AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ

Bengaluru Rains: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಸಂಜೆಯಾಗುತ್ತಿದ್ದಂತೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಗಾಳಿ ಮಳೆ ಶುರುವಾಗಿದೆ. ಬಿರುಗಾಳಿಯಿಂದಾಗಿ ಹಳಿ ಮೇಲೆ ಮರದ ಕೊಂಬೆ ಬಿದ್ದಿದ್ದು, ಪರಿಣಾಮ ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಮೆಟ್ರೋ ಸ್ಟೇಷನ್​​ ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ.

ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಗಾಳಿಯೊಂದಿಗೆ ಭಾರೀ ಮಳೆ, ನಮ್ಮ ಮೆಟ್ರೋ ಸಂಚಾರ ಸ್ಥಗಿತ
Purple Line Metro
ರಮೇಶ್ ಬಿ. ಜವಳಗೇರಾ
|

Updated on:May 26, 2026 | 7:20 PM

Share

ಬೆಂಗಳೂರು, (ಮೇ 26): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಭಾರೀ ಗುಡುಗು ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು (Rain), ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಸಿದೆ. ಅದರಲ್ಲೂ ಮರದ ಕೊಂಬೆ ಬಿದ್ದು ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ  ನಮ್ಮ ಮೆಟ್ರೋ (Namma Metro)  ಸಂಚಾರ ಸ್ಥಗಿತವಾಗಿದೆ. ಇದರಿಂದ ಮೆಟ್ರೋ ಸ್ಟೇಷನ್​​ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದು, ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಮನೆಗೆ ಹೋಗಲಾದೇ ಮೆಟ್ರೋ ನಿಲ್ದಾಣಗಳಲ್ಲೇ ಪರದಾಡುತ್ತಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಭಾರಿ ಮಳೆ
  • ಮುಂಜಾಗ್ರತಾ ಕ್ರಮವಾಗಿ K.R.ಸರ್ಕಲ್ ಅಂಡರ್​ಪಾಸ್ ಬಂದ್
  • ಐಟಿಪಿಎಲ್ –ಸತ್ಯಸಾಯಿ ಆಸ್ಪತ್ರೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ
  • ಹಳಿ ಮೇಲೆ ಮರದ ಕೊಂಬೆ ಬಿದ್ದ ಹಿನ್ನೆಲೆ ಮೆಟ್ರೋ ಸಂಚಾರಕ್ಕೆ ಅಡ್ಡಿ

ಹಳಿ ಮೇಲೆ ಬಿದ್ದ ಮರದ ಕೊಂಬೆ

ಮರದ ಕೊಂಬೆ ಹಳಿ ಮೇಲೆ ಬಿದ್ದ ಹಿನ್ನೆಲೆ ನೇರಳೆ ಮಾರ್ಗದ ಐಟಿಪಿಎಲ್ – ಸತ್ಯಸಾಯಿ ಆಸ್ಪತ್ರೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ಇನ್ನು ಸಂಜೆ 6 ಗಂಟೆಯಿಂದ ವೈಟ್‌ಫೀಲ್ಡ್ – ಗರುಡಾಚಾರ ಪಾಳ್ಯ ನಡುವೆ ಮೆಟ್ರೋ ಸೇವೆ ಬಂದ್ ಆಗಿದ್ದು, ಗರುಡಾಚಾರ ಪಾಳ್ಯ – ಚಲ್ಲಘಟ್ಟ ನಡುವೆ ಮಾತ್ರ ಮೆಟ್ರೋ ಸಂಚಾರ ಲಭ್ಯವಿದೆ. ಇನ್ನು ಅಡಚಣೆ ತೆರವಿಗೆ ಬಿಎಂಆರ್‌ಸಿಎಲ್ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಶೀಘ್ರದಲ್ಲೇ ಮೆಟ್ರೋ ಸೇವೆ ಪುನರಾರಂಭವಾಗುವ ನಿರೀಕ್ಷೆ ಎಂದು ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ನಿಂದ ಮಾಹಿತಿ ನೀಡಿದೆ.

ಇದನ್ನೂ ಓದಿ: Karnataka Weather Forecast: ತಿಂಗಳಾಂತ್ಯದವರೆಗೂ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆ ಆಗುತ್ತಿದ್ದಂತೆ ವರುಣನ ಆರ್ಭಟ ಆರಂಭವಾಗಿದೆ. ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು,  ಹಲವೆಡೆ ಟ್ರಾಫಿಕ್ ​ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ನಗರದ ಪ್ರಮುಖ ಕೇಂದ್ರಗಳಾದ ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಜೆ.ಪಿ.ನಗರ, ವಸಂತನಗರ, ಕೆ.ಆರ್. ಮಾರ್ಕೆಟ್, ಬನಶಂಕರಿ, ಕೋಣನಕುಂಟೆ, ಯಲಹಂಕ ಹಾಗೂ ಹೆಬ್ಬಾಳ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನುಳಿದಂತೆ ಸದಾಶಿವನಗರ, ರಾಜಾಜಿನಗರ, ವಿಜಯನಗರ, ಲಗ್ಗೆರೆ, ಚಂದ್ರಲೇಔಟ್, ಇಂದಿರಾನಗರ, ನಂದಿನಿ ಲೇಔಟ್, ಗಿರಿನಗರ, ಮಹಾಲಕ್ಷ್ಮೀ ಲೇಔಟ್, ಸುಬ್ರಹ್ಮಣ್ಯ ನಗರ, ನಾಗರಭಾವಿ, ಮೂಡಲಪಾಳ್ಯ ಮತ್ತು ಬಸವನಗುಡಿ ಸೇರಿದಂತೆ ನಗರದ ಬಹುತೇಕ ಎಲ್ಲಾ ಕಡೆಗಳಲ್ಲೂ ಎಡಬಿಡದೆ ಮಳೆ ಸುರಿಯುತ್ತಿದೆ.

ಕೆಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್

ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ ಆರ್ ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದೆ. ಸಣ್ಣ ಮಳೆಗೂ ಕೆ ಆರ್ ಸರ್ಕಲ್ ಅಂಡರ್ ಪಾಸ್ ಜಲಾವೃತವಾಗುತ್ತೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಹಾಕಿ ಅಂಡರ್ ಪಾಸ್ ಬಂದ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Tue, 26 May 26

Follow Us
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ!
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ