ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇರುವ ಅತಿದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ನಿಲ್ದಾಣಕ್ಕೆ ಹೋದ ನಂತರ ವಾಹನವನ್ನು ಎಲ್ಲಿ ಪಾರ್ಕ್ ಮಾಡುವುದು ಎಂಬುದೇ ತಲೆನೋವಾಗಿರುತ್ತದೆ. ಇದೀಗ ಸಮಸ್ಯೆಗೆ ಬ್ರೇಕ್ ಹಾಕಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದು, ಕ್ರಮ ಕೈಗೊಳ್ಳಲು ಅಧಿಕಾರಿಗಳು ಅರ್ಲಟ್ ಆಗಿದ್ದಾರೆ. ಹಾಗಾದರೆ ಏನದು ಕ್ರಮ? ಇಲ್ಲಿದೆ ಮಾಹಿತಿ.

ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್
ಸಾಂದರ್ಭಿಕ ಚಿತ್ರ
Edited By:

Updated on: Dec 25, 2025 | 8:26 AM

ಬೆಂಗಳೂರು, ಡಿಸೆಂಬರ್ 24: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಇರುವ ಬಹು ದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ಸ್ಟೇಷನ್​​ಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಮೆಟ್ರೋ ಪ್ರಯಾಣಿಕರು ಸ್ಟೇಷನ್ ಅಕ್ಕಪಕ್ಕದ ರಸ್ತೆಗಳಲ್ಲಿ, ಮನೆಗಳ ಗೇಟ್ ಬಳಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದಾರೆ. ಇದರಿಂದ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮುಂದಾಗಿದ್ದು, ಮುಂಬರುವ ಮೆಟ್ರೋ ಮಾರ್ಗಗಳಲ್ಲಿ ಬರುವ ಸ್ಟೇಷನ್​ಗಳ ಬಳಿ ಅಕ್ಕಪಕ್ಕದ ಜಾಗವನ್ನು ಖರೀದಿ ಮಾಡಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು, ಮೆಟ್ರೋ ಸ್ಟೇಷನ್​ನಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ಮಾಡಬೇಕು. ಇದರಿಂದ ಪ್ರಯಾಣಿಕರಿಗೆ ಉಪಯೋಗ ಆಗಲಿದೆ ಎಂದು ಸೂಚನೆ ನೀಡಿದ್ದಾರೆ.

ಡಿಸಿಎಂ ಸೂಚನೆ ಹಿನ್ನೆಲೆ ಬಿಎಂಆರ್​ಸಿಎಲ್ ಅಧಿಕಾರಿಗಳು ಇನ್ಮುಂದೆ ಆರಂಭವಾಗಲಿರುವ ಮೆಟ್ರೋ ಮಾರ್ಗಗಳು ಮತ್ತು ವಿಸ್ತರಣೆ ಆಗಲಿರುವ ಮೆಟ್ರೋ ಮಾರ್ಗಗಳಾದ ಆರೆಂಜ್ ಲೈನ್, ಬ್ಲೂ ಲೈನ್, ರೆಡ್ ಲೈನ್, ಪಿಂಕ್ ಲೈನ್, ಯೆಲ್ಲೋ ಲೈನ್ ಮೆಟ್ರೋ ಸ್ಟೇಷನ್​ಗಳ ಬಳಿ ಮಲ್ಟಿ ಲೆವೆಲ್ ಪಾರ್ಕಿಂಗ್ ನಿರ್ಮಾಣ ಮಾಡಲು ಅಕ್ಕಪಕ್ಕದ ಜಾಗವನ್ನು ಪತ್ತೆ ಮಾಡಲು ಮುಂದಾಗಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿ ಬಹುಮಹಡಿ ಪಾರ್ಕಿಂಗ್ ಸ್ಲಾಟ್​​ಗಳ ನಿರ್ಮಾಣಕ್ಕೆ ನಿರ್ಧಾರ ಮಾಡಿದ್ದಾರೆ. ಇದಕ್ಕಾಗಿ ಮೆಟ್ರೋ ಸ್ಟೇಷನ್​ಗಳ ಬಳಿ ಹೆಚ್ಚಿನ ಭೂಮಿ ಸ್ವಾಧೀನ ಮಾಡಿಕೊಳ್ಳಲು ಬಿಎಂಆರ್​ಸಿಎಲ್ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ

ಒಟ್ಟಿನಲ್ಲಿ, ಮೆಟ್ರೋ ಪ್ರಯಾಣಿಕರ ಹಲವು ವರ್ಷಗಳ ಸಮಸ್ಯೆಗೆ ಬ್ರೇಕ್ ಹಾಕಲು ಡಿಸಿಎಂ ಸೂಚನೆ ನೀಡಿದ್ದಾರೆ. ಇದನ್ನು ಬಿಎಂಆರ್​ಸಿಎಲ್ ಅಧಿಕಾರಿಗಳು ಎಷ್ಟರಮಟ್ಟಿಗೆ ಪಾಲಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ