AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಎಂಜಿ ರೋಡ್​​​-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ತಾಂತ್ರಿಕ ದೋಷದಿಂದ ಇಂದು (ಜ.27) ಮಧ್ಯಾಹ್ನ 1 ಗಂಟೆವರೆಗೆ ನೇರಳೆ ಮಾರ್ಗದ ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಚಲ್ಲಘಟ್ಟ-ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ.

Namma Metro: ಎಂಜಿ ರೋಡ್​​​-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ
ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on:Jan 27, 2024 | 10:59 AM

Share

ಬೆಂಗಳೂರು, ಜನವರಿ 27: ತಾಂತ್ರಿಕ ದೋಷದಿಂದ ಇಂದು (ಜ.27) ಮಧ್ಯಾಹ್ನ 1 ಗಂಟೆವರೆಗೆ ನೇರಳೆ ಮಾರ್ಗದ (Purple Line) ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ (MG Road-Baiyappanhalli) ನಡುವೆ ಮೆಟ್ರೋ (Metro) ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಚಲ್ಲಘಟ್ಟ-ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ. ಹಸಿರು ಮಾರ್ಗದಲ್ಲಿ ರೈಲುಗಳು ಎಂದಿನಂತೆ ಸಂಚರಿಸಲಿವೆ.

ಪೀಣ್ಯ – ನಾಗಸಂದ್ರ ನಡುವೆ 3 ದಿನ ಮೆಟ್ರೋ ರೈಲು ಸಂಚಾರ ಸ್ಥಗಿತ

ಹಸಿರು ಮಾರ್ಗ ಪ್ರಯಾಣಿಕರಿಗೆ ಪೀಣ್ಯ ಹಾಗೂ ನಾಗಸಂದ್ರದ ನಡುವೆ ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿತಗೊಳ್ಳಲಿದೆ. ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಾಗಾರಿ ನಡೆಯಲಿರುವ ಕಾರಣ ಶುಕ್ರವಾರ ಜನವರಿ 26 ರಿಂದ ಜನವರಿ 28ರ ತನಕ ಮೆಟ್ರೋ ರೈಲು ಸಂಚಾರ ತಾತ್ಕಲಿಕ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿತ್ತು. ಜನವರಿ 29ರ ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಸಂಚಾರ ಶುರುವಾಗಲಿದೆ ಎಂದು ಬಿಎಂಆರ್​ಸಿಎಲ್ ಮಾಹಿತಿ ನಿಡಿದೆ.

ಮೆಟ್ರೋದ ಎರಡನೇ ಹಂತದ ಕಾಮಗಾರಿ ಕೂಡ ಸದ್ಯ ತ್ವರಿತಗತಿಯಲ್ಲಿ ಸಾಗುತ್ತಿದೆ. ನಗರದ ಎಲ್ಲ ಪ್ರದೇಶಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಬಿಎಂಆರ್​ಸಿಎಲ್ ಚುರುಕಿನ ಕಾಮಗಾರಿ ನಡೆಸುತ್ತಿದೆ. ಇದರಡಿ ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗ ಕಾಮಗಾರಿ ನಡೆಯುತ್ತಿದೆ. ಇದು ಪೂರ್ಣಗೊಂಡ ಬಳಿಕ ಮಾದವಾರ ವರೆಗೆ ಮೆಟ್ರೋ ಸೇವೆ ದೊರೆಯಲಿದೆ.

ಮೆಟ್ರೋ ಸಂಚಾರ ಸ್ಥಗಿತಗೊಳ್ಳುವ ಕಾರಣ ಪೀಣ್ಯ ಸುತ್ತ ಮುತ್ತ ಸಂಚಾರ ದಟ್ಟಣೆ ಹೆಚ್ಚಾಗಿದೆ. ಸದ್ಯ ನಮ್ಮ ಮೆಟ್ರೋ ರೈಲುಗಳಲ್ಲಿ ದಿನವೊಂದಕ್ಕೆ ಬರೊಬ್ಬರಿ 6.5 ಲಕ್ಷ ಜನ ಸಂಚರಿಸುತ್ತಿದ್ದಾರೆ. ಈ ಪೈಕಿ 80 ಸಾವಿರದಿಂದ 1 ಲಕ್ಷ ಜನ ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದಾರೆ. ಇದು ಟಿಕೆಟ್ ಕೌಂಟರ್​​ನ ಒತ್ತಡ ಕಡಿಮೆ ಆಗಲು ಕಾರಣವಾಗಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಇದನ್ನೂ ಓದಿ: Bengaluru Metro: ಸರ್ಜಾಪುರದಿಂದ ಹೆಬ್ಬಾಳಕ್ಕೆ ನಮ್ಮ ಮೆಟ್ರೋ ಸಂಪರ್ಕ ಯೋಜನೆ, ಡಿಪಿಆರ್ ಸಿದ್ಧ; ನಿಲ್ದಾಣಗಳ ಮಾಹಿತಿ ಇಲ್ಲಿದೆ

ಚೀನಾದಿಂದ ಬೆಂಗಳೂರಿನತ್ತ ಹೊರಟಿತು ಚಾಲಕ ರಹಿತ ಮೆಟ್ರೋ

ಈ ಮಧ್ಯೆ, ಚಾಲಕ ರಹಿತ ಮೆಟ್ರೋ ರೈಲು ಸೇವೆ ನೀಡುವ ವಿಚಾರದಲ್ಲಿಯೂ ಬಿಎಂಆರ್​ಸಿಎಲ್ ಮುಂದಡಿಯಿಟ್ಟಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಗೆ ಮೊದಲ ಚಾಲಕ ರಹಿತ ರೈಲು ಚೀನಾದಿಂದ ಹೊರಟಿದೆ. ಎಲೆಕ್ಟ್ರಾನಿಕ್ಸ್ ಸಿಟಿ ಮೆಟ್ರೋಗೆ ಮೊದಲ ಆರು ಬೋಗಿಗಳ ರೈಲನ್ನು ಜನವರಿ 20 ರಂದು ಹಡಗಿಗೆ ಲೋಡ್ ಮಾಡಲಾಗಿದ್ದು, ಅದು ಸದ್ಯ ಚೆನ್ನೈನತ್ತ ಸಾಗುತ್ತಿದೆ. ಇದು 2024 ರ ಮಧ್ಯಭಾಗದಲ್ಲಿ ಚೆನ್ನೈ ಬಂದರಿಗೆ ಆಗಮಿಸುವ ನಿರೀಕ್ಷೆಯಿದೆ. ನಂತರ ಅಲ್ಲಿಂದ ರಸ್ತೆ ಮೂಲಕ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಸಾಗಿಸಲಾಗುತ್ತದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Sat, 27 January 24

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ