ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ನಮ್ಮ ಮೆಟ್ರೋ: ನೇರಳೆ ಮಾರ್ಗದಲ್ಲಿ ವಾರದ 5 ದಿನದಲ್ಲಿ ಹೆಚ್ಚುವರಿ ಟ್ರಿಪ್ಗೆ ನಿರ್ಧಾರ
ಪೀಕ್ ಅವರ್ನಲ್ಲಿ ಹೆಚ್ಚುವರಿ ಸೇವೆ ಕೊಡಲು ಬಿಎಂಆರ್ಸಿಎಲ್ ನಿರ್ಧರಿಸಿದ್ದು, ಸೆಪ್ಟೆಂಬರ್ 1 ರಿಂದ ಹೆಚ್ಚುವರಿ ಮೆಟ್ರೋ ಸೇವೆ ಆರಂಭಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಪ್ರಕಟಣೆಯಲ್ಲಿ ತಿಳಿಸಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ.
ಬೆಂಗಳೂರು, ಆಗಸ್ಟ್ 30: ಬೆಳಗಿನ ಜನದಟ್ಟಣೆಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಟ್ರಿಪ್ ಸೇವೆ ನೀಡುವುದಾಗಿ ಬಿಎಂಆರ್ಸಿಎಲ್ ನಿರ್ಧರಿಸಿದ್ದು, ಸೆಪ್ಟೆಂಬರ್ 1 ರಿಂದ ಹೆಚ್ಚುವರಿ ಟ್ರಿಪ್ (Namma Metro) ಸೇವೆ ಆರಂಭಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪ್ರಕಟಣೆಯಲ್ಲಿ ತಿಳಿಸಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ನೇರಳೆ ಮಾರ್ಗದಲ್ಲಿ ವಾರದ 5 ದಿನಗಳಲ್ಲಿ ಹೆಚ್ಚುವರಿ ಟ್ರಿಪ್ ಮೆಟ್ರೋ ಸೇವೆ ಬಗ್ಗೆ ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಟ್ರಿಪ್ ನಡೆಸಲಿರುವ ನಮ್ಮ ಮೆಟ್ರೋ, ಮೆಜೆಸ್ಟಿಕ್ ನಿಲ್ದಾಣದಿಂದ ಎಂ.ಜಿ ರೋಡ್ವರೆಗೆ ಹೆಚ್ಚುವರಿ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಬೈಯಪ್ಪನಹಳ್ಳಿಗೆ ತೆರಳುವವರು ಎಂ.ಜಿ ರೋಡ್ ನಿಲ್ದಾಣದಲ್ಲಿ ಇಳಿದು ಬಳಿಕ ಮತ್ತೊಂದು ರೈಲು ಹತ್ತಿ ತೆರಳಬಹುದಾಗಿದೆ.
ಇದನ್ನೂ ಓದಿ: ಮೆಟ್ರೋ ಕಾಮಗಾರಿಯಲ್ಲಿ ಮತ್ತೊಂದು ಮೈಲುಗಲ್ಲು: 721 ಮೀಟರ್ ಸುರಂಗ ಕೊರೆದು ಯಶಸ್ವಿಯಾಗಿ ಹೊರಬಂದ ವಮಿಕ ಯಂತ್ರ
ನಮ್ಮ ಮೆಟ್ರೋ ಕಾಮಗಾರಿ ಮತ್ತೊಂದು ಮೈಲುಗಲ್ಲು ತಲುಪಿದೆ. ಬೆಂಗಳೂರಿನ ಲ್ಯಾಂಗ್ಫೋರ್ಡ್ ಟೌನ್ ನಿಲ್ದಾಣದಲ್ಲಿ 721 ಮೀಟರ್ ಮೆಟ್ರೋ ಸುರಂಗ ಕೊರೆದು ವಮಿಕ ಯಂತ್ರ ಹೊರಬಂದಿದೆ ಎಂದು ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನಿಂದ ಪ್ರಕಟಣೆಯಲ್ಲಿ ತಿಳಿಸಿದೆ.
ಏಪ್ರಿಲ್ 21ರಂದು ಲಕ್ಕಸಂದ್ರ ಮೆಟ್ರೋ ನಿಲ್ದಾಣದಿಂದ ಸುರಂಗ ಕೊರೆಯಲು ವಮಿಕ ಯಂತ್ರ ಆರಂಭಿಸಿತ್ತು. ಈ ಹಿಂದೆ ಸೌತ್ ರಾಂಪ್, ಡೈರಿ ವೃತ್ತದ ನಡುವೆ ಸುರಂಗ ಕೊರೆಯಲಾಗಿದೆ.
ಇದನ್ನೂ ಓದಿ: ಸೇವೆಗೆ ಸಜ್ಜಾದ ಬೈಯಪ್ಪನಹಳ್ಳಿ-KR ಪುರಂ, ಕೆಂಗೇರಿ-ಚಲ್ಲಘಟ್ಟ ಮೆಟ್ರೋ; ಸೆ.7ಕ್ಕೆ CMRS ಪರಿಶೀಲನೆ
ಸೌತ್ ರಾಂಪ್, ಡೈರಿ ವೃತ್ತದ ನಡುವೆ 613.2 ಮೀಟರ್ ಸುರಂಗ ಕೊರೆದಿತ್ತು. ಡೈರಿ ಸರ್ಕಲ್-ಲಕ್ಕಸಂದ್ರ ನಿಲ್ದಾಣದ ನಡುವೆ 743.4ಮೀ. ಸುರಂಗ ಕೊರೆದಿತ್ತು. ರೀಚ್-6ರ 20.991 ಕಿ.ಮೀ. ಪೈಕಿ 17.62 ಕಿ.ಮೀ. ಸುರಂಗ ಮಾರ್ಗ ಕಾಮಗಾರಿ ಪೂರ್ಣಗೊಂಡಿರುತ್ತದೆ. ರೀಚ್-6ರ ಸುರಂಗ ಮಾರ್ಗದಲ್ಲಿ 9 ಟಿಬಿಎಂಗಳ ಪೈಕಿ 6 ಟಿಬಿಎಂಗಳು ಸುರಂಗ ಕಾಮಗಾರಿ ಪೂರ್ಣಗೊಳಿಸಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:43 pm, Wed, 30 August 23