AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಶನಿವಾರ ಸಂಜೆ 4ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಈ ಮಾರ್ಗದಲ್ಲಿ ಮೆಟ್ರೊ ಸಂಚಾರ ಸ್ಥಗಿತ

Bengaluru Metro: ಟ್ರಿನಿಟಿ, ಹಲಸೂರು ಮೆಟ್ರೊ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿ ನಡೆಯಲಿದೆ ಎಂದು ಮೆಟ್ರೋ ಸಂಚಾರ ಸ್ಥಗಿತ ಬಗ್ಗೆ ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

Namma Metro: ಶನಿವಾರ ಸಂಜೆ 4ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಈ ಮಾರ್ಗದಲ್ಲಿ ಮೆಟ್ರೊ ಸಂಚಾರ ಸ್ಥಗಿತ
ನಮ್ಮ ಮೆಟ್ರೋ
TV9 Web
| Edited By: |

Updated on:Oct 08, 2021 | 2:41 PM

Share

ಬೆಂಗಳೂರು: ಮೆಟ್ರೊ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿ ನಡೆಯಲಿರುವ ಕಾರಣ ಎಂ.ಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಶನಿವಾರ (ಅಕ್ಟೋಬರ್ 9) ಸಂಜೆ 4ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ. ಟ್ರಿನಿಟಿ, ಹಲಸೂರು ಮೆಟ್ರೊ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿ ನಡೆಯಲಿದೆ ಎಂದು ಮೆಟ್ರೋ ಸಂಚಾರ ಸ್ಥಗಿತ ಬಗ್ಗೆ ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

KSRTC: ದಸರಾ ಪ್ರಯುಕ್ತ ಧರ್ಮಸ್ಥಳ, ಶಿವಮೊಗ್ಗ, ತಿರುಪತಿ ಸೇರಿ ವಿವಿಧೆಡೆಗೆ 1,000 ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್ ಸಂಚಾರ ನವರಾತ್ರಿ ಹಬ್ಬ ಶುರುವಾಗಿರುವುದರಿಂದ ಮುಂದಿನ ವಾರ ಸಾಲು ಸಾಲು ರಜೆಗಳಿವೆ. ಆಯುಧಪೂಜೆ, ವಿಜಯದಶಮಿ, ಶನಿವಾರ, ಭಾನುವಾರ, ಈದ್​ ಮಿಲಾದ್​ ಎಲ್ಲವೂ ಸಾಲು ಸಾಲಾಗಿ ಬಂದಿರುವುದರಿಂದ ಜನರು ತಮ್ಮ ಊರುಗಳಿಗೆ, ಪ್ರವಾಸಕ್ಕೆ ಹೋಗುವ ತಯಾರಿಯಲ್ಲಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಕೆಎಸ್​ಆರ್​ಟಿಯಿಂದ 1,000 ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದಸರಾ ಹಬ್ಬದ ಹಿನ್ನೆಲೆಯಲ್ಲಿ ಅ. 13ರಿಂದ ಅ. 21ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯದ ಸ್ಥಳಗಳಿಗೆ 1000 ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್‌ ಸಂಚಾರ ಮಾಡಲಿದೆ. ಕರ್ನಾಟಕದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ ಮುಂತಾದ ಸ್ಥಳಗಳಿಗೆ ಹೆಚ್ಚುವರಿ KSRTC ಬಸ್​ಗಳು ಸಂಚರಿಸಲಿವೆ.

ಹೊರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್‌, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮೊದಲಾದ ಸ್ಥಳಗಳಿಗೆ ಕೆಎಸ್​ಆರ್​ಟಿಸಿ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ಸಂಚರಿಸುವ ಈ ಹೆಚ್ಚುವರಿ ಬಸ್‌ಗಳ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ.

ಬಸ್​ಗಳಲ್ಲಿ ಪ್ರಯಾಣಿಸುವವರು ಕರ್ನಾಟಕ ರಸ್ತೆ ಸಾರಿಗೆ ನಿಗಮದ (KSRTC) ಅಧಿಕೃತ ವೆಬ್​ಸೈಟ್ ಮತ್ತು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿರುವ ಕೆಎಸ್​ಆರ್​ಟಿಸಿ ಬುಕಿಂಗ್‌ ಕೌಂಟರ್‌ಗಳಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಬಹುದು.

ಇದನ್ನೂ ಓದಿ: 

ಭಾರತೀಯ ಸೈನ್ಯಕ್ಕೆ ಸೇರಲು ತರಬೇತಿ; ಗ್ರಾಮೀಣ ಭಾಗದ ಯುವಕರಿಗೆ ದೈಹಿಕ ಮತ್ತು ಲಿಖಿತ ಪರೀಕ್ಷೆ ಬಗ್ಗೆ ಮಾಹಿತಿ 

17 ವರ್ಷದಿಂದ ಕಾಡಲ್ಲೇ ವಾಸ, ಕಾರೇ ಮನೆ! ನಾಗರಿಕ ಸಮಾಜವನ್ನು ಧಿಕ್ಕರಿಸಿ ಬದುಕುತ್ತಿರುವ ಸುಳ್ಯದ ವ್ಯಕ್ತಿಯ ಕಥೆಯಿದು

Published On - 2:29 pm, Fri, 8 October 21

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು