AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ

ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್‌ ಯೋಜನೆಗೆ RITES ಸಕಾರಾತ್ಮಕ ವರದಿ ನೀಡಿದ್ದು, ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಅಂತಿಮ ಅನುಮೋದನೆ ದೊರೆಯುವ ಸಾಧ್ಯತೆ ದಟ್ಟವಾಗಿದೆ. ಮೆಟ್ರೋ ಮಾರ್ಗದ ಮೇಲೆಯೇ ಫ್ಲೈಓವರ್ ನಿರ್ಮಾಣವಾದರೆ ಪ್ರಯಾಣಿಕರು ಮೆಟ್ರೋ ಬಳಕೆ ಕಡಿಮೆ ಮಾಡಬಹುದು ಎಂಬ ಕಾರಣ ನೀಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಯೋಜನೆಯ ಸಾಮಾಜಿಕ-ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಈ ಹಿಂದೆ ಪ್ರಶ್ನೆ ಎತ್ತಿತ್ತು.

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
|

Updated on: Jun 11, 2026 | 9:06 AM

Share

ಬೆಂಗಳೂರು, ಜೂನ್​​ 11: ಡಬಲ್ ಡೆಕ್ಕರ್‌ ಯೋಜನೆ ಸೇರ್ಪಡೆಯಿಂದ ಅನುಮೋದನೆಗಾಗಿ ಬಾಕಿ ಉಳಿದಿದ್ದ ನಮ್ಮ ಮೆಟ್ರೋ 3ನೇ ಹಂತ (Phase-3) ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ RITES Ltd ಸಿದ್ಧಪಡಿಸಿರುವ ಕರಡು ವರದಿಯಲ್ಲಿ, 44.65 ಕಿ.ಮೀ ಉದ್ದದ ಈ ಯೋಜನೆಯ ಆರ್ಥಿಕ ಆಂತರಿಕ ಆದಾಯ ಪ್ರಮಾಣ (Economic Internal Rate of Return – EIRR) ಶೇ. 15.9ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ. ಇದು ಮೆಟ್ರೋ ಯೋಜನೆಗಳಿಗೆ ಅಗತ್ಯವೆಂದು ಪರಿಗಣಿಸಲಾದ ಶೇ.14ರ ಮಾನದಂಡಕ್ಕಿಂತ ಹೆಚ್ಚಾಗಿದೆ.

2024ರ ಸೆಪ್ಟೆಂಬರ್ 13ರಂದು ಕೇಂದ್ರ ಸರ್ಕಾರ ಮೂರನೇ ಹಂತದ ಯೋಜನೆಗೆ ಅನುಮೋದನೆ ನೀಡಿದಾಗ ಡಬಲ್ ಡೆಕ್ಕರ್‌ ವಯಾಡಕ್ಟ್‌ ಯೋಜನೆ ಇರಲಿಲ್ಲ. ನಂತರ ಭವಿಷ್ಯದಲ್ಲಿ ರಸ್ತೆ ವಿಸ್ತರಣೆ ಅಗತ್ಯ ತಪ್ಪಿಸಲು ರಾಜ್ಯ ಸರ್ಕಾರ ಹೆಚ್ಚುವರಿ 9,700 ಕೋಟಿ ವೆಚ್ಚದಲ್ಲಿ ಡಬಲ್ ಡೆಕ್ಕರ್‌ ವ್ಯವಸ್ಥೆಯನ್ನು ಸೇರಿಸಲು ನಿರ್ಧರಿಸಿತ್ತು. ಆದರೆ, ಮೆಟ್ರೋ ಮಾರ್ಗದ ಮೇಲೆಯೇ ಫ್ಲೈಓವರ್ ನಿರ್ಮಾಣವಾದರೆ ಪ್ರಯಾಣಿಕರು ಮೆಟ್ರೋ ಬಳಕೆ ಕಡಿಮೆ ಮಾಡಬಹುದು ಎಂಬ ಕಾರಣ ನೀಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA) ಯೋಜನೆಯ ಸಾಮಾಜಿಕ-ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಪ್ರಶ್ನೆ ಎತ್ತಿತ್ತು.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್; ಬೆಂಗಳೂರಿಗೆ ಬಂದೇ ಬಿಡ್ತು ಮೊದಲ ‘ಬ್ಲೂ ಲೈನ್’ ರೈಲು

RITES ವರದಿ ಪ್ರಕಾರ, ಡಬಲ್ ಡೆಕ್ಕರ್‌ ಸೇರಿಸಿದ ಬಳಿಕ EIRR ಶೇ.15.9ಕ್ಕೆ ಇಳಿದಿದ್ದರೂ ಅದು ಇನ್ನೂ ಅನುಮೋದನೆಗೆ ಅಗತ್ಯವಾದ ಮಟ್ಟಕ್ಕಿಂತ ಹೆಚ್ಚಾಗಿದೆ. ಮೂಲ ಯೋಜನೆಯಲ್ಲಿ EIRR ಶೇ.17.04 ಇತ್ತು. ಸಚಿವಾಲಯದ ಆಕ್ಷೇಪಣೆಗಳು ತಾಂತ್ರಿಕವಾಗಿದ್ದು, RITES ವರದಿ ಅದಕ್ಕೆ ಸ್ಪಷ್ಟ ಉತ್ತರ ನೀಡಿದೆ. ಅಂತಿಮ ವರದಿಯೂ ಇದೇ ರೀತಿಯಲ್ಲಿರಲಿದೆ. ಹೀಗಾಗಿ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದು ಮೂಲಗಳು ತಿಳಿಸಿವೆ.

ಎಲ್ಲೆಲ್ಲಿ ಮೂರನೇ ಹಂತದ ಮಾರ್ಗ?

  • ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಹೊರವರ್ತುಲ ರಸ್ತೆಯ (ORR) ಮೂಲಕ 32.5 ಕಿ.ಮೀ ಉದ್ದದ ಮಾರ್ಗ
  • ಹೊಸಹಳ್ಳಿಯಿಂದ ಕಡಬಗೆರೆವರೆಗೆ ಮಾಗಡಿ ರಸ್ತೆಯ ಮೂಲಕ 12.15 ಕಿ.ಮೀ ಉದ್ದದ ಮಾರ್ಗ

ಕೇಂದ್ರ ಸಚಿವರ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

ಬುಧವಾರ ನವದೆಹಲಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್​​ ಲಾಲ್​​ ಖಟ್ಟರ್​ ಅವರನ್ನು ಭೇಟಿ ಮಾಡಿರುವ ಸಿಎಂ ಡಿ.ಕೆ. ಶಿವಕುಮಾರ್​​, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಡಬಲ್ ಡೆಕ್ಕರ್‌ ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದರು. ಇದರ ಜೊತೆಗೆ ಎರಡನೇ ಹಂತದ ಯೋಜನೆಯ ಪರಿಷ್ಕೃತ ವೆಚ್ಚ 40,425.02 ಕೋಟಿಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅದರ ಅನುಮೋದನೆಯನ್ನು ಶೀಘ್ರ ನೀಡುವಂತೆ ಆಗ್ರಹಿಸಿದ್ದಾರೆ ಎಂದು ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ