Namma Metro: ನಾಗಸಂದ್ರ-ಮಾದವಾರ ನಡುವಿನ ಮೆಟ್ರೋ ಸಂಚಾರ ಶೀಘ್ರದಲ್ಲೇ ಆರಂಭ
Bengaluru Namma Metro: ಬೆಂಗಳೂರು ಜನರಿಗೆ ವೇಗದ ಮತ್ತು ಸುಖಕರ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಸಹಾಯಕಾರಿಯಾಗಿದೆ. ಹೀಗಾಗಿ ನಗರದ ವಿವಿಧ ಪ್ರದೇಶಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸುವಂತೆ ಜನರು ಬೇಡಿಕೆ ಇಡುತ್ತಿದ್ದಾರೆ. ಜನರ ಬೇಡಿಕೆ ಮೇರೆಗೆ ಇದೀಗ ನಾಗಸಂದ್ರ-ಮಾದಾವರ ನಡುವಿನ ಮೆಟ್ರೋ ಸಂಚಾರ ಶೀಘ್ರದಲ್ಲೇ ಆರಂಭವಾಗಲಿದೆ.
ಬೆಂಗಳೂರು, ಸೆಪ್ಟೆಂಬರ್ 27: ಬೆಂಗಳೂರು (Bengaluru) ಜನತೆಯ ಬಹು ನಿರೀಕ್ಷಿತ ನಾಗಸಂದ್ರದಿಂದ ಮಾದಾವರವರೆಗಿನ ನಮ್ಮ ಮೆಟ್ರೋ (Namma Metro) ರೈಲು ಸಂಚಾರ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. 3.7 ಕಿಮೀ ಅಂತರದ ನಾಗಸಂದ್ರ ಟು ಮಾದಾವರವರೆಗಿನ ಮೆಟ್ರೋ ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಮತ್ತು ಟ್ರಯಲ್ ರನ್ ಕೂಡ ಯಶಸ್ವಿಯಾಗಿದೆ.
ಇದೀಗ, ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗವನ್ನು ರೈಲ್ವೆ ಸುರಕ್ಷತಾ ಆಯುಕ್ತರು ಅಕ್ಟೋಬರ್ 3 ಮತ್ತು 4ರಂದು ಪರಿಶೀಲನೆ ನಡೆಸಲಿದ್ದಾರೆ. ಆಯುಕ್ತರು ಪರಿಶೀಲನೆ ನಡೆಸಿ, ಸಂಚಾರಕ್ಕೆ ಅನುಮತಿ ನೀಡಿದ ಬಳಿಕ ಶೀಘ್ರವೇ ಲೋಕಾರ್ಪಣೆ ದಿನಾಂಕ ಘೋಷಣೆಯಾಗಲಿದೆ.
ನಿಲ್ದಾಣಗಳು
ನಾಗಸಂದ್ರದಿಂದ ಮಾದಾವರದ ನಡುವಿನ ಮಾರ್ಗದಲ್ಲಿ ಮೂರು ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಮಂಜುನಾಥನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ. ಹಸಿರು ಮಾರ್ಗ ವಿಸ್ತರಣೆಯಿಂದ ನಗರದ ಪ್ರಮುಖ ಪ್ರದರ್ಶನ ಕೇಂದ್ರವಾದ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ (BIEC) ಗೆ ಸಂಪರ್ಕವನ್ನು ಹೊಂದಿದೆ.
ಇದನ್ನೂ ಓದಿ: ಬೆಂಗಳೂರಿನ ಐತಿಹಾಸಿಕ ಸ್ಥಳಗಳ ನೋಡಬೇಕೇ? ಈ ಮೆಟ್ರೋ ನಿಲ್ದಾಣಕ್ಕೆ ಬನ್ನಿ
ಮಂಜುನಾಥನಗರ, ಚಿಕ್ಕಬಿದರಕಲ್ಲು, ಮಾದಾವರ, ತುಮಕೂರು ರಸ್ತೆ, ಅಂಚೆಪಾಳ್ಯ, ಜಿಂದಾಲ್ ನಗರದ ನಾಗರಿಕರು ಮೆಟ್ರೋದಲ್ಲಿ ಪ್ರಯಾಣಿಸಲು ನಾಗಸಂದ್ರ ಮೆಟ್ರೊ ನಿಲ್ದಾಣಕ್ಕೆ ಬರಬೇಕಾಗಿತ್ತು, ಈಗ ಈ ಮಾರ್ಗ ಸಂಪೂರ್ಣವಾದ ಬಳಿಕ ಐದು ಕಿಲೋಮೀಟರ್‌ಗಳಷ್ಟು ಪ್ರಯಾಣಿಸುವುದು ತಪ್ಪಲಿದೆ.
ನಾಗಸಂದ್ರ-ಮಾದವಾರ ನಡುವಿನ ಕಾಮಗಾರಿ 2017ರಲ್ಲಿ ಆರಂಭವಾಗಿತ್ತು. ಅಂದುಕೊಂಡಂತೆ ಎಲ್ಲವೂ ನಡೆದಿದ್ದರೇ 2019ರ ಮಧ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೊರೊನಾ ಸಮಸ್ಯೆ ಸೇರಿದಂತೆ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ