AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ನಮ್ಮ ಮೆಟ್ರೋ ಪ್ರಯಾಣ ದರ ಎಷ್ಟು? ಕೆಂಗೇರಿಗೆ ಸದ್ಯ 10 ನಿಮಿಷಕ್ಕೊಂದು ರೈಲು

ವಿಸ್ತರಿಸಿದ ನೇರಳೆ ಮಾರ್ಗದ ಪ್ರಯಾಣ ದರವನ್ನು ನಿಗದಿ ಪಡಿಸಲಾಗಿದ್ದು, ಬೈಯಪ್ಪನಹಳ್ಳಿಯಿಂದ ಕೇಂಗೇರಿಗೆ 56 ರೂಪಾಯಿ. ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಗೆ 45 ರೂಪಾಯಿ ಟಿಕೆಟ್ ದರವಿದೆ.

ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ನಮ್ಮ ಮೆಟ್ರೋ ಪ್ರಯಾಣ ದರ ಎಷ್ಟು? ಕೆಂಗೇರಿಗೆ ಸದ್ಯ 10 ನಿಮಿಷಕ್ಕೊಂದು ರೈಲು
ನಮ್ಮ ಮೆಟ್ರೋ
TV9 Web
| Updated By: preethi shettigar|

Updated on: Aug 23, 2021 | 7:53 AM

Share

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಆರಂಭವಾದ ನಾಯಂಡಹಳ್ಳಿ- ಕೆಂಗೇರಿ ಮೆಟ್ರೋ ರೈಲು ಸಂಚಾರ ಸೇವೆಯು ಹತ್ತು ನಿಮಿಷಗಳಿಗೆ ಒಂದು ರೈಲು ಕಾರ್ಯಚರಿಸಲು ಮೆಟ್ರೋ ನಿಗಮ ನಿರ್ಧರಿಸಿತ್ತು. ಆದರೆ ಈಗ ಪ್ರಯಾಣಿಕರ ದಟ್ಟಣೆ ನೋಡಿ ರೈಲು ಸಂಚಾರ ಸೇವೆಯನ್ನು ಮತ್ತಷ್ಟು ಹೆಚ್ಚಿಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಇನ್ನಿತರ ಸಮಯದಲ್ಲಿ 10 ನಿಮಿಷಗಳಿಗೆ ಒಂದರಂತೆ ರೈಲು ಸಂಚಾರ ಇರುತ್ತದೆ. ಅಂದರೆ ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ಬೆಳಿಗ್ಗೆ 7 ರಿಂದ 11 ಗಂಟೆ ಮತ್ತು ಸಂಜೆ 4.30 ರಿಂದ 7.30 ರವರೆಗೆ ಇರಲಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಾಗ 5 ರಿಂದ 8 ನಿಮಿಷಗಳಿಗೆ ಒಂದರಂತೆ ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ರೈಲು ಸಂಚರಿಸಲಿದೆ ಎಂದು ಬಿಎಂಆರ್​ಸಿಎಲ್​ ಅಧಿಕಾರಿಗಳು ಹೇಳಿದ್ದಾರೆ.

ಮೆಟ್ರೋ ರೈಲುಗಳು ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ನಡುವೆ ಮಾತ್ರ ಸಂಚರಿಸಲಿದೆ. ಅನಿವಾರ್ಯತೆ ಇದ್ದಾಗ ಮಾತ್ರ ಕಡಿಮೆ ಸಮಯಕ್ಕೆ ಒಂದರಂತೆ ರೈಲು ಸಂಚರಿಸಲು ಬಿಎಂಆರ್​ಸಿಎಲ್ ಕ್ರಮಕೈಗೊಳ್ಳಲಿದೆ. 7.5 ಕಿಲೋಮೀಟರ್ ವಿಸ್ತರಿಸಿದ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಿಸಿದರೆ, ಒಟ್ಟು 55 ಕಿಲೋಮೀಟರ್ ಬಿಎಂಆರ್​ಸಿಎಲ್ ನಗರದಲ್ಲಿ ಮೆಟ್ರೋ ಸಂಚರಿಸಿದಂತಾಗುತ್ತದೆ.

ಇನ್ನು ವಿಸ್ತರಿಸಿದ ನೇರಳೆ ಮಾರ್ಗದ ಪ್ರಯಾಣ ದರವನ್ನು ನಿಗದಿ ಪಡಿಸಲಾಗಿದ್ದು, ಬೈಯಪ್ಪನಹಳ್ಳಿಯಿಂದ ಕೇಂಗೇರಿಗೆ 56 ರೂಪಾಯಿ. ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಗೆ 45 ರೂಪಾಯಿ ಟಿಕೆಟ್ ದರವಿದೆ. ಅದರಂತೆ ಮೈಸೂರು ರಸ್ತೆಯಿಂದ ಕೆಂಗೇರಿವಗರೆಗೆ 6 ಮೆಟ್ರೋ ನಿಲ್ದಾಣಗಳು ಬರಲಿದೆ.

55 ಕಿಲೋಮೀಟರ್ ಸಂಚಾರ ಸಂಪರ್ಕ ಸಾಧಿಸಿರುವ ಪೈಕಿ ದೆಹಲಿ ಹಾಗೂ ಹೈದರಾಬಾದ್ ಮೊದಲೇರಡು ಸ್ಥಾನ ಕಾಯ್ದುಕೊಂಡಿದೆ. ಬೆಂಗಳೂರು ಮೆಟ್ರೋ ನಂತರದ ಸ್ಥಾನದಲ್ಲಿದೆ. ನಾಗಸಂದ್ರ -ರೇಷ್ಮೆ ಸಂಸ್ಥೆ ವರೆಗಿನ ಹಸಿರು ಮಾರ್ಗ 30 ಕಿಲೋಮಿಟರ್, ಬೈಯಪ್ಪನಹಳ್ಳಿ ಕೆಂಗೇರಿವರೆಗಿನ ನೇರಳೆ ಮಾರ್ಗ 25 ಕಿಲೋಮೀಟರ್ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Neo Metro: ಮೈಸೂರಿಗೆ ಬರಲಿರುವ ನಿಯೋ ಮೆಟ್ರೋ ವಿಶೇಷತೆಗಳೇನು? ರಸ್ತೆಯ ಮೇಲೆ ಓಡಾಡುವ ರೈಲು ಹೇಗಿರಲಿದೆ?

Namma Metro: ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಆಗಸ್ಟ್ 29 ಮಧ್ಯಾಹ್ನ 12 ಗಂಟೆಯಿಂದ ಮೆಟ್ರೋ ಸಂಚಾರ ಆರಂಭ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್