AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಗೆ ಅಭಿಪ್ರಾಯ ಸಂಗ್ರಹ ಅವಧಿ ವಿಸ್ತರಣೆ

ತಾವು ಹೋಗಬೇಕಾದ ಸ್ಥಳಕ್ಕೆ ಬೇಗನೆ ತಲುಪಲು ಬೆಂಗಳೂರು ಜನರು ನಮ್ಮ ಮೆಟ್ರೋ ಮೊರೆ ಹೋಗುತ್ತಾರೆ. ನಮ್ಮ ಮೆಟ್ರೋ ವೇಗದ ಮತ್ತು ಆರಮದಾಯಕ ಪ್ರಯಾಣಕ್ಕೆ ಅನುಕೂಲಕಾರಿಯಾಗಿದೆ. ನಮ್ಮ ಮೆಟ್ರೋದಲ್ಲಿ ಇದೇ ವರ್ಷ ಆಗಸ್ಟ್​ವರೆಗೆ 9 ಲಕ್ಷ ಜನರು ಸಂಚರಿಸಿದ್ದರು. ಈ ಸಂಖ್ಯೆ ಏರುತ್ತಲೇ ಇದೆ. ಇದೀಗ ಬಿಎಂಆರ್​ಸಿಎಲ್​ ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಗೆ ಮುಂದಾಗಿದೆ.

ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಗೆ ಅಭಿಪ್ರಾಯ ಸಂಗ್ರಹ ಅವಧಿ ವಿಸ್ತರಣೆ
ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆ ಸಾಧ್ಯತೆ
Kiran Surya
| Updated By: ವಿವೇಕ ಬಿರಾದಾರ|

Updated on:Oct 20, 2024 | 1:55 PM

Share

ಬೆಂಗಳೂರು, ಅಕ್ಟೋಬರ್​ 20: ಬೆಂಗಳೂರು (Bengaluru) ಜನರ ವೇಗದ ಮತ್ತು ಆರಾಮದಾಯಕ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ (Namma Metro) ಅನುಕೂಲಕರವಾಗಿದೆ. ನಮ್ಮ ಮೆಟ್ರೋದಲ್ಲಿ ನಿತ್ಯ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಮ್ಮ ಮೆಟ್ರೋ ರೈಲು ಟಿಕೆಟ್​ ದರ ಏರಿಸಲು ಮುಂದಾಗಿದೆ. ಈ ಬಗ್ಗೆ ಪ್ರಯಾಣಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ ಅವಧಿಯನ್ನು ಬಿಎಂಆರ್​ಸಿಎಲ್​ ವಿಸ್ತರಿಸಿದೆ.

ಟಿಕೆಟ್​ ದರ ಏರಿಕೆ ಬಗ್ಗೆ ಅಭಿಪ್ರಾಯ ತಿಳಿಸಲು ಬಿಎಂಆರ್​ಸಿಎಲ್ ಈ ಹಿಂದೆ​ ಅಕ್ಟೋಬರ್​ 21ರವರೆಗೆ ಗಡುವು ನೀಡಿತ್ತು. ಬಿಎಂಆರ್​ಸಿಎಲ್​ ಗಡುವು ಅವಧಿಯನ್ನು ವಿಸ್ತರಿಸಿದ್ದು, ಸಾರ್ವಜನಿಕರಿಗೆ ಅಕ್ಟೋಬರ್​ 28ರವರಗೆ ಸಮಯ ನೀಡಿದೆ.

ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ffc@bmrc.co.inಗೆ ಕಳುಹಿಸಬಹುದು. ಇಲ್ಲವೇ ಅಂಚೆ ಮೂಲಕ ಬಿಎಂಆರ್​ಸಿಎಲ್​​ ಒಂದನೇ ಶುಲ್ಕ ನಿಗದಿ ಸಮಿತಿ ಅಧ್ಯಕ್ಷರಿಗೆ ಕಳುಹಿಸಬಹುದು. ಅಥವಾ ವಾಟ್ಸಾಪ್​ ಸಂಖ್ಯೆ 9448291173ಗೂ ನಿಮ್ಮ ಸಲಹೆ ಕಳುಹಿಸಬಹುದಾಗಿದೆ ಎಂದು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ನಾಗಸಂದ್ರ-ಮಾದಾವರ ಮೆಟ್ರೋ ಸಂಬಂಧ ಡಿಕೆಶಿ, ಕೇಂದ್ರ ಸಚಿವರಿಗೆ ತೇಜಸ್ವಿ ಸೂರ್ಯ ಪತ್ರ

ಎಷ್ಟು ರೂಪಾಯಿ ಏರಿಕೆ?

ಕಳೆದ ಏಳು ವರ್ಷದಿಂದ ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಯಾಗಿಲ್ಲ. ಇದೀಗ ಬಿಎಂಆರ್​​ಸಿಎಲ್​ ಟಿಕೆಟ್​ ದರ ಏರಿಸಲು ಮುಂದಾಗಿದೆ. ಟಿಕೆಟ್​ ದರ ಏರಿಕೆ ಸಂಬಂಧ “ದಿ ಫೇರ್​ ಪಿಕ್ಸೇಷನ್​ ಕಮಿಟಿ” ರಚನೆಯಾಗಿದ್ದು, ಈ ಸ್ವತಂತ್ರ ಸಂಸ್ಥೆ ಎಷ್ಟು ರೂಪಾಯಿ ಏರಿಕೆ ಮಾಡಬೇಕೆಂದು ನಿರ್ಧರಿಸುತ್ತದೆ.

“ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಕಮಿಟಿ ಇದಾಗಿದ್ದು, ಕಮಿಟಿಯು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಲಿದೆ. ಖರ್ಚು, ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ” ಎಂದು ಬಿಎಂಆರ್​ಸಿಎಲ್​​ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಹೇಳಿದ್ದಾರೆ.

ನಮ್ಮ ಮೆಟ್ರೋದ ಕನಿಷ್ಠ ದರ 10 ರೂ. ಆಗಿದ್ದು, ಗರಿಷ್ಠ ದರ 60 ರೂ. ಆಗಿದೆ. ಮೂಲಗಳಿಂದ ಬಂದ ಮಾಹಿತಿ ಪ್ರಕಾರ ಈಗ 15 ರಿಂದ 20 ರಷ್ಟು ಟಿಕೆಟ್​ ದರ ಏರಿಕೆ ಮಾಡಲು ಬಿಎಂಆರ್​ಸಿಎಲ್​ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:53 pm, Sun, 20 October 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ