Shakti Scheme: ಶಕ್ತಿ ಯೋಜನೆಯಿಂದ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ

ಕರ್ನಾಟಕ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಇದರಿಂದ ಉದ್ಯಾನವನ ನಗರದ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಊಹಿಸಲಾಗಿತ್ತು. ಆದರೆ ಇದರ ತದ್ವಿರುದ್ಧವಾಗಿದ್ದು ಮೆಟ್ರೋ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ.

Shakti Scheme: ಶಕ್ತಿ ಯೋಜನೆಯಿಂದ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ
ನಮ್ಮ ಮೆಟ್ರೋ
Follow us
|

Updated on: Jul 23, 2023 | 12:30 PM

ಬೆಂಗಳೂರು: ಕರ್ನಾಟಕ ಸರ್ಕಾರ (Karnataka Government) ಶಕ್ತಿ ಯೋಜನೆಯಡಿ (Shakti Yojana) ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಇದರಿಂದ ಉದ್ಯಾನವನ ನಗರದ ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಊಹಿಸಲಾಗಿತ್ತು. ಆದರೆ ಇದರ ತದ್ವಿರುದ್ಧವಾಗಿದ್ದು ಮೆಟ್ರೋ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಹೌದು ಮೇ ತಿಂಗಳಲ್ಲಿ ಸರಾಸರಿ 5.6 ಲಕ್ಷ ಪ್ರಯಾಣಿಕರು ಪ್ರತಿದಿನ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದರು. ಶಕ್ತಿ ಯೋಜನೆ ಜಾರಿ ನಂತರ ಪ್ರಯಾಣಿಕರ ಸಂಖ್ಯೆ ದಿನಕ್ಕೆ 6.1 ಲಕ್ಷಕ್ಕೆ ಏರಿಕೆಯಾಗಿದೆ. ಅಂದರೇ ಪ್ರಯಾಣಿಕರ ಸಂಖ್ಯೆ 40,000ಕ್ಕೆ ಏರಿಕೆಯಾಗಿದೆ.

ಜುಲೈನಲ್ಲಿ (ಶುಕ್ರವಾರದವರೆಗೆ) ದೈನಂದಿನ ಪ್ರಯಾಣಿಕರ ಸಂಖ್ಯೆ 6.1 ಲಕ್ಷ ಗಡಿ ದಾಟಿದೆ. ಇದರ ಹಿಂದಿನವಾರ ಜುಲೈ 15 ರಂದು 6.7 ಲಕ್ಷ ಜನರು ಪ್ರಯಾಣಿಸುವ ಮೂಲಕ ಸಾರ್ವಕಾಲಿಕ ದಾಖಲೆಯಾಗಿದೆ.

ಇದನ್ನೂ ಓದಿ: Namma Metro: ನಮ್ಮ ಮೆಟ್ರೋದ 50 ನಿಲ್ದಾಣಗಳಲ್ಲಿ ಇನ್ಮುಂದೆ ರಾರಾಜಿಸಲಿದೆ ಒಳಾಂಗಣ ಜಾಹೀರಾತುಗಳು!

ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ಮಾತನಾಡಿ ಜನರನ್ನು ಹೆಚ್ಚು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳನ್ನು ಬಳಸಲು ಉತ್ತೇಜಿಸುವ ಮೂಲಕ ಶಕ್ತಿ ಯೋಜನೆಯು ತನ್ನ ಉದ್ದೇಶವನ್ನು ಸಾಧಿಸುತ್ತಿದೆ. ನಮ್ಮ ಮೆಟ್ರೋ ಯೋಜನೆಯಿಂದ ಋಣಾತ್ಮಕ ಪರಿಣಾಮ ಬೀರಿಲ್ಲ, ಬದಲಿಗೆ ಇದು ನಮ್ಮ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡಿದೆ. ಕೆಲಸದ ದಿನಗಳಲ್ಲಿ 6.2 ರಿಂದ 6.3 ಲಕ್ಷ ಜನರು ಪ್ರಯಾಣಿಸಿದ್ದಾರೆ. ಕೆಲವು ದಿನಗಳಲ್ಲಿ ಅದು 6.6 ಲಕ್ಷದ ಗಡಿ ದಾಟಿದೆ. ಇದರಿಂದ ದಿನಕ್ಕೆ 15 ಲಕ್ಷ ಆದಾಯವಾಗಿದೆ ಎಂದು ತಿಳಿಸಿದರು.

ಶಕ್ತಿ ಯೋಜನೆಯಿಂದ ಬಿಎಂಟಿಸಿ ಬಸ್​ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣ ಮಾಡಲು ಆರಂಭಿಸಿದರು. ಇದರಿಂದ ಬಸ್​ಗಳು ರಶ್​ ಆದವು. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯಮಿ ಹಾಗೂ ಪುರುಷರು ಕಿಕ್ಕಿರಿದು ತುಂಬಿದ್ದ ಬಸ್​​ಗಳಲ್ಲಿ ಪ್ರಯಾಣಿಸಲು ಇಚ್ಚಿಸದೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದೆ. ನಗರದಲ್ಲಿ, ನಮ್ಮ ಮೆಟ್ರೋ 70 ಕಿಮೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್