AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ ಹೇಳಿದ್ದೇನು?

ನಮ್ಮ ಮೆಟ್ರೋ ದರ ಏರಿಕೆ ಮಾಡಿರುವುದು ಅವೈಜ್ಞಾನಿಕ, ಇದರಿಂದ ಪ್ರಯಾಣಿಕರ ಮೇಲೆ ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆಕ್ಷೇಪಿಸಿದ್ದಾರೆ. ಹೀಗಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್​​ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿ ಪುನರ್‌ ರಚನೆಗೆ ಒತ್ತಾಯಿಸಿದ್ದಾರೆ.

ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ ಹೇಳಿದ್ದೇನು?
ತೇಜಸ್ವಿ ಸೂರ್ಯ, ಮನೋಹರ್ ಲಾಲ್ ಖಟ್ಟರ್​​, ನಮ್ಮ ಮೆಟ್ರೋ Image Credit source: Tejasvi Surya X
ಗಂಗಾಧರ​ ಬ. ಸಾಬೋಜಿ
|

Updated on:Feb 05, 2026 | 7:19 PM

Share

ಬೆಂಗಳೂರು, ಫೆಬ್ರವರಿ 05: ದೇಶದಲ್ಲೇ ಅತ್ಯಂತ ದುಬಾರಿ ಎನಿಸಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ (Namma Metro) ಇದೀಗ ಮತ್ತೆ ದರ ಏರಿಕೆಗೆ ಮುಂದಾಗಿದೆ. ಶೇ.5ರಷ್ಟು ಮೆಟ್ರೋ ಟಿಕೆಟ್ ಪ್ರಯಾಣ ದರ ದುಬಾರಿಯಾಗಿದ್ದು, ಫೆಬ್ರವರಿ 9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಈಗಾಗಲೇ ಮೆಟ್ರೋ ಪ್ರಯಾಣಿಕರು ಬಿಎಂಆರ್​ಸಿಎಲ್​ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್​​ ಖಟ್ಟರ್​​ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ, ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಫೆ. 9ರಿಂದ ಮೆಟ್ರೋ ಪರಿಷ್ಕೃತ ಪ್ರಯಾಣ ದರ ಜಾರಿಯಾಗುತ್ತಿದೆ. ಆ ಮೂಲಕ ಸಾರ್ವಜನಿಕ ವ್ಯಾಪಕ ವಿರೋಧವನ್ನು ಕಡೆಗಣಿಸಿ, ಪ್ರಯಾಣಿಕರ ಮೇಲೆ ಅನಗತ್ಯ ಆರ್ಥಿಕ ಹೊರೆ ಹೇರುವುದಕ್ಕೆ ಮುಂದಾಗಿದೆ ಎಂದು ಕಿಡಿಕಾರಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಟ್ವೀಟ್

ಈ ವಿಷಯವನ್ನು ಕೇಂದ್ರ ವಸತಿ ಹಾಗೂ ನಗರ ವ್ಯವಹಾರ ಸಚಿವ ಎಂ.ಎಲ್​​ ಖಟ್ಟರ್​​ ಅವರನ್ನು ಇಂದು ಭೇಟಿ ಮಾಡಿ ವಿವರವಾಗಿ ಮಾಹಿತಿ ನೀಡಿದ್ದು, ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.

ದರ ನಿಗದಿ ಸಮಿತಿಗೆ ಸಲ್ಲಿಸಲಾದ ಲೆಕ್ಕಾಚಾರಗಳಲ್ಲಿ ಹಲವು ವೈಪರೀತ್ಯಗಳು ಇರುವುದನ್ನು ಗಮನಕ್ಕೆ ತರಲಾಗಿದ್ದು, ಅದರಲ್ಲೂ ಪ್ರಸ್ತುತ ವರ್ಷದಲ್ಲಿನ ದೋಷಗಳು ಸೇರಿವೆ. ಇದರಿಂದ ಪ್ರಯಾಣಿಕರಿಗೆ ಅಧಿಕ ದರ ವಿಧಿಸಲಾಗಿದ್ದು, ಗರಿಷ್ಠ ಟಿಕೆಟ್ ದರವನ್ನು 95 ರೂಪಾಯಿಗೆ ಏರಿಸಲಾಗಿದೆ.

ಇದನ್ನೂ ಓದಿ: Bengaluru Metro: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ, ಎಷ್ಟು ಹೆಚ್ಚಳ?

ಈ ದೋಷಪೂರ್ಣ ದರ ಪರಿಷ್ಕರಣೆಯನ್ನು ರಾಜ್ಯ ಸರ್ಕಾರ ಮುಂದುವರಿಸಲು ಅವಕಾಶ ನೀಡಬಾರದು. ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯವಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ದರ ಪರಿಷ್ಕರಿಸಲು ಹೊಸ ದರ ನಿಗದಿ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಈ ಕುರಿತಾಗಿ ಸಕಾರಾತ್ಮಕವಾಗಿ ಪರಿಗಣಿಸಲಾಗುವುದೆಂದು ಸಚಿವ ಎಂ.ಎಲ್​​ ಖಟ್ಟರ್ ಅವರು ಭರವಸೆ ನೀಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:39 pm, Thu, 5 February 26

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?