Namma Metro: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದ ನಮ್ಮ ಮೆಟ್ರೋ!

ನಮ್ಮ ಮೆಟ್ರೋ ದಾಖಲೆ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಳಿಕ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿತ್ತು. ಆದರೀಗ ಮತ್ತೆ ಜನರು ಮೆಟ್ರೋದತ್ತ ಮುಖಮಾಡುತ್ತಿದ್ದಾರೆ. ಬೆಂಗಳೂರು ಟ್ರಾಫಿಕ್​​ನಿಂದ ಬೇಸತ್ತ ಜನ ಮತ್ತೆ ಮೆಟ್ರೋವನ್ನೇ ಅವಲಂಬಿಸುತ್ತಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ಏಪ್ರಿಲ್ 17 ರಂದು ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಜನ ಪ್ರಯಾಣಿಸಿದ್ದಾರೆ.

Namma Metro: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದ ನಮ್ಮ ಮೆಟ್ರೋ!
ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದ ನಮ್ಮ ಮೆಟ್ರೋ!

Updated on: Apr 19, 2025 | 3:19 PM

ಬೆಂಗಳೂರು, ಏಪ್ರಿಲ್ 19: ನಮ್ಮ ಮೆಟ್ರೋ (Namma Metro) ದೈನಂದಿನ ಪ್ರಯಾಣಿಕರ ಸಂಖ್ಯೆ ಏಪ್ರಿಲ್ 17 ರಂದು ದಾಖಲೆಯ ಮಟ್ಟದಲ್ಲಿದ್ದು ಗಮನ ಸೆಳೆದಿದೆ. ಹಲವು ನಿಲ್ದಾಣಗಳಿಗೆ ಮೆಟ್ರೋ ಟಿಕೆಟ್ ದರ ದುಪ್ಪಟ್ಟು ಹೆಚ್ಚಾದ ಹೊರತಾಗಿಯೂ ದಾಖಲೆಯ ಸಂಖ್ಯೆಯಲ್ಲಿ ಜನ ಪ್ರಯಾಣ ಮಾಡಿರುವುದು ಅಚ್ಚರಿ ಮೂಡಿಸಿದೆ. ಏಪ್ರಿಲ್ 17 ರಂದು ಒಟ್ಟು 9,08,153 ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ ಎಂದು ಬಿಎಂಆರ್​ಸಿಎಲ್ (BMRCL) ತಿಳಿಸಿದೆ. ಟಿಕೆಟ್ ಬೆಲೆ ಏರಿಕೆಯ ಬಗ್ಗೆ ಸಾರ್ವಜನಿಕರ ಆಕ್ರೋಶದ ಹೊರತಾಗಿಯೂ, ಬೆಂಗಳೂರು ಟ್ರಾಫಿಕ್ ಸಮಸ್ಯೆಯಿಂದ ಬೇಸತ್ತ ಲಕ್ಷಾಂತರ ಬೆಂಗಳೂರಿಗರು ಮೆಟ್ರೋವನ್ನೇ ಆದ್ಯತೆಯ ಸಾರಿಗೆಯನ್ನಾಗಿ ಬಳಸುತ್ತಿದ್ದಾರೆ.

ಬಿಎಂಆರ್​ಸಿಎಲ್ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಲೈನ್ 1 (ಪರ್ಪಲ್ ಲೈನ್) ರಲ್ಲಿ 4,35,516 ಮಂದಿ ಪ್ರಯಾಣಿಸಿದ್ದಾರೆ ಮತ್ತು ಲೈನ್ 2 (ಗ್ರೀನ್ ಲೈನ್) ರಲ್ಲಿ 2,85,240 ಜನ ಪ್ರಯಾಣಿಸಿದ್ದಾರೆ. ಕೆಂಪೇಗೌಡ ನಿಲ್ದಾಣದಲ್ಲಿ 1,87,397 ಪ್ರಯಾಣಿಕರು ಮಾರ್ಗ ಬದಲಾಯಿಸಿದ್ದಾರೆ.

ಇದನ್ನೂ ಓದಿ
ಪ್ರಯಾಣಿಕರಿಗೆ ಬೆಳಗ್ಗೆಯೇ ಕೈಕೊಟ್ಟ ನಮ್ಮ ಮೆಟ್ರೋ: ವಿಡಿಯೋ ವೈರಲ್
ಮೆಟ್ರೋ ನಿಲ್ದಾಣದಲ್ಲಿ ಜೋಡಿ ರೋಮ್ಯಾನ್ಸ್ ವಿಡಿಯೋ ವೈರಲ್
ವಾಹನ ಪಾರ್ಕ್ ಮಾಡಿ ಮೆಟ್ರೋದಲ್ಲಿ ಸಂಚರಿಸುವವರಿಗೆ ಸಿಗಲಿದೆ ಡಿಸ್ಕೌಂಟ್
ನಮ್ಮ ಮೆಟ್ರೋ ಗುಡ್ ನ್ಯೂಸ್: ಐಪಿಎಲ್ ಪ್ರಯುಕ್ತ ಸಂಚಾರ ಸಮಯ ವಿಸ್ತರಣೆ

ಬಿಎಂಆರ್​​ಸಿಎಲ್ ಎಕ್ಸ್ ಸಂದೇಶ


2025 ರ ಫೆಬ್ರವರಿಯಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ಹೆಚ್ಚಿಸಿತ್ತು. ಗರಿಷ್ಠ ಟಿಕೆಟ್ ಬೆಲೆಯನ್ನು 60 ರೂಪಾಯಿಯಿಂದ 90 ರೂಪಾಯಿಗೆ ಹೆಚ್ಚಿಸಲಾಗಿತ್ತು. ಸ್ಮಾರ್ಟ್ ಕಾರ್ಡ್ ಕನಿಷ್ಠ ಬ್ಯಾಲೆನ್ಸ್ ಅವಶ್ಯಕತೆ 50 ರೂ.ನಿಂದ 90 ರೂ.ಗೆ ಹೆಚ್ಚಿಸಲಾಗಿತ್ತು. ಶೇ 50–90 ರ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ನಂತರದ ಕೆಲವು ದಿನಗಳಲ್ಲಿ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿತ್ತು.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್ ವಿಡಿಯೋ ವೈರಲ್: ಛೀ, ಥೂ ಎಂದ ನೆಟ್ಟಿಗರು

ಸಾರ್ವಜನಿಕರ ಆಕ್ರೋಶದ ಬೆನ್ನಲ್ಲೇ ಕರ್ನಾಟಕ ಸ್ಕಾರ ಕೇಂದ್ರ ಸರ್ಕಾರದ ವಿರುದ್ಧ ಗೂಬೆಕೂರಿಸಿಗತ್ತು. ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಬಿಜೆಪಿ ನಾಯಕರು, ರಾಮಲಿಂಗಾ ರೆಡ್ಡಿ ಸಾರ್ವಜನಿಕರನ್ನು ದಾರಿ ತಪ್ಪಿಸಲು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇಷ್ಟೆಲ್ಲ ಆದ ನಂತರ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ಇದೀಗ ದೈನಂದಿನ ಪ್ರಯಾಣಿಕರ ಸಂಖ್ಯೆ ದಾಖಲೆ ಮಟ್ಟ ತಲುಪಿದ್ದು ಅಚ್ಚರಿಗೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ