ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ

ನಮ್ಮ ಮೆಟ್ರೋ ಪಿಂಕ್ ಲೈನ್ ಕಾಮಗಾರಿಗೆ ಈಗ ಹೊಸದೊಂದು ಅಡ್ಡಿ ಎದುರಾಗಿದೆ. ಪರಿಣಾಮವಾಗಿ ಕಾಮಗಾರಿ ವಿಳಂಬವಾಗುವ ಸಾಧ್ಯತೆ ಇದೆ. ಸುರಂಗ ಕೊರೆಯುವ ಮಷಿನ್​ಗಳಿಗೆ ಎದುರಾದ ಸಮಸ್ಯೆ ಏನು? ಇದರಿಂದ ಕಾಮಗಾರಿ ಎಷ್ಟು ವಿಳಂಬವಾಗಲಿದೆ? ಈ ಬಗ್ಗೆ ಬಿಎಂಆರ್​ಸಿಎಲ್ ಅಧಿಕಾರಿಗಳು ಹೇಳಿದ್ದೇನು? ಎಲ್ಲ ವಿವರಗಳು ಇಲ್ಲಿವೆ.

ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ
ಸುರಂಗ ಕೊರೆಯುವ ಯಂತ್ರ
Follow us
| Updated By: ಗಣಪತಿ ಶರ್ಮ

Updated on: Jun 14, 2024 | 7:32 AM

ಬೆಂಗಳೂರು, ಜೂನ್ 14: ನಮ್ಮ ಮೆಟ್ರೋದ (Namma Metro) ಬಹುನಿರೀಕ್ಷಿತ ಪಿಂಕ್ ಲೈನ್ (Pink LIne) ಕಾಮಗಾರಿ ‌ಮತ್ತಷ್ಟು ವಿಳಂಬವಾಗಲಿದೆ. ಈ ಮಾರ್ಗದ ಅಂಡರ್ ಗ್ರೌಂಡ್ ಕಾಮಗಾರಿಗಾಗಿ ನೆಲದೊಳಕ್ಕೆ ಇಳಿಸಿದ್ದ ಎರಡು ಟಿಬಿಎಂ ಮಷಿನ್​ಗಳಿಗೆ ಬಂಡೆಗಲ್ಲುಗಳು ಅಡ್ಡಿಯಾಗಿವೆ. ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕಿಸುವ ಪಿಂಕ್‌ ಲೈನ್​ನ 21 ಕಿಮೀ ಮಾರ್ಗದ 13 ಕಿಮೀ ಸುರಂಗ ಮಾರ್ಗದಲ್ಲಿ ಮೆಟ್ರೋ ಲೈನ್ ಹಾದು ಹೋಗ್ತಿದ್ದು ಇದು ಬೆಂಗಳೂರಿನ ಅತಿ ದೊಡ್ಡ ಮೆಟ್ರೋ ಸುರಂಗ ಕಾಮಗಾರಿಯಾಗಿದೆ. ಈ ಕಾಮಗಾರಿಗೆ ಈಗಾಗಲೇ ಒಂಬತ್ತು ಟಿಬಿಎಂ ಮಷಿನ್​ಗಳ‌ ಮೂಲಕ ಸುರಂಗ ಕಾಮಗಾರಿ ಮಾಡಲಾಗ್ತಿದೆ. ಏಳು ಟಿಬಿಎಂ ಮಷಿನ್​​​ಗಳು ಯಶ್ವಸಿಯಾಗಿ ಸುರಂಗ ಕೊರೆದು ಹೊರಗೆ ಬಂದಿದ್ದು, ಎರಡು ಟಿಬಿಎಂ ಮಷಿನ್​​ಗಳಿಗೆ ಇದೀಗ ಬಂಡೆಕಲ್ಲಿನ ಸವಾಲು ಎದುರಾಗಿದೆ ಇದರಿಂದ ಮೆಟ್ರೋ ಕಾಮಗಾರಿ ವಿಳಂಬವಾಗಲಿದೆ.

ತುಂಗಾ ಮತ್ತು ಭದ್ರಾ ಟಿಬಿಎಂ ಮಷಿನ್​​ಗಳು ಆಗಸ್ಟ್ ಒಳಗೆ ಸುರಂಗ ಕೊರೆದು ಹೊರ ಬರಬೇಕಿತ್ತು. ಆದರೆ ಬಂಡೆ ಕಲ್ಲುಗಳು ಸಿಕ್ಕಿರುವ ‌ಕಾರಣ ಈ ವರ್ಷದ ಕೊನೆಯವರೆಗೂ ಕಾಮಗಾರಿ ನಡೆಯಲಿದೆಯಂತೆ. ಮುಂದೆಯೂ ಬಂಡೆ ಕಲ್ಲುಗಳು ಎದುರಾದರೆ ಮತ್ತಷ್ಟು ವಿಳಂಬ ವಾಗಲಿದೆ. ತುಂಗಾ ಟಿಬಿಎಂ ಶೇ 45 ರಷ್ಟು ಸುರಂಗ ಕೊರೆದಿದ್ದು, ಭದ್ರಾ ಶೇ 22 ರಷ್ಟು ಸುರಂಗ ಕೊರೆದಿದೆ. ಈ ಎರಡು ಟಿಬಿಎಂಗಳು ಪ್ರತಿದಿನ ಐದು ಕಿಮೀ ನಷ್ಟು ಸುರಂಗ ಕೊರೆಯುವ ಸಾಮರ್ಥ್ಯ ಹೊಂದಿದ್ದು ಬಂಡೆಗಲ್ಲು ಸಿಕ್ಕಿರುವ ಕಾರಣ 3 ಕಿಮೀ ನಷ್ಟು ಮಾತ್ರ ಕೊರೆಯಲು ಸಾಧ್ಯವಾಗಲಿದೆ.

ಈ ಮಾರ್ಗದಲ್ಲಿ ಒಟ್ಟು 18 ಸ್ಟೇಷನ್ ಬರಲಿದ್ದು ಅದರಲ್ಲಿ ಆರು ಎಲಿವೇಟೆಡ್ 12 ಅಂಡರ್ ಗ್ರೌಂಡ್ ಸ್ಟೇಷನ್​​ಗಳು ಇರಲಿದೆ. ಈ ಬಗ್ಗೆ ಮಾತಾನಾಡಿದ ಮೆಟ್ರೋ ಅಧಿಕಾರಿಗಳು, ಸುರಂಗ ಕೊರೆಯುವ ಕಾರ್ಯ ಎರಡ್ಮೂರು ತಿಂಗಳು ಸುರಂಗ ತಡವಾಗಬಹುದು ಎಂದಿದ್ದಾರೆ. ಈ ಬಗ್ಗೆ ಬಿಎಂಆರ್​ಸಿಎಲ್​​​ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಕೂಡ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ

ಒಟ್ಟಿನಲ್ಲಿ ಆಗಸ್ಟ್ ವೇಳೆಗೆ ಎರಡು ಟಿಬಿಎಂ ಮಷಿನ್​ಗಳು ಸುರಂಗ ಕೊರೆದು ಹೊರಗೆ ಬರುತ್ತದೆ ಅಂದುಕೊಂಡಿದ್ದ ಮೆಟ್ರೋ ಅಧಿಕಾರಿಗಳಿಗೆ ಈ ಬಂಡೆಗಲ್ಲು ಅಡ್ಡಲಾಗಿ ಸಿಕ್ಕಿರುವುದು ದೊಡ್ಡ ತಲೆ ನೋವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್