AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ್ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು!

ಮಹಾರಾಷ್ಟ್ರದ ನಾಂದೇಡ್-ಬೀದರ್ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲಾಗಿದೆ. ಅಶೋಕ್ ಚವಾಣ್ ಪತ್ರದ ಪ್ರಕಾರ, ಕರ್ನಾಟಕ ಸರ್ಕಾರದ ಅನುಮತಿ ಮತ್ತು ಆರ್ಥಿಕ ಭರವಸೆ ಸಿಕ್ಕಿಲ್ಲ. ಈ 155 ಕಿ.ಮೀ. ಯೋಜನೆಯು ಮಹಾರಾಷ್ಟ್ರದ ಪಾಲನ್ನು ಅನುಮೋದಿಸಿದೆ ಆದರೆ ಕರ್ನಾಟಕ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ. ಯೋಜನೆ ಪೂರ್ಣಗೊಂಡರೆ, ಇದು ಯಾತ್ರಾಸ್ಥಳಗಳನ್ನು ಸಂಪರ್ಕಿಸಿ, ಬೆಂಗಳೂರಿಗೆ ಪ್ರಯಾಣದ ದೂರ ಕಡಿಮೆ ಮಾಡಿ, ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ ಎಂದು ಅವರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ್ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು!
ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು!
ಭಾವನಾ ಹೆಗಡೆ
|

Updated on:Feb 14, 2026 | 2:57 PM

Share

ಬೆಂಗಳೂರು, ಫೆಬ್ರವರಿ 14: ಮಹಾರಾಷ್ಟ್ರದ ನಾಂದೇಡ್​ ಮತ್ತು ಕರ್ನಾಟಕದ ಬೀದರ ನಡುವೆ ಹೊಸ ರೈಲು ಮಾರ್ಗ ಯೋಜನೆಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ (B Y Vijayendra) ಅವರಿಗೆ ಉತ್ತರಿಸಿ ಪತ್ರ ಬರೆದಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್, ವಿಳಂಬಕ್ಕೆ ಕಾರಣವೇನೆಂದು ವಿವರಿಸಿದ್ದಾರೆ.

ಚವಾಣ್ ಪತ್ರದಲ್ಲೇನಿದೆ?

ನಾಂದೇಡ್​–ಬೀದರ ನಡುವಿನ ಹೊಸ ರೈಲು ಮಾರ್ಗ ಯೋಜನೆಗೆ ಕರ್ನಾಟಕ ಸರ್ಕಾರದ ಅನುಮೋದನೆ ಇನ್ನೂ ಲಭಿಸದ ಹಿನ್ನೆಲೆಯಲ್ಲಿ ಯೋಜನೆ ಜಾರಿಗೆ ತಡವಾಗುತ್ತಿದೆ ಎಂದು ಪತ್ರದಲ್ಲಿ ವಿವರಿಸಿರುವ ಚವಾಣ್, ಸುಮಾರು 155 ಕಿಲೋಮೀಟರ್ ಉದ್ದದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಸುಮಾರು 100 ಕಿಲೋಮೀಟರ್ ಭಾಗ ಮಹಾರಾಷ್ಟ್ರ ರಾಜ್ಯ ವ್ಯಾಪ್ತಿಗೆ ಒಳಪಡುತ್ತದೆ. ಯೋಜನೆ ಪೂರ್ಣಗೊಂಡಲ್ಲಿ ನಾಂದೇಡ್​ ಮತ್ತು ಬೆಂಗಳೂರು ನಡುವಿನ ಪ್ರಯಾಣದ ದೂರ ಕಡಿಮೆಯಾಗುವ ಸಾಧ್ಯತೆ ಇದ್ದು, ಎರಡೂ ರಾಜ್ಯಗಳ ಸಾಮಾಜಿಕ, ಧಾರ್ಮಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಣೆ ಇದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಈ ಯೋಜನೆಯನ್ನು 50:50 ವೆಚ್ಚ ಹಂಚಿಕೆ ಆಧಾರದಲ್ಲಿ ಜಾರಿಗೆ ತರಲು ತೀರ್ಮಾನಿಸಿದೆ. ಮಹಾರಾಷ್ಟ್ರ ಸರ್ಕಾರವು ತನ್ನ ಪಾಲಿನ ವೆಚ್ಚಕ್ಕೆ ಈಗಾಗಲೇ ಸಚಿವ ಸಂಪುಟದ ಅನುಮೋದನೆ ನೀಡಿ ಯೋಜನೆಗೆ ಬದ್ಧತೆ ವ್ಯಕ್ತಪಡಿಸಿದೆ. ಆದರೆ, ಕರ್ನಾಟಕ ಸರ್ಕಾರದಿಂದ ಇನ್ನೂ ಅಧಿಕೃತ ಒಪ್ಪಿಗೆ ಹಾಗೂ ಹಣಕಾಸಿನ ಭರವಸೆ ಸಿಕ್ಕಿಲ್ಲ ಎಂದು ಚವಾಣ್ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ಈ ರೈಲು ಮಾರ್ಗ ಕಾರ್ಯರೂಪಕ್ಕೆ ಬಂದರೆ ನಾಂದೇಡ್​‌ನ ಶ್ರೀ ಹಜೂರ್ ಸಾಹಿಬ್ ಹಾಗೂ ಬೀದರ‌ನ ನಾನಕ್ ಝೀರಾ ಸಾಹಿಬ್ ಯಾತ್ರಾಕ್ಷೇತ್ರಗಳು ನೇರ ಸಂಪರ್ಕ ಪಡೆಯಲಿವೆ. ಇದರಿಂದ ಯಾತ್ರಿಗಳಿಗೆ ಅನುಕೂಲವಾಗುವುದರ ಜೊತೆಗೆ ಪ್ರವಾಸೋದ್ಯಮ, ವ್ಯಾಪಾರ ಹಾಗೂ ಉದ್ಯೋಗಾವಕಾಶಗಳ ವೃದ್ಧಿಗೂ ಸಹಕಾರಿ ಆಗಲಿದೆ ಎಂದು ಅಶೋಕ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:39 pm, Sat, 14 February 26

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?