ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್: ಹೊಸ ವರ್ಷದಿಂದ ಮೆಟ್ರೋ ಟಿಕೆಟ್ ದರ ಹೆಚ್ಚಳ ಬಹುತೇಕ ಖಚಿತ

Namma Metro Ticket Price Hike: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮೆಟ್ರೋ ಜಾಲ ವಿಸ್ತರಣೆ ಆಗುತ್ತಿದೆ. ಪ್ರತಿದಿನ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡುವವರ ಸಂಖ್ಯೆ 9 ಲಕ್ಷ ದಾಟಿದೆ. ಅದೇ ರೀತಿ, ನಿರ್ವಹಣಾ ವೆಚ್ಚ ಕೂಡ ಹೆಚ್ಚಾಗಿದೆ. ಹಾಗಾಗಿ ಟಿಕೆಟ್ ದರ ಹೆಚ್ಚಳ ಮಾಡಲು ಬಿಎಂಆರ್​ಸಿಎಲ್ ಮುಂದಾಗಿದ್ದು, ಜನವರಿಯಲ್ಲಿ ಹೊಸ ದರ ಜಾರಿಯಾಗುವ ಎಲ್ಲಾ ಸಾಧ್ಯತೆಗಳಿದೆ ಎಂದು ಮೂಲಗಳು ತಿಳಿಸಿವೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್: ಹೊಸ ವರ್ಷದಿಂದ ಮೆಟ್ರೋ ಟಿಕೆಟ್ ದರ ಹೆಚ್ಚಳ ಬಹುತೇಕ ಖಚಿತ
ನಮ್ಮ ಮೆಟ್ರೋ ರೈಲು (ಸಾಂದರ್ಭಿಕ ಚಿತ್ರ)
Follow us
Kiran Surya
| Updated By: Ganapathi Sharma

Updated on: Dec 13, 2024 | 7:57 AM

ಬೆಂಗಳೂರು, ಡಿಸೆಂಬರ್ 13: ಏಳು ವರ್ಷಗಳಿಂದ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರಲಿಲ್ಲವೆಂದು ಆ ಬಗ್ಗೆ ಪರಾಮರ್ಶೆ ನಡೆಸಲು ಬಿಎಂಆರ್​ಸಿಎಲ್ ಸಮಿತಿ ರಚನೆ ಮಾಡಿತ್ತು. ಮೆಟ್ರೋ ಟಿಕೆಟ್ ದರ ಹೆಚ್ಚಳ ವಿಚಾರವಾಗಿ ಅಕ್ಟೋಬರ್ 28ರ ವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿರುವ ಸಮಿತಿ, ಆ ವರದಿಯನ್ನು ಈ ತಿಂಗಳ 3 ನೇ ವಾರದಲ್ಲಿ ಬಿಎಂಆರ್​ಸಿಎಲ್​ಗೆ ಸಲ್ಲಿಸಲಿದೆ. ವರದಿಯನ್ನು ಡಿಸೆಂಬರ್ ಕೊನೆಯ ವಾರದಲ್ಲಿ ಬಿಎಂಆರ್​ಸಿಎಲ್ ಸರ್ಕಾರಕ್ಕೆ ಸಲ್ಲಿಸಲಿದೆ.

ಮೆಟ್ರೋ ಟಿಕೆಟ್ ದರ ಶೇ 15 ರಷ್ಟು ಹೆಚ್ಚಳ ಪ್ರಸ್ತಾವಕ್ಕೆ ಸಿದ್ಧತೆ

ಮೆಟ್ರೋ ಟಿಕೆಟ್ ದರ ಶೇ 15 ರಷ್ಟು ಹೆಚ್ಚಳಕ್ಕೆ ನಮ್ಮ ಮೆಟ್ರೋ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದೇ ಆದಲ್ಲಿ ಜನವರಿಯಿಂದ ದರ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಮೆಟ್ರೋ ಟಿಕೆಟ್ ದರ ವಿವರ

ನಮ್ಮ ಮೆಟ್ರೋದಲ್ಲಿ ಕನಿಷ್ಠ 10 ರೂ. ಗರಿಷ್ಠ 60 ರೂ. ಪ್ರಯಾಣ ದರ ನಿಗದಿ ಮಾಡಲಾಗಿದೆ. ಕಾರ್ಯಾಚರಣೆ ವೆಚ್ಚ ಅಧಿಕವಾದ ಕಾರಣದಿಂದ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿದೆ. ಅಕ್ಟೋಬರ್-3 ರಿಂದ ಅ 28 ರವರೆಗೆ ಬಿಎಂಆರ್​ಸಿಎಲ್ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡಿದೆ.

ಆಕ್ಷೇಪದ ನಡುವೆಯೂ ದರ ಹೆಚ್ಚಳಕ್ಕೆ ಅಸ್ತು ಎಂದ ಸಮಿತಿ

ಸಾರ್ವಜನಿಕ ಅಭಿಪ್ರಾಯ ಅವಧಿಯಲ್ಲಿ ಬಹುತೇಕರು ದರ ಹೆಚ್ಚಳಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ಜನರ ಆಕ್ಷೇಪದ ನಡುವೆಯೂ ಟಿಕೆಟ್ ದರ ಹೆಚ್ಚಳಕ್ಕೆ ಸಮಿತಿ ಅಸ್ತು ಎಂದಿದೆ. ಹೀಗಾಗಿ ಶೇ 15 ರಷ್ಟು ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಾಧ್ಯತೆ ಇದೆ.

ಎಷ್ಟಾಗಲಿದೆ ಮೆಟ್ರೋ ಟಿಕೆಟ್ ದರ?

ಮೆಟ್ರೋ ಟಿಕೆಟ್ ದರ ಪರಿಷ್ಕರಣೆಯಾದರೆ ಕನಿಷ್ಠ ದರ 15 ರೂ. ಗರಿಷ್ಠ ದರ 75 ರೂ. ನಿಗದಿ ಮಾಡುವ ಸಾಧ್ಯತೆ ಇದೆ. ಮುಂದಿನ ತಿಂಗಳ ಆರಂಭದಲ್ಲಿ ನೇರಳೆ ಹಾಗೂ ಹಸಿರು ಮಾರ್ಗದ ಮೆಟ್ರೋ ಪ್ರಯಾಣ ದುಬಾರಿಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಬಿಎಂಟಿಸಿ ಆರ್ಥಿಕ ಕುಸಿತಕ್ಕೆ ಕಾರಣ ಬಹಿರಂಗ: ಸಿಎಜಿ ವರದಿಯಿಂದ ಬಯಲಾಯ್ತು ಸ್ಫೋಟಕ ಅಂಶ

ಈ ಬಗ್ಗೆ ಬಿಎಂಆರ್​ಸಿಎಲ್ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಪ್ರತಿಕ್ರಿಯಿಸಿದ್ದು, ದರ ಹೆಚ್ಚಳ ಸಮಿತಿ ಇನ್ನೂ ವರದಿ ಸಲ್ಲಿಸಿಲ್ಲ. ವರದಿ ಸಲ್ಲಿಸಿದ ನಂತರ ನಾವು ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ