AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಹೊಸ ವರ್ಷಾಚರಣೆ: ನಮ್ಮ ಮೆಟ್ರೋ ಅವಧಿ ವಿಸ್ತರಿಸಿದ BMRCL

ಹೊಸ ವರ್ಷಾಚರಣೆ ಹಿನ್ನೆಲೆ ಬಿಎಂಆರ್​ಸಿಎಲ್ ನಮ್ಮ ಮೆಟ್ರೋ (Namma Metro) ಅವಧಿಯನ್ನು ವಿಸ್ತರಿಸಿದೆ. ಡಿಸೆಂಬರ್ 31ರಂದು ರಾತ್ರಿ 3 ಗಂಟೆ ಮೆಟ್ರೋ ಸಂಚಾರ ಅವಧಿಯನ್ನು ಬಿಎಂಆರ್​ಸಿಎಲ್ ವಿಸ್ತರಿಸಿದೆ. ಜನವರಿ 1ರ ಬೆಳಗಿನ ಜಾವ 2 ಗಂಟೆವರೆಗೂ ನಮ್ಮ ಮೆಟ್ರೋ ಸಂಚಾರ ಇರಲಿದೆ.

Namma Metro: ಹೊಸ ವರ್ಷಾಚರಣೆ: ನಮ್ಮ ಮೆಟ್ರೋ ಅವಧಿ ವಿಸ್ತರಿಸಿದ BMRCL
Namma Metro
TV9 Web
| Edited By: |

Updated on:Dec 29, 2022 | 1:08 PM

Share

ಹೊಸ ವರ್ಷಾಚರಣೆ ಹಿನ್ನೆಲೆ ಬಿಎಂಆರ್​ಸಿಎಲ್ ನಮ್ಮ ಮೆಟ್ರೋ (Namma Metro) ಅವಧಿಯನ್ನು ವಿಸ್ತರಿಸಿದೆ. ಡಿಸೆಂಬರ್ 31ರಂದು ರಾತ್ರಿ 3 ಗಂಟೆ ಮೆಟ್ರೋ ಸಂಚಾರ ಅವಧಿಯನ್ನು ಬಿಎಂಆರ್​ಸಿಎಲ್ ವಿಸ್ತರಿಸಿದೆ. ಜನವರಿ 1ರ ಬೆಳಗಿನ ಜಾವ 2 ಗಂಟೆವರೆಗೂ ನಮ್ಮ ಮೆಟ್ರೋ ಸಂಚಾರ ಇರಲಿದೆ. ಕೊನೆಯ ನಮ್ಮ ಮೆಟ್ರೋ ಸಂಚಾರ ರಾತ್ರಿ 2 ಗಂಟೆಗೆ ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನಾಲ್ಕು ದಿಕ್ಕಿಗೆ ಹೊರಡಲಿದೆ.

ಜನವರಿ 1 ರಂದು ಎಂದಿನಂತೆ 5.30 ಕ್ಕೆ ಮೆಟ್ರೋ ಸಂಚಾರ ಆರಂಭವಾಗಲಿದೆ, ಹೊಸ ವರ್ಷಾಚರಣೆ ಹಿನ್ನಲೆ ಎಂ.ಜಿ ರೋಡ್ ಬೈಯಪ್ಪನಹಳ್ಳಿ ಕಡೆಯಿಂದ ಸಂಚಾರ ಮಾಡುವ ಪ್ರಯಾಣಿಕರು ಮೆಟ್ರೋ ಬಳಕೆ ಮಾಡಲು ಮನವಿ ಮಾಡಲಾಗಿದೆ. BMRCL ಎಂ.ಡಿ ಅಂಜುಂ ಪರ್ವೇಜ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಹೊಸ ವರ್ಷದ ಸಂಭ್ರಮ ಆಚರಣೆಗೆ ಬೆಂಗಳೂರು ಪೊಲಿಸರು ಕೆಲವು ನಿಯಮಗಳನ್ನು ರೂಪಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಚಿತವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಂಚಾರ ದಟ್ಟಣೆ ತಗ್ಗಿಸುವ ದೃಷ್ಟಿಯಿಂದ ಸಾರ್ವಜನಿಕ ವಾಹನಗಳ ಬಳಕೆಗೆ ಸಾರ್ವಜನಿಕರಿಗೆ ಹಲವು ಸೂಚನೆ ನೀಡಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Thu, 29 December 22