AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ ದಿನವೇ ಸಿಎ ಪರೀಕ್ಷೆ: ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವ್ಯವಸ್ಥೆ ಎಂದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ ಕುರಿತು ಮಾತನಾಡಿದ್ದಾರೆ. ಉದ್ಘಾಟನಾ ದಿನದಂದು ಪರೀಕ್ಷೆ ಇರುವ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ಮೆಟ್ರೋ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದ ಬಗ್ಗೆ ಹಾಗೂ ಕರ್ನಾಟಕದ ತೆರಿಗೆ ಪಾಲಿನ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ ದಿನವೇ ಸಿಎ ಪರೀಕ್ಷೆ: ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವ್ಯವಸ್ಥೆ ಎಂದ ಸಚಿವ ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ
ಗಣಪತಿ ಶರ್ಮಾ
|

Updated on: Nov 11, 2026 | 2:03 PM

Share

ಬೆಂಗಳೂರು, ನವೆಂಬರ್ 11: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಆದರೆ ಅದೇ ದಿನ ಸಿಎ ವಿದ್ಯಾರ್ಥಿಗಳಿಗೆ ಪರೀಕ್ಷೆಯೂ ಇರುವುದರಿಂದ, ಅವರ ಸಂಚಾರಕ್ಕೆ ತೊಂದರೆಯಾಗದಂತೆ ವಿಶೇಷ ವ್ಯವಸ್ಥೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.

ನವೆಂಬರ್ 13ರಂದು ಮಧ್ಯಾಹ್ನ 1 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಿಗದಿಯಾಗಿದೆ. ಅದೇ ದಿನ ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಿಎ ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೆ. ಉದ್ಘಾಟನೆಯ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ ಅಥವಾ ದಟ್ಟಣೆ ಉಂಟಾದರೆ ಪರೀಕ್ಷಾರ್ಥಿಗಳು ಕೇಂದ್ರ ತಲುಪಲು ತೊಂದರೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.

ವೇಳಾಪಟ್ಟಿ ಬದಲಾವಣೆ ಕಷ್ಟ: ಸಚಿವರ ಸ್ಪಷ್ಟನೆ

ಈ ಬಗ್ಗೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ಪ್ರಧಾನಿ ಕಚೇರಿ ನೀಡಿರುವ ವೇಳಾಪಟ್ಟಿಯ ಪ್ರಕಾರವೇ ಕಾರ್ಯಕ್ರಮ ರೂಪಿಸಲಾಗಿದೆ ಎಂದಿದ್ದಾರೆ. ಪ್ರಧಾನಿ ಕಾರ್ಯಾಲಯದಿಂದ ವೇಳಾಪಟ್ಟಿ ನಿಗದಿಯಾಗಿರುವುದರಿಂದ ಅದನ್ನು ಬದಲಿಸುವುದು ಕಷ್ಟ ಎಂದು ಅವರು ಹೇಳಿದ್ದಾರೆ. ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ತೆರಳಲು ಪರ್ಯಾಯ ಮಾರ್ಗಗಳ ಬಗ್ಗೆ ಪೊಲೀಸರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೋಗುವುದು ಕಷ್ಟವಾಗುತ್ತದೆ ಎಂದಾದರೆ, ಆ ವಿಷಯವನ್ನು ಪ್ರಧಾನಿ ಕಚೇರಿಯ ಗಮನಕ್ಕೆ ತಂದು ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.

ಆರಂಭದಲ್ಲಿ ಸುಮಾರು 7.5 ಕಿ.ಮೀ. ಮಾರ್ಗ

ಪಿಂಕ್ ಲೈನ್‌ನ ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಸುಮಾರು 7.5 ಕಿ.ಮೀ. ಎತ್ತರಿಸಿದ ಎಲಿವೇಟೆಡ್ ಕಾರಿಡಾರ್​​ನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಇರಲಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪಿಂಕ್ ಲೈನ್: ಪೀಕ್ ಅವರ್‌ನಲ್ಲಿ ಪ್ರತಿ 8 ನಿಮಿಷಕ್ಕೊಂದು ರೈಲು ಸಂಚಾರ, ಆರಂಭದಲ್ಲಿ ನಾಲ್ಕು ರೈಲುಗಳ ನಿಯೋಜನೆ

ಮೆಟ್ರೋ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದ ಬಗ್ಗೆಯೂ ಸಚಿವರು ಮಾತನಾಡಿದ್ದಾರೆ. ಪ್ರಸ್ತುತ ಹಂತದಲ್ಲಿ ಟಿಕೆಟ್ ದರಗಳ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್
ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ ಮಾಡಿಸಿದ ವಿಜಯಲಕ್ಷ್ಮಿ ದರ್ಶನ್: ವಿಡಿಯೋ
ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ ಮಾಡಿಸಿದ ವಿಜಯಲಕ್ಷ್ಮಿ ದರ್ಶನ್: ವಿಡಿಯೋ
ಇಲ್ಲಿ ಪರಸ್ಪರ ಸಗಣಿ ಗಟ್ಟಿ ಎಸೆದುಕೊಳ್ಳೋದೇ ಹಬ್ಬದ ಮಜಾ!
ಇಲ್ಲಿ ಪರಸ್ಪರ ಸಗಣಿ ಗಟ್ಟಿ ಎಸೆದುಕೊಳ್ಳೋದೇ ಹಬ್ಬದ ಮಜಾ!
ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚುವ ಬಗ್ಗೆ ದೇಗುಲದ ಅರ್ಚಕ ಹೇಳಿದ್ದೇನು?
ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚುವ ಬಗ್ಗೆ ದೇಗುಲದ ಅರ್ಚಕ ಹೇಳಿದ್ದೇನು?
ಪಟಾಕಿ ಶಬ್ದದಿಂದ ಹೃದಯಾಘಾತವಾಗಿ 6 ವರ್ಷದ ಡಾಬರ್​ಮನ್​​​​ ನಾಯಿ ಸಾವು
ಪಟಾಕಿ ಶಬ್ದದಿಂದ ಹೃದಯಾಘಾತವಾಗಿ 6 ವರ್ಷದ ಡಾಬರ್​ಮನ್​​​​ ನಾಯಿ ಸಾವು
ಅಂಗವಿಕಲನಂತೆ ನಟಿಸಿ ಭಿಕ್ಷಾಟನೆ ; ಯುವಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು
ಅಂಗವಿಕಲನಂತೆ ನಟಿಸಿ ಭಿಕ್ಷಾಟನೆ ; ಯುವಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು
ಹಾಸನಾಂಬೆ ದರ್ಶನಕ್ಕೆ ಇಂದು ತೆರೆ: ಕೊನೆಯ ದಿನದ ದರ್ಶನಕ್ಕೆ ಭಕ್ತರ ಸಾಲು
ಹಾಸನಾಂಬೆ ದರ್ಶನಕ್ಕೆ ಇಂದು ತೆರೆ: ಕೊನೆಯ ದಿನದ ದರ್ಶನಕ್ಕೆ ಭಕ್ತರ ಸಾಲು
ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮಂಜು-ಯಶಸ್ ಕಿರಿಕ್; ಮರುಕಳಿಸುತ್ತಾ ಇತಿಹಾಸ?
ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮಂಜು-ಯಶಸ್ ಕಿರಿಕ್; ಮರುಕಳಿಸುತ್ತಾ ಇತಿಹಾಸ?
ಪಟಾಕಿ ಹಚ್ಚಿ ಯುವತಿಯರ ಮೇಲೆ ಎಸೆದ ಪುಡಿರೌಡಿ
ಪಟಾಕಿ ಹಚ್ಚಿ ಯುವತಿಯರ ಮೇಲೆ ಎಸೆದ ಪುಡಿರೌಡಿ