ರಿಕ ದೋಷದಿಂದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ಬಂದ್ ಆಗಿ ಪ್ರಯಾಣಿಕರ ಪರದಾಟ

ಪ್ರಯಾಣಿಕರ ಆಕ್ರೋಶ

ನಮ್ಮ ಮೆಟ್ರೋ ಸೇವೆಯಲ್ಲಿನ ವ್ಯತ್ಯಯದ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿ ಮಾಹಿತಿ ಹಂಚಿಕೊಂಡಿರುವ ಕೆಲ ಪ್ರಯಾಣಿಕರು ಈ ಬಗ್ಗೆ ಯಾವುದೇ ಮಾಹಿತಿಯನ್ನು ಸರಿಯಾಗಿ ನೀಡದ ಬಿಎಂಆರ್​​ಸಿಎಲ್​​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

BMRCL ಸ್ಪಷ್ಟನೆ

ಮೆಟ್ರೋ ಕಾರ್ಯಾಚರಣೆಯಲ್ಲಿ ಉಂಟಾಗಿದ್ದ ವ್ಯತ್ಯಯದ ಬಗ್ಗೆ ಬಿಎಂಆರ್​ಸಿಎಲ್ ಮಾಹಿತಿ ನೀಡಿದ್ದು, ಹೂಡಿ ಮೆಟ್ರೋ ನಿಲ್ದಾಣದಲ್ಲಿ ಇಂದು ಸಂಜೆ 5 ಗಂಟೆಯ ಸುಮಾರಿಗೆ ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಕಡಿಮೆ ವೇಗದಲ್ಲಿ ಅದನ್ನು ಬೈಯಪ್ಪನಹಳ್ಳಿಗೆ ತರಲಾಯಿತು. ಇದರಿಂದಾಗಿ ಹಿಂಬರುವ ರೈಲುಗಳ ಸೇವೆಯಲ್ಲಿ 3 ನಿಮಿಷ ವಿಳಂಬವಾಗಿದೆ. ನಿಲ್ದಾಣಗಳಲ್ಲಿ ಜನಸಂದಣಿಯನ್ನು ತೆರವುಗೊಳಿಸಲು ಮತ್ತು ರೈಲು ಕಾರ್ಯಾಚರಣೆಯನ್ನು ನಿಗದಿತ ವೇಳೆಗೆ ತರಲು ಶಾರ್ಟ್ ಲೂಪ್ ಕಾರ್ಯಾಚರಣೆ ನಡೆಸಲಾಗುವುದು. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ತಿಳಿಸಿದೆ.

ನಿನ್ನೆ ಕೆಲ ಕಾಲ ಬಂದ್​​ ಆಗಿದ್ದ ಕಬ್ಬನ್ ಪಾರ್ಕ್ ನಿಲ್ದಾಣ

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿರುವ ಪ್ರಮುಖ ನಿಲ್ದಾಣಗಳಲ್ಲಿ ಒಂದಾದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ನಿನ್ನೆ (ಮೇ 4) ಬೆಳಿಗ್ಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.ವಿದ್ಯುತ್ ವ್ಯತ್ಯಯದಿಂದಾಗಿ ಮೆಟ್ರೋ ನಿಲ್ದಾಣದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿತ್ತು. ಆ ಬಳಿಕ ಬೆಳಿಗ್ಗೆ 11 ಗಂಟೆಯಿಂದ ಮೆಟ್ರೋ ಸೇವೆಗಳು ಪುರರಾರಂಭಗೊಂಡಿತ್ತು.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:24 pm, Tue, 5 May 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಶಿವಲಿಂಗವನ್ನು ನೇರವಾಗಿ ಸ್ಪರ್ಶಿಸಿದ ಸೂರ್ಯ ರಶ್ಮಿ!
ಶಿವಲಿಂಗವನ್ನು ನೇರವಾಗಿ ಸ್ಪರ್ಶಿಸಿದ ಸೂರ್ಯ ರಶ್ಮಿ!
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ