AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವಿದ್ಯುತ್ ತಾಂತ್ರಿಕ ದೋಷ: ಯಶವಂತಪುರ – ಮಾದಾವರ ನಡುವೆ ರೈಲು ಸಂಚಾರ ವ್ಯತ್ಯಯ!

ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ. ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಯಶವಂತಪುರದವರೆಗೆ ಮಾತ್ರ ಶಾರ್ಟ್-ಲೂಪ್‌ನಲ್ಲಿ ರೈಲುಗಳು ಸಂಚರಿಸುತ್ತಿದ್ದು, ಯಶವಂತಪುರದಿಂದ ಮಾದಾವರ ನಡುವಿನ 10 ನಿಲ್ದಾಣಗಳಲ್ಲಿ ಸೇವೆ ಸ್ಥಗಿತಗೊಂಡಿದೆ. ಸಮಸ್ಯೆ ಸರಿಪಡಿಸಲು ತಾಂತ್ರಿಕ ತಂಡ ಕಾರ್ಯನಿರತವಾಗಿದ್ದು, ಬಿಎಂಆರ್‌ಸಿಎಲ್ ಪ್ರಯಾಣಿಕರ ಅನಾನುಕೂಲತೆಗೆ ವಿಷಾದಿಸಿದೆ.

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವಿದ್ಯುತ್ ತಾಂತ್ರಿಕ ದೋಷ: ಯಶವಂತಪುರ - ಮಾದಾವರ ನಡುವೆ ರೈಲು ಸಂಚಾರ ವ್ಯತ್ಯಯ!
ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on:Jul 21, 2026 | 9:09 AM

Share

ಮುಖ್ಯಾಂಶಗಳು

  • ವಿದ್ಯುತ್ ತಾಂತ್ರಿಕ ದೋಷದಿಂದ ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ಭಾರಿ ವ್ಯತ್ಯಯ.
  • ಯಶವಂತಪುರದಿಂದ ಮಾದಾವರ ನಡುವಿನ 10 ಸ್ಟೇಷನ್‌ಗಳಲ್ಲಿ ಮೆಟ್ರೋ ಸೇವೆ ಸ್ಥಗಿತ.
  • ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಯಶವಂತಪುರ ಮಾರ್ಗದಲ್ಲಿ ಶಾರ್ಟ್-ಲೂಪ್ ಮೆಟ್ರೋ ರೈಲು ಸಂಚಾರ.

ಬೆಂಗಳೂರು, ಜುಲೈ 21: ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Green Line) ಇಂದು ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಎದುರಾದ ಈ ವಿದ್ಯುತ್ ಸಮಸ್ಯೆಯಿಂದಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸುವಂತಾಗಿತ್ತು. ಇದೀಗ 8.45ಕ್ಕೆ ಸಂಚಾರ ಆರಂಭವಾಗಿದೆ.

ಶಾರ್ಟ್-ಲೂಪ್‌ನಲ್ಲಿ ಮಾತ್ರವೇ ರೈಲು ಸಂಚಾರ

ವಿದ್ಯುತ್‌ ಸಮಸ್ಯೆಯ ಕಾರಣದಿಂದಾಗಿ ಹಸಿರು ಮಾರ್ಗದ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಯಶವಂತಪುರ ನಿಲ್ದಾಣಗಳ ನಡುವೆ ಮಾತ್ರ ಮೆಟ್ರೋ ರೈಲುಗಳು ಶಾರ್ಟ್-ಲೂಪ್ (Short-loop) ಸೇವೆಯಲ್ಲಿ ಸಂಚರಿಸುತ್ತಿವೆ. ಆದರೆ, ಯಶವಂತಪುರ ಮತ್ತು ಮಾದಾವರ (ನಾಗಸಂದ್ರ ವಿಸ್ತರಿತ ಮಾರ್ಗ) ನಡುವಿನ ಒಟ್ಟು 10 ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರವನ್ನು ಸಂಪೂರ್ಣವಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಬಿಎಂಆರ್‌ಸಿಎಲ್ ವಿಷಾದ

ಸಂಚಾರ ವ್ಯತ್ಯಯದ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL), ತಾಂತ್ರಿಕ ದೋಷವನ್ನು ಸರಿಪಡಿಸಿ ಸಾಮಾನ್ಯ ಮೆಟ್ರೋ ಸೇವೆಯನ್ನು ಶೀಘ್ರದಲ್ಲೇ ಪುನಃ ಆರಂಭಿಸಲು ನಮ್ಮ ತಾಂತ್ರಿಕ ತಂಡಗಳು ತುರ್ತು ಗತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಸೇವೆಯಲ್ಲಿ ಉಂಟಾದ ಹಠಾತ್ ಅನಾನುಕೂಲತೆಗೆ ಪ್ರಯಾಣಿಕರಲ್ಲಿ ವಿಷಾದಿಸುತ್ತೇವೆ. ಸಮಸ್ಯೆ ಬಗೆಹರಿದು ಸೇವೆ ಪುನರಾರಂಭಗೊಂಡ ತಕ್ಷಣವೇ ಮುಂದಿನ ಅಧಿಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿತ್ತು.

ಪ್ರಯಾಣಿಕರ ಪರದಾಟ

ಒಟ್ಟು 33.46 ಕಿ.ಮೀ. ಉದ್ದ ಹಾಗೂ 32 ನಿಲ್ದಾಣಗಳನ್ನು ಹೊಂದಿರುವ ಹಸಿರು ಮಾರ್ಗವು ನಗರದ ಉತ್ತರ ಮತ್ತು ದಕ್ಷಿಣ ಭಾಗಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿದೆ. ಬೆಳಗಿನ ಪೀಕ್ ಅವರ್‌ನಲ್ಲೇ (Peak Hours) ಈ ತಾಂತ್ರಿಕ ದೋಷ ಎದುರಾಗಿದ್ದರಿಂದ ಕಚೇರಿಗಳು, ಕಾಲೇಜುಗಳು ಹಾಗೂ ಆಸ್ಪತ್ರೆಗಳಿಗೆ ತೆರಳುತ್ತಿದ್ದ ಸಾವಿರಾರು ಪ್ರಯಾಣಿಕರು ಯಶವಂತಪುರ ಹಾಗೂ ಇತರ ನಿಲ್ದಾಣಗಳಲ್ಲಿ ಸಿಲುಕಿಕೊಂಡು ಪರದಾಡುವಂತಾಗಿತ್ತು. ಇದೀಗ ಮೆಟ್ರೋ ಸಂಚಾರ ಸಹಜ ಸ್ಥಿತಿಗೆ ಮರಳಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:08 am, Tue, 21 July 26

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!