ನಾಳೆಯಿಂದ ನಮ್ಮ ಮೆಟ್ರೋ ಸಂಚಾರ ಯಥಾಸ್ಥಿತಿ; ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೂ ರೈಲುಗಳ ಕಾರ್ಯಾಚರಣೆ

ಸದ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ಹಿನ್ನಲೆ ಮೊದಲಿನ ಫ್ರೀಕ್ವೆನ್ಸಿಯಲ್ಲೇ ಮೆಟ್ರೋ ರೈಲುಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮೆಟ್ರೋ ನಿಗಮದ ಎಂಡಿ ಅಂಜುಂ ಫರ್ವೇಜ್ ಮಾಹಿತಿ ನೀಡಿದ್ದಾರೆ.

ನಾಳೆಯಿಂದ ನಮ್ಮ ಮೆಟ್ರೋ ಸಂಚಾರ ಯಥಾಸ್ಥಿತಿ; ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೂ ರೈಲುಗಳ ಕಾರ್ಯಾಚರಣೆ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: preethi shettigar

Updated on:Jan 21, 2022 | 5:56 PM

ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್​ ಕರ್ಫ್ಯೂ (Weekend Curfew) ರದ್ದು ಹಿನ್ನೆಲೆ ನಮ್ಮ ಮೆಟ್ರೋ (Namma metro) ಸಂಚಾರ ನಾಳೆಯಿಂದ (ಜನವರಿ 22) ಯಥಾಸ್ಥಿತಿಯಲ್ಲಿರಲಿದೆ. ಆ ಪ್ರಕಾರ ಪ್ರತಿ ಐದು ನಿಮಿಷಕ್ಕೆ ಒಂದರಂತೆ ಮೆಟ್ರೋ ರೈಲು ಸಂಚಾರ ಮಾಡಲಿದೆ. ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೂ ನಮ್ಮ ಮೆಟ್ರೋ ರೈಲುಗಳು ಕಾರ್ಯಾಚರಣೆ ನಡೆಸಲಿವೆ. ರಾತ್ರಿ 9 ಗಂಟೆಗೆ ಟರ್ಮಿನಲ್ ಸ್ಟೇಷನ್​ನಿಂದ‌ ಕೊನೆಯ ರೈಲು ಹೊರಡಲಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಗಳಿಗೆ ಒಂದು ರೈಲು (Train) ಕಾರ್ಯಾಚರಣೆಯಾಗುತ್ತಿತ್ತು. ಸದ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ಹಿನ್ನಲೆ ಮೊದಲಿನ ಫ್ರೀಕ್ವೆನ್ಸಿಯಲ್ಲೇ ಮೆಟ್ರೋ ರೈಲುಗಳ ಕಾರ್ಯಾಚರಣೆ ನಡೆಯಲಿದೆ ಎಂದು ಮೆಟ್ರೋ ನಿಗಮದ ಎಂಡಿ ಅಂಜುಂ ಫರ್ವೇಜ್ ಮಾಹಿತಿ ನೀಡಿದ್ದಾರೆ.

ವೀಕೆಂಡ್ ಕರ್ಫ್ಯೂ​ ವೇಳೆ ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ಇತ್ತು ವೀಕೆಂಡ್ ಕರ್ಫ್ಯೂ​ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿರಲಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸುತ್ತಿತ್ತು. ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆ ಇರಲಿಲ್ಲ. ಆದರೆ ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ಇತ್ತು. ಮೆಟ್ರೋ ರೈಲಿನಲ್ಲಿ  1800-1900 ಜನ ಪ್ರಯಾಣಿಸುತ್ತಿದ್ದರು. ಕೊವಿಡ್​ ಹೆಚ್ಚಳ ಹಿನ್ನೆಲೆ 800-900 ಜನ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು. ಕೊರೊನಾ ನಿಯಮ ಪಾಲಿಸಿ ಮೆಟ್ರೋ ರೈಲು ಓಡಿಸಲು ನಿರ್ಧಾರ ಮಾಡಿದ್ದೇವೆ. ನಮ್ಮ ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಿ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಕ್ಕೊಂದು ಮೆಟ್ರೋ ಸಂಚಾರ ಮಾಡುತ್ತಿತ್ತು.

ವೀಕೆಂಡ್​ ಕರ್ಫ್ಯೂ ರದ್ದು ರಾಜ್ಯದಲ್ಲಿ ಈವರೆಗೆ ಜಾರಿಯಲ್ಲಿದ್ದ ವೀಕೆಂಡ್​ ಕರ್ಫ್ಯೂವನ್ನು ರದ್ದು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಚಿವ ಆರ್​ ಅಶೋಕ್​, ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗೋಷ್ಟಿ ನಡೆಸ ಮಾಹಿತಿ ನೀಡಿದ್ದಾರೆ. ನಾಳೆಯಿಂದ ವೀಕೆಂಡ್​ ಕರ್ಫ್ಯೂ ಇರುವುದಿಲ್ಲ. ತಜ್ಞರ ಸಲಹೆಯ ಮೇರೆಗೆ  ಈ ನಿರ್ಧಾರ ಕೈಗೊಳ್ಳಲಾಗಿದೆ.  ಆದರೆ ರಾಜ್ಯದಲ್ಲಿ ನೈಟ್​ಕರ್ಫ್ಯೂ ಇರಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಹಾಗೂ ಉಳಿದ ಕೊವಿಡ್ ನಿಯಮ ಎಂದಿನಂತೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ​​ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿಲ್ಲ; ಆದರೆ ಗಮನಿಸಿ, ಶೇ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ

Weekend Curfew: ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ತೆರವು: ಕಠಿಣ ನಿಯಮ ಜಾರಿಗೆ ನಿರ್ಧಾರ

Published On - 5:52 pm, Fri, 21 January 22