AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರೇ ಗಮನಿಸಿ: ನೇರಳೆ ಮಾರ್ಗ ಸಂಬಂಧ ಮಹತ್ವದ ಮಾಹಿತಿ ಹಂಚಿಕೊಂಡ BMRCL

ನೇರಳೆ ಮಾರ್ಗದ ಮೆಟ್ರೋ ಕಾಮಗಾರಿ ನಿಗದಿತ ಸಮಯಕ್ಕಿಂತ ಮೊದಲೇ ಪೂರ್ಣಗೊಂಡಿದ್ದು, ಭಾನುವಾರ ಬೆಳಿಗ್ಗೆ 7 ಗಂಟೆಯಿಂದಲೇ ರೈಲು ಸಂಚಾರ ಎಂದಿನಂತೆ ಆರಂಭವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್ ಮೆಜೆಸ್ಟಿಕ್) ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 7 ಗಂಟೆಯಿಂದ 9ರ ವರೆಗೆ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಮೇ 29ರಂದು ಪ್ರಕಟಣೆ ಮೂಲಕ ಬಿಎಂಆರ್​​ಸಿಎಲ್​​ ತಿಳಿಸಿತ್ತು.

ಮೆಟ್ರೋ ಪ್ರಯಾಣಿಕರೇ ಗಮನಿಸಿ: ನೇರಳೆ ಮಾರ್ಗ ಸಂಬಂಧ ಮಹತ್ವದ ಮಾಹಿತಿ ಹಂಚಿಕೊಂಡ BMRCL
ಸಾಂದರ್ಭಿಕ ಚಿತ್ರImage Credit source: MURALI KUMAR K
ಕಿರಣ್​ ಸೂರ್ಯ
| Edited By: |

Updated on:May 31, 2026 | 7:57 AM

Share

ಬೆಂಗಳೂರು, ಮೇ 31: ನಿರ್ವಹಣಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಗಳು ಇಂದು (ಮೇ 31) ಬೆಳಿಗ್ಗೆ 7 ಗಂಟೆಯಿಂದಲೇ ಸಂಪೂರ್ಣವಾಗಿ ಲಭ್ಯವಿರುತ್ತವೆ. ಹೀಗಾಗಿ ಪ್ರಯಾಣಿಕರು ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್​​ಸಿಎಲ್​​ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲ ನಿಲ್ದಾಣಗಳ ನಡುವೆ ಇಂದು ಸಂಚಾರ ವ್ಯತ್ಯಯದ ಬಗ್ಗೆ ಈ ಹಿಂದೆಯೇ BMRCL ಮಾಹಿತಿ ನೀಡಿತ್ತು.

BMRCL ಪ್ರಕಟಣೆಯಲ್ಲಿ ಏನಿದೆ?

ನೇರಳೆ ಮಾರ್ಗದಲ್ಲಿರುವ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅತ್ಯಗತ್ಯ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಸುಗಮವಾಗಿ ಮತ್ತು ಸುರಕ್ಷಿತವಾಗಿ ನಿರ್ವಹಿಸುವ ಉದ್ದೇಶದಿಂದ ಮೇ 31ರ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್ ಮೆಜೆಸ್ಟಿಕ್) ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 7 ಗಂಟೆಯಿಂದ 9ರ ವರೆಗೆ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ. ಬೆಳಿಗ್ಗೆ 9 ಗಂಟೆಯ ನಂತರ ಇಡೀ ನೇರಳೆ ಮಾರ್ಗದಲ್ಲಿ ಎಂದಿನಂತೆ ಸಾಮಾನ್ಯ ಸೇವೆಗಳು ಪುನರಾರಂಭಗೊಳ್ಳಲಿವೆ ಎಂದು ಮೇ 29ರಂದು ಪ್ರಕಟಣೆ ಮೂಲಕ ಬಿಎಂಆರ್​​ಸಿಎಲ್​​ ತಿಳಿಸಿತ್ತು. ಆದರೆ ನಿರ್ವಹಣಾ ಕಾಮಗಾರಿಗಳು ನಿಗದಿತ ಸಮಯಕ್ಕೂ ಮೊದಲೇ ಮುಗಿದಿರುವ ಕಾರಣ ಬೆಳಿಗ್ಗೆ 9 ಗಂಟೆಯ ಬದಲು 7 ಗಂಟೆಯಿಂದಲೇ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಸಹಜ ಸ್ಥಿತಿಗೆ ಮರಳಿದೆ.

ಇದನ್ನೂ ಓದಿ: ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಕೊರತೆ ಹಿನ್ನೆಲೆ ನಿತ್ಯ ಪರದಾಟ; BMRCL ವಿರುದ್ಧ ಪ್ರಯಾಣಿಕರ ಆಕ್ರೋಶ

ವಾರಾಂತ್ಯ ಪ್ರಯಾಣಿಕರು ನಿರಾಳ

ರಜೆಯ ದಿನವಾದ ಭಾನುವಾರವೇ ಮೆಟ್ರೋ ಸೇವೆಯಲ್ಲಿ ವ್ಯತ್ಯಯದ ಬಗ್ಗೆ ಬಿಎಂಆರ್​​ಸಿಎಲ್​​ ತಿಳಿಸಿದ್ದ ಕಾರಣ ಪ್ರಯಾಣಿಕರು ಕೊಂಚ ನಿರಾಸೆಗೊಂಡಿದ್ದರು. ಆದರೆ  ಬಿಎಂಆರ್​​ಸಿಎಲ್​​ ನೀಡಿರುವ ಸುದ್ದಿ ಅವರಿಗೀಗ ನಿರಾಳರಾಗುವಂತೆ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:54 am, Sun, 31 May 26

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ