ಮೆಟ್ರೋ ಕಾಮಗಾರಿ: ಶಿವಾಜಿನಗರದ ಈ ರಸ್ತೆಗಳಲ್ಲಿ 30 ದಿನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ

Bangalore Traffic Advisroy: ಮೆಟ್ರೋ ಕಾಮಗಾರಿಯಿಂದಾಗಿ ಬೆಂಗಳೂರಿನ ಶಿವಾಜಿನಗರದ ಈ ರಸ್ತೆಗಳಲ್ಲಿ ಒಂದು ತಿಂಗಳ ಕಾಲ ಸಂಚಾರ ನಿರ್ಬಂಧಿಸಲಾಗಿದೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಸಮೀಪದ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಮೆಟ್ರೋ ಕಾಮಗಾರಿ: ಶಿವಾಜಿನಗರದ ಈ ರಸ್ತೆಗಳಲ್ಲಿ 30 ದಿನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
|

Updated on: Nov 09, 2024 | 7:41 AM

ಬೆಂಗಳೂರು, ನವೆಂಬರ್​ 09: ಬೆಂಗಳೂರಿನ (Bengaluru) ಶಿವಾಜಿನಗರ (Shivajinagar) ಸುತ್ತಮುತ್ತ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ಒಂದು ತಿಂಗಳಕಾಲ ನಿರ್ಭಂದಿಸಲಾಗಿದೆ. ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದ್ದಾರೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಮೆಟ್ರೋ (ಬಿಎಂಆರ್​ಸಿಎಲ್) ವತಿಯಿಂದ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ನ.11) ರಿಂದ 30 ದಿನಗಳ ಕಾಲ ಈ ಕೆಳಗಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ

ಬಾಳೆಕುಂದ್ರಿಯಿಂದ ಶಿವಾಜಿ ಸರ್ಕಲ್ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಿಎಂಟಿಸಿ ಬಸ್ ಮತ್ತು ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ. ಶಿವಾಜಿ ರಸ್ತೆಯ ಮೂಲಕ ಶಿವಾಜಿ ಸರ್ಕಲ್ ಕಡೆಯಿಂದ ಜೋತಿ ಕೆಫೆ ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ ವಾಹನ ಸಂಚಾರ ಭಾಗಶಃ ನಿಷೇಧ: ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಪರ್ಯಾಯ ಮಾರ್ಗ

ಬಾಳೆಕುಂದ್ರಿಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಸ್ ಹಾಗೂ ಎಲ್ಲಾ ಮಾದರಿಯ ವಾಹನಗಳು ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

ಶಿವಾಜಿ ರಸ್ತೆಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಎಲ್ಲಾ ಮಾದರಿಯ ವಾಹನಗಳು ಶಿವಾಜಿ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ವೆಂಕಟಸ್ವಾಮಿ ನಾಯ್ಡು ರಸ್ತೆಯ ಮೂಲಕ ಬಾಳೆಕುಂದ್ರಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಟ್ರಾಫಿಕ್ ಹೆಡ್ ಕ್ವಾಟರ್ಸ್​​ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್‌ನಲ್ಲಿ ಎಡ ತಿರುವು ತೆಗೆದುಕೊಂಡು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​