AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಬೆಂಗಳೂರಿಗರ ಸಂಚಾರ ಜೀವನಾಡಿಯಾದ್ರೂ 20 ನಿಲ್ದಾಣಗಳಿಗಿಲ್ಲ ದೊಡ್ಡ ಮಟ್ಟದ ಪ್ರಯಾಣಿಕರ ಸಂಖ್ಯೆ!

ಬೆಂಗಳೂರಿನಲ್ಲಿ ಪ್ರತಿದಿನ 11 ರಿಂದ 12 ಲಕ್ಷ ಜನರು 'ನಮ್ಮ ಮೆಟ್ರೋ' ಬಳಸುತ್ತಿದ್ದರೂ, ಮೂರೂ ಮಾರ್ಗಗಳ ಒಟ್ಟು 20 ನಿಲ್ದಾಣಗಳಲ್ಲಿ ಹೆಚ್ಚಿನ ಪ್ರಮಾಣದ ಪ್ರಯಾಣಿಕರ ಸಂಚಾರವಿಲ್ಲ ಎಂಬ ಕುತೂಹಲಕಾರಿ ಮಾಹಿತಿ ಬಹಿರಂಗಗೊಂಡಿದೆ. ಯೆಲ್ಲೋ ಲೈನ್​​ನ 9, ಗ್ರೀನ್​​ ಲೈನ್​​ನ 7 ಮತ್ತು ನೇರಳೆ ಮಾರ್ಗದ ನಾಲ್ಕು ನಿಲ್ದಾಣಗಳು ಈ ಪಟ್ಟಿಗೆ ಸೇರಿವೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ನಮ್ಮ ಮೆಟ್ರೋ ಬೆಂಗಳೂರಿಗರ ಸಂಚಾರ ಜೀವನಾಡಿಯಾದ್ರೂ 20 ನಿಲ್ದಾಣಗಳಿಗಿಲ್ಲ ದೊಡ್ಡ ಮಟ್ಟದ ಪ್ರಯಾಣಿಕರ ಸಂಖ್ಯೆ!
ನಮ್ಮ ಮೆಟ್ರೋ ರೈಲು (ಫೈಲ್​​ ಚಿತ್ರ)Image Credit source: Getty Images
ಕಿರಣ್​ ಸೂರ್ಯ
| Edited By: |

Updated on:Sep 08, 2026 | 9:42 AM

Share

ಬೆಂಗಳೂರು, ಸೆಪ್ಟೆಂಬರ್​​ 07: ಬೆಂಗಳೂರಿನ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವುದು ಮತ್ತು ವೇಗವಾಗಿ ಬೆಳೆಯುತ್ತಿರುವ ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ನಮ್ಮ ಮೆಟ್ರೋ ರೈಲುಗಳಲ್ಲಿ ಪ್ರತಿನಿತ್ಯ ಲಕ್ಷಾಂತರ ಮಂದಿ ಓಡಾಟ ನಡೆಸುತ್ತಿದ್ದಾರೆ. ಹಸಿರು, ನೇರಳೆ ಮತ್ತು ಹಳದಿ ಮಾರ್ಗಗಳಲ್ಲಿ ಈಗಾಗಲೇ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುತ್ತಿದೆ. ಒಂದು ಹಂತಕ್ಕೆ ಬೆಂಗಳೂರಿಗರ ವೇಗದ ಸಂಚಾರ ಜೀವನಾಡಿ ಎಂಬಷ್ಟರ ಮಟ್ಟಿಗೆ ಸಾರ್ವಜನಿಕರು ನಮ್ಮ ಮೆಟ್ರೋ ರೈಲುಗಳನ್ನು ಅವಲಂಬಿಸಿದ್ದಾರೆ. ಹೀಗಿದ್ದರೂ ಅಚ್ಚರಿಯ ಮಾಹಿತಿಯೊಂದು ಬಹಿರಂಗಗೊಂಡಿದೆ.

20 ಮೆಟ್ರೋ ನಿಲ್ದಾಣಗಳಲ್ಲಿಲ್ಲ ದೊಡ್ಡ ಮಟ್ಟದ ಪ್ರಯಾಣಿಕರ ಸಂಖ್ಯೆ!

ಹೌದು, ಗ್ರೀನ್ ,ಪರ್ಪಲ್ ಮತ್ತು ಯೆಲ್ಲೋ ಲೈನ್ ಸೇರಿ ಪ್ರತಿದಿನ 11 ರಿಂದ 12 ಲಕ್ಷ ಜನ ನಮ್ಮ ಮೆಟ್ರೋ ರೈಲುಗಳಲ್ಲಿ ಪ್ರಯಾಣ ಮಾಡುತ್ತಾರೆ. ಹೀಗಿದ್ದರೂ ಬೆಂಗಳೂರಿನ 20 ನಿಲ್ದಾಣಗಳಿಂದ ದೊಡ್ಡ ಮಟ್ಟದಲ್ಲಿ ಪ್ರಯಾಣಿಕರು ಸಂಚರಿಸುತ್ತಿಲ್ಲ ಎಂಬ ಮಾಹಿತಿ ಲಭಿಸಿದೆ. ಯೆಲ್ಲೋ ಲೈನ್​​ನ 9, ಗ್ರೀನ್​​ ಲೈನ್​​ನ 7 ಮತ್ತು ನೇರಳೆ ಮಾರ್ಗದ ನಾಲ್ಕು ನಿಲ್ದಾಣಗಳು ಈ ಪಟ್ಟಿಗೆ ಸೇರಿವೆ.

ಇದನ್ನೂ ಓದಿ: ಸೋಲಾರ್ ನಿಂದ ನಮ್ಮ ಮೆಟ್ರೋ ರೈಲು ಓಡಿಸಲು ಪ್ಲ್ಯಾನ್: ಕೋಟ್ಯಂತರ ರೂ ಉಳಿತಾಯ

ಅತಿ ಕಡಿಮೆ ಪ್ರಯಾಣಿಕರನ್ನು ಹೊಂದಿರುವ ಮೆಟ್ರೋ ನಿಲ್ದಾಣಗಳು

ನಮ್ಮ ಮೆಟ್ರೋ ಹಳದಿ ಮಾರ್ಗ
ಮೆಟ್ರೋ ನಿಲ್ದಾಣ ಪ್ರಯಾಣಿಕರ ಸಂಖ್ಯೆ
ಬೆರಟೆನ ಅಗ್ರಹಾರ 1243
ಸಿಂಗಸಂದ್ರ 2539
ಹೆಬ್ಬಗೋಡಿ 2739
ಹುಸ್ಕೂರು ರಸ್ತೆ 3169
ರಾಗಿ ಗುಡ್ಡ 4652
ಹೊಸ ರಸ್ತೆ 5324
ಹೊಂಗಸಂದ್ರ 5378
ಎಲೆಕ್ಟ್ರಾನಿಕ್ ಸಿಟಿ 5546
ಕೂಡ್ಲು ಗೇಟ್ 5615
ನಮ್ಮ ಮೆಟ್ರೋ ಹಸಿರು ಮಾರ್ಗ
ಮಂಜುನಾಥನಗರ 1411
ಪೀಣ್ಯ ಇಂಡಸ್ಟ್ರಿ 2676
ತಲಘಟ್ಟಪುರ 3349
ಚಿಕ್ಕಬಿದರಕಲ್ಲು 4519
ಪೀಣ್ಯ 4956
ದೊಡ್ಡಕಲ್ಲಸಂದ್ರ 5827
ಮಹಾಕವಿ ಕುವೆಂಪು ರಸ್ತೆ 5869

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿವೆ 4 ನಿಲ್ದಾಣಗಳು

ನಮ್ಮ ಮೆಟ್ರೋ ನೇರಳೆ ಮಾರ್ಗದ ನಾಯಂಡಹಳ್ಳಿಯಲ್ಲಿ 2645, ಹೋಪ್ ಫಾರ್ಮ್​​ನಿಂದ 3192, ದೀಪಾಂಜಲಿ ನಗರದಿಂದ 4610 ಮತ್ತು ಜ್ಞಾನಭಾರತಿ ಮೆಟ್ರೋ ನಿಲ್ದಾಣದಿಂದ 5218 ಪ್ರಯಾಣಿಕರು ಪ್ರತಿದಿನ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:06 pm, Mon, 7 September 26

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ