ಶಾಲಾ ಪಠ್ಯಪುಸ್ತಕದಲ್ಲಿ ನಾರಾಯಣ ಗುರು ವಿಷಯ ಕೈಬಿಟ್ಟಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

ಸಾರ್ವಜನಿಕರು ಸುಳ್ಳು ವದಂತಿಗಳನ್ನ ನಂಬಬಾರದು. ವಿರೋಧ ಪಕ್ಷಗಳು ಸಹ ಇಂತಹ ವದಂತಿ ಹರಡಬಾರದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

ಶಾಲಾ ಪಠ್ಯಪುಸ್ತಕದಲ್ಲಿ ನಾರಾಯಣ ಗುರು ವಿಷಯ ಕೈಬಿಟ್ಟಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ
ಸಚಿವ ಕೋಟ ಶ್ರೀನಿವಾಸ ಪೂಜಾರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:May 20, 2022 | 2:24 PM

ಬೆಂಗಳೂರು: ಪಠ್ಯಪುಸ್ತಕ ಪರಿಶೀಲನಾ ಸಮಿತಿ 10ನೇ ತರಗತಿ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ (Hedgewar) ಅವರ ಭಾಷಣ ಸೇರಿಸಿದ್ದಕ್ಕೆ ವಿವಾದ ಸೃಷ್ಟಿಯಾಗಿತ್ತು. ಅದೇ ರೀತಿಯಾಗಿ SSLC ಪಠ್ಯದಿಂದ ನಾರಾಯಣ ಗುರುಗಳ (Narayana Guru) ವಿಷಯವನ್ನು ಕೈಬಿಟ್ಟಿದೆ ಎನ್ನಲಾಗುತ್ತಿದ್ದು, ಈ ಕುರಿತಾಗಿ ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಶಾಲಾ ಪಠ್ಯಪುಸ್ತಕದಲ್ಲಿ ನಾರಾಯಣ ಗುರು ವಿಷಯ ಕೈಬಿಟ್ಟಿಲ್ಲ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಜೊತೆಗೆ ನಾನು ಮಾತಾಡಿದ್ದೇನೆ. ಅಂತಹ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂದು ಹೇಳಿದ್ದಾರೆ. ಹಾಗಾಗಿ ಸಾರ್ವಜನಿಕರು ಸುಳ್ಳು ವದಂತಿಗಳನ್ನ ನಂಬಬಾರದು. ವಿರೋಧ ಪಕ್ಷಗಳು ಸಹ ಇಂತಹ ವದಂತಿ ಹರಡಬಾರದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಹಿಂದಿನಿಂದಲೂ ನಾರಾಯಣಗುರುವನ್ನು ಬದಿಗೆ ಸರಿಸುತ್ತಿದ್ದಾರೆ: ಡಿಕೆ ಶಿವಕುಮಾರ್ ಆರೋಪ

ನಾರಾಯಣ ಗುರುಗಳಿಗೆ ಸಂಬಂಧಿಸಿದ ಪಾಠವನ್ನು ಯಾವುದೇ ಕಾರಣಕ್ಕೆ ಬದಲಿಸಬಾರದು. ಮೊದಲಿನಿಂದಲೂ ನಾರಾಯಣ ಗುರುಗಳನ್ನು ಬದಿಗೆ ಸರಿಸಲು ಯತ್ನಿಸುತ್ತಿದ್ದಾರೆ. ನಾರಾಯಣ ಗುರುಗಳ ಪಾಠ ತೆಗೆದಿಲ್ಲ ಎಂದು ಈಗ ಹೇಳುತ್ತಿದ್ದಾರೆ. ಆದರೆ ಹಿಂದೆ ಗುರುಗಳಿಗೆ ಸಂಬಂಧಿಸಿದ ಪಾಠ ಬದಲಿಸುವ ಚಿಂತನೆಯಿತ್ತು. ನಾರಾಯಣ ಗುರುಗಳ ಟ್ಯಾಬ್ಲೂ ತೆಗೆದಾಗಲೂ ಸುನಿಲ್ ಕುಮಾರ್ ಏನೂ ಮಾತನಾಡಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮಗೆ ನಮ್ಮ ಇತಿಹಾಸವನ್ನು ಸರಿಯಾದ ಕ್ರಮದಲ್ಲಿ ಕಲಿಸುವ ಪಠ್ಯಪುಸ್ತಕಗಳು ಬೇಕು. ಭಗತ್ ಸಿಂಗ್ ಬಗ್ಗೆ ಹಿಂದೆ ಏನೆಲ್ಲಾ ಇತ್ತೋ ಅದನ್ನೆಲ್ಲಾ ಉಳಿಸಿಕೊಳ್ಳಬೇಕು. ರಾಮಾಯಣ ಮತ್ತು ಮಹಾಭಾರತದ ಕಥೆಗಳ ಪಾಠವೂ ಬೇಕು. ನಾರಾಯಣ ಗುರುಗಳಿಗೆ ಸಂಬಂಧಿಸಿದ ಪಾಠ ತೆಗೆದಿಲ್ಲ ಎಂದು ಈಗ ಹೇಳುತ್ತಿದ್ದಾರೆ. ಆದರೆ ಅಂಥ ಚಿಂತನೆ ಇತ್ತು ಎಂದು ಶಂಕಿಸಿದರು.

ಇದನ್ನೂ ಓದಿ: ಸಿಎಂ ಹೇಮಂತ್ ಸೊರೇನ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಜಾರ್ಖಂಡ್ ಸರ್ಕಾರ

ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ: ಸಚಿವ ವಿ.ಸುನಿಲ್ ಕುಮಾರ್

ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಶಿಕ್ಷಣ ಸಚಿವರು ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಸಮಾಜದಲ್ಲಿದ್ದ ವಿಷಯವೊಂದನ್ನು ಕನ್ನಡಕ್ಕೆ ಸೇರಿಸಲಾಗಿದೆ. ನಾರಾಯಣಗುರು, ಭಗತ್ ಸಿಂಗ್ ವಿಚಾರವನ್ನು ಕೈಬಿಟ್ಟಿಲ್ಲ. ಆರ್​ಎಸ್​ಎಸ್​ ಸಂಸ್ಥಾಪಕ ಕೇಶವ ಬಲಿರಾಂ ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಕೇಳಿದರು.

ಗಂಗಾ ಕಲ್ಯಾಣ ಯೋಜನೆ ಭ್ರಷ್ಟಾಚಾರ ಆರೋಪ

ಗಂಗಾ ಕಲ್ಯಾಣ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ವಿಚಾರವಾಗಿ ಮಾತನಾಡಿದ್ದು, ಎಸ್​ಸಿ, ಎಸ್​ಟಿಗಳಿಗೆ ನೀಡುವ ಯೋಜನೆಯಲ್ಲಿ ಅಕ್ರಮವಾಗಿಲ್ಲ. 2 ಗುಂಪುಗಳ ನಡುವೆ ಟೆಂಡರ್ ಸಿಕ್ಕಿದ್ದು, ಸಂಘರ್ಷಕ್ಕೆ ಕಾರಣವಾಗಿದೆ. ದಾವೆ ಹೂಡಿದ್ರೂ ಅವರ ವಿರುದ್ಧ ಅಭಿಪ್ರಾಯ ವ್ಯಕ್ತವಾಗಿದೆ. ಕೋರ್ಟ್​​ನಲ್ಲಿ ಅವರ ವಿರುದ್ಧ ಅಭಿಪ್ರಾಯ ವ್ಯಕ್ತವಾಗಿದೆ. ಮೂರು ಸಾವಿರ ಕೊಳವೆಬಾವಿಗಳನ್ನು ಕೊರೆದಿದ್ದಾರೆ. ಪ್ರಿಯಾಂಕ್ ಖರ್ಗೆ ಸದನದಲ್ಲಿ ಕೇಳಿದಾಗ ಉತ್ತರ ನೀಡಿದ್ದೇನೆ. ಟೆಂಡರ್‌ನಲ್ಲಿ ಯಾವುದೇ ಗೋಲ್​ಮಾಲ್ ನಡೆದಿಲ್ಲ. ಈಗಾಗಲೇ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದೇವೆ. ವರದಿ ಬಂದ ಬಳಿಕ ಎಲ್ಲರನ್ನೂ ತನಿಖೆಗೆ ಒಳಪಡಿಸುತ್ತೇನೆ. ನನ್ನನ್ನೂ ಸೇರಿದಂತೆ ಎಲ್ಲರನ್ನೂ ತನಿಖೆಗೆ ಒಳಪಡಿಸುತ್ತೇನೆ. ಖರ್ಗೆ ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:23 pm, Fri, 20 May 22

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ