ಬೆಂಗಳೂರು: ಇಂದು ಶನಿವಾರ (ಜೂನ್ 25)ರಂದು ನಮ್ಮ ಮೆಟ್ರೋ(Namma Metro) ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇಂದು ಎಂಜಿ ರಸ್ತೆ ಹಾಗೂ ಟ್ರಿನಿಟಿ ಮೆಟ್ರೋ ನಿಲ್ದಾಣದ ನಡುವೆ ನಿರ್ವಹಣೆ ಕಾಮಗಾರಿ ಹಿನ್ನಲೆ ರಾತ್ರಿ 9.30 ಗಂಟೆಯಿಂದ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇರಳೆ ಮಾರ್ಗದಲ್ಲಿ ಕೊನೆ ಮೆಟ್ರೋ ರೈಲು ಕೆಂಗೇರಿಯಿಂದ ಬೈಯಪ್ಪನಹಳ್ಳಿ ಕಡೆಗೆ ರಾತ್ರಿ 8.40ಕ್ಕೆ ಹೊರಡಲಿದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿ ಕಡೆ ರಾತ್ರಿ 9.30ಕ್ಕೆ ಮೆಟ್ರೋ ಸೇವೆ ಕೊನೆಯಾಗಲಿದೆ. ಭಾನುವಾರ ನೇರಳೆ ಮಾರ್ಗದಲ್ಲಿ ಎಂದಿನಂತೆ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಜೂನ್ 25ರ ಶನಿವಾರದಂದು ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ನಡೆಸಲಾಗುತ್ತಿದ್ದು ಮೆಟ್ರೋ ಸೇವೆಯಲ್ಲಿ ವ್ಯತ್ಯಾಸವಾಗಲಿದೆ. ನೇರಳೆ ಮಾರ್ಗದಲ್ಲಿ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ವರೆಗೆ ವಾಣಿಜ್ಯ ಸೇವೆಯನ್ನು ಸ್ಥಗಿತಗೊಳಿಸಲಿದೆ. ಜೂನ್ 25ರ ಶನಿವಾರ ರಾತ್ರಿ 9.30 ಗಂಟೆಯಿಂದ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಇದನ್ನೂ ಓದಿ: ಶ್ರೀರಂಗಪಟ್ಟಣದ ದರಸಗುಪ್ಪೆ ಗೇಟ್ ಬಳಿ ಸ್ಕೂಟರ್ಗೆ ಏಕಾಏಕಿ ಬೆಂಕಿ, ಇಬ್ಬರಿಗೆ ತೀವ್ರ ಸುಟ್ಟ ಗಾಯ
ನೇರಳೆ ಮಾರ್ಗದಲ್ಲಿ ಕೊನೆಯ ಮೆಟ್ರೋ ಸೇವೆಯು, ಕಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ರಾತ್ರಿ 8.40 ಗಂಟೆಗೆ ಹೊರಡಲಿದೆ ಮತ್ತು ಬೈಯಪ್ಪನಹಳ್ಳಿಯಿಂದ ಕಂಗೇರಿ ಕಡೆಗೆ ಕೊನೆಯ ಮೆಟ್ರೋ ರೈಲು ಸೇವೆ ರಾತ್ರಿ 09.30 ಗಂಟೆಗೆ ಲಭ್ಯವಿರುತ್ತದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ನಿಂದ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಹೋಗುವ ಕೊನೆಯ ರೈಲು ಸೇವೆ ರಾತ್ರಿ 9.10 ಗಂಟೆಯವರೆಗೆ ಲಭ್ಯವಿರುತ್ತದೆ. ಇನ್ನು ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಿರುವುದಿಲ್ಲ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
Published On - 7:20 pm, Fri, 24 June 22