AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪಿಂಕ್ ಲೈನ್: ಪೀಕ್ ಅವರ್‌ನಲ್ಲಿ ಪ್ರತಿ 8 ನಿಮಿಷಕ್ಕೊಂದು ರೈಲು ಸಂಚಾರ, ಆರಂಭದಲ್ಲಿ ನಾಲ್ಕು ರೈಲುಗಳ ನಿಯೋಜನೆ

Namma Metro Pink Line: ನವೆಂಬರ್ 13ರಂದು ಲೋಕಾರ್ಪಣೆಗೊಳ್ಳಲಿರುವ ನಮ್ಮ ಮೆಟ್ರೋ ಪಿಂಕ್ ಲೈನ್ ಎಲಿವೇಟೆಡ್ ಮಾರ್ಗದಲ್ಲಿ ಆರಂಭದಲ್ಲಿ ನಾಲ್ಕು ರೈಲುಗಳನ್ನು ನಿಯೋಜಿಸಲಾಗುತ್ತದೆ. ಪೀಕ್ ಅವರ್‌ನಲ್ಲಿ ಪ್ರತಿ 8 ನಿಮಿಷಕ್ಕೊಂದು ರೈಲು ಸಂಚರಿಸಲಿದೆ ಎಂಬುದು ಬಿಎಂಆರ್​ಸಿಎಲ್ ಮೂಲಗಳಿಂದ ತಿಳಿದುಬಂದಿದೆ. ಸಾರ್ವಜನಿಕ ಸೇವೆ ನವೆಂಬರ್ 14ರಿಂದ ಆರಂಭವಾಗಲಿದೆ.

ನಮ್ಮ ಮೆಟ್ರೋ ಪಿಂಕ್ ಲೈನ್: ಪೀಕ್ ಅವರ್‌ನಲ್ಲಿ ಪ್ರತಿ 8 ನಿಮಿಷಕ್ಕೊಂದು ರೈಲು ಸಂಚಾರ, ಆರಂಭದಲ್ಲಿ ನಾಲ್ಕು ರೈಲುಗಳ ನಿಯೋಜನೆ
ಬೆಂಗಳೂರು ಪಿಂಕ್ ಲೈನ್ ಮೆಟ್ರೋImage Credit source: BMRCL
ಗಣಪತಿ ಶರ್ಮಾ
|

Updated on: Nov 05, 2026 | 10:17 AM

Share

ಮುಖ್ಯಾಂಶಗಳು

  • ಪೀಕ್ ಅವರ್‌ನಲ್ಲಿ ಪ್ರತಿ 8 ನಿಮಿಷಕ್ಕೆ ರೈಲು
  • ಆರಂಭದಲ್ಲಿ ನಾಲ್ಕು ರೈಲುಗಳ ನಿಯೋಜನೆ, ಒಂದು ಮೀಸಲು ರೈಲು
  • ನವೆಂಬರ್ 14ರಿಂದ ಸಾರ್ವಜನಿಕರ ಸಂಚಾರಕ್ಕೆ ಮುಕ್ತ

ಬೆಂಗಳೂರು, ನವೆಂಬರ್ 5: ನಮ್ಮ ಮೆಟ್ರೋದ ಪಿಂಕ್ ಲೈನ್ ಎಲಿವೇಟೆಡ್ ಮಾರ್ಗವು ನವೆಂಬರ್ 13ರಂದು ಲೋಕಾರ್ಪಣೆಗೊಳ್ಳಲಿದ್ದು, ಪೀಕ್ ಅವರ್‌ನಲ್ಲಿ ಪ್ರತಿ 8 ನಿಮಿಷಕ್ಕೊಂದು ರೈಲು ಸಂಚರಿಸುವ ನಿರೀಕ್ಷೆಯಿದೆ. ಈ ಹಿಂದೆ ಪ್ರತಿ 5 ನಿಮಿಷಕ್ಕೊಂದು ರೈಲು ಓಡಿಸುವ ಯೋಜನೆ ಇತ್ತು ಎನ್ನಲಾಗಿದ್ದರೂ, ಆರಂಭಿಕ ಹಂತದಲ್ಲಿ 8 ನಿಮಿಷಗಳ ಅಂತರದಲ್ಲಿ ಸೇವೆ ನೀಡಲು ನಿರ್ಧರಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವ ಬಗ್ಗೆ ವರದಿಯಾಗಿದೆ.

ಆರಂಭದಲ್ಲಿ ಈ ಮಾರ್ಗದಲ್ಲಿ ಒಟ್ಟು ನಾಲ್ಕು ರೈಲುಗಳನ್ನು ನಿಯೋಜಿಸಲಾಗುತ್ತದೆ. ಒಂದು ರೈಲನ್ನು ತುರ್ತು ಪರಿಸ್ಥಿತಿಗಾಗಿ ಮೀಸಲಿಡಲಾಗುತ್ತದೆ ಎಂದು ತಿಳಿದುಬಂದಿದೆ.

ಟರ್ಮಿನಲ್ ನಿಲ್ದಾಣಗಳಲ್ಲಿ ಬೇಕು ಹೆಚ್ಚು ಸಮಯ

ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗವು ತುಲನಾತ್ಮಕವಾಗಿ ಚಿಕ್ಕ ಮಾರ್ಗವಾಗಿರುವುದರಿಂದ ಟರ್ಮಿನಲ್ ನಿಲ್ದಾಣಗಳಲ್ಲಿ ರೈಲುಗಳನ್ನು ತಿರುಗಿಸುವ ಸಮಯ ಹೆಚ್ಚಾಗಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಕಾಳೇನ ಅಗ್ರಹಾರ ಮತ್ತು ತಾವರೆಕೆರೆ ಟರ್ಮಿನಲ್ ನಿಲ್ದಾಣಗಳಲ್ಲಿ ರೈಲುಗಳ ಟರ್ನ್‌ಅರೌಂಡ್ ಸಮಯ ಹೆಚ್ಚಾಗುವ ಹಿನ್ನೆಲೆಯಲ್ಲಿ ಆರಂಭದಲ್ಲಿ ಪ್ರತಿ 8 ನಿಮಿಷಕ್ಕೊಂದು ರೈಲು ಸೇವೆ ನೀಡಲು ಯೋಜಿಸಲಾಗಿದೆ.

ಅಗತ್ಯವಿದ್ದರೆ ಹೆಚ್ಚಿನ ರೈಲುಗಳನ್ನು ನಿಯೋಜಿಸಿ ಸೇವೆಯ ಆವರ್ತನವನ್ನು ಹೆಚ್ಚಿಸುವ ಅವಕಾಶವಿದೆ. ಪ್ರಯಾಣಿಕರ ಸಂಖ್ಯೆ ಮತ್ತು ಸಂಚಾರ ಮಾದರಿಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ರೈಲುಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಕುರಿತು ನಿರ್ಧರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಪ್ರಯಾಣಿಸುವ ಸಾಧ್ಯತೆ

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನ ತಾವರೆಕೆರೆಯಿಂದ ಐಐಎಂಬಿ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸುವ ಸಾಧ್ಯತೆ ಇದೆ. ಬಳಿಕ ಐಐಎಂಬಿ ಸಭಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ನವೆಂಬರ್ 14ರಿಂದ ಸಾರ್ವಜನಿಕರಿಗೆ ಸೇವೆ

ಪಿಂಕ್ ಲೈನ್ ಎಲಿವೇಟೆಡ್ ಮಾರ್ಗದ ಸಾರ್ವಜನಿಕ ಮೆಟ್ರೋ ಸೇವೆ ನವೆಂಬರ್ 14ರಿಂದ ಆರಂಭವಾಗಲಿದೆ. ಈಗಿರುವ ನಮ್ಮ ಮೆಟ್ರೋ ಮಾರ್ಗಗಳ ಕಾರ್ಯಾಚರಣೆ ಅವಧಿಯಂತೆಯೇ ಈ ಮಾರ್ಗದಲ್ಲೂ ಸೇವೆ ಲಭ್ಯವಾಗುವ ನಿರೀಕ್ಷೆಯಿದೆ. ಆರಂಭಿಕ ದಿನಗಳಲ್ಲಿ ನಾಲ್ಕು ರೈಲುಗಳೊಂದಿಗೆ ಕಾರ್ಯಾಚರಣೆ ಆರಂಭವಾಗಲಿದ್ದು, ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ರೈಲುಗಳ ಸಂಖ್ಯೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!