ಹಿಂದುಳಿದ ಜಾತಿಯ ಸೌಲಭ್ಯ ಪಡೆದಿಲ್ಲ: ಜಾತಿ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿದ ನಾರಾಯಣ ಮೂರ್ತಿ, ಸುಧಾಮೂರ್ತಿ ಕೊಟ್ಟ ಕಾರಣವಿದು

ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ಭಾಗವಹಿಸಲು ನಿರಾಕರಿಸಿದ್ದಾರೆ. ಕೆಲವು ವೈಯಕ್ತಿಕ ಕಾರಣಗಳಿಂದ ಸಮೀಕ್ಷೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಅವರು ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ ಪತ್ರ ಬರೆಯುವ ಮೂಲಕ ಉತ್ತರಿಸಿದ್ದಾರೆ.

ಹಿಂದುಳಿದ ಜಾತಿಯ ಸೌಲಭ್ಯ ಪಡೆದಿಲ್ಲ: ಜಾತಿ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿದ ನಾರಾಯಣ ಮೂರ್ತಿ, ಸುಧಾಮೂರ್ತಿ ಕೊಟ್ಟ ಕಾರಣವಿದು
ನಾರಾಯಣಮೂರ್ತಿ, ಸುಧಾಮೂರ್ತಿ
Updated By: ಗಂಗಾಧರ​ ಬ. ಸಾಬೋಜಿ

Updated on: Oct 16, 2025 | 11:27 AM

ಬೆಂಗಳೂರು, ಅಕ್ಟೋಬರ್​ 15: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಉರಫ್​ ಜಾತಿ ಸಮೀಕ್ಷೆ (Caste Survey) ಬಹುತೇಕ ಮುಕ್ತಾಯ ಹಂತಕ್ಕೆ ತಲುಪಿದಂತಾಗಿದೆ. ಜನಸಾಮಾನ್ಯರು ಸೇರಿದಂತೆ ರಾಜಕೀಯ ನಾಯಕರು ಸಮೀಕ್ಷೆಯಲ್ಲಿ ಭಾಗವಹಿಸಿದ್ದಾರೆ. ಸಮೀಕ್ಷೆಯಲ್ಲಿ  ಭಾಗವಹಿಸುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವೆಂದು ಆಯೋಗ ಈಗಾಗಲೇ ಸ್ಪಷ್ಟನೆ ನೀಡಿದೆ. ಹೀಗಾಗಿ ಇನ್ಫೋಸಿಸ್​​ ಮುಖ್ಯಸ್ಥರಾದ ನಾರಾಯಣ ಮೂರ್ತಿ ಹಾಗೂ ಸುಧಾ ನಾರಾಯಣ ಮೂರ್ತಿ (Sudha Murty) ಅವರು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದು, ಹಿಂದುಳಿದ ಜಾತಿಯ ಯಾವುದೇ ಸೌಲಭ್ಯ ಪಡೆದಿಲ್ಲ ಎಂದಿದ್ದಾರೆ.

ಈ ಕುರಿತಾಗಿ ನಾರಾಯಣ ಮೂರ್ತಿ ಹಾಗೂ ಸುಧಾ ನಾರಾಯಣ ಮೂರ್ತಿ ಅವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಮ್ಮ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತಿದ್ದೇವೆ. ನಾವು ಹಿಂದುಳಿದ ಯಾವು ಜಾತಿಗೂ ಸೇರುವರಲ್ಲ. ಆದ್ದರಿಂದ ಈ ಸಮೀಕ್ಷೆ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಹಾಗಾಗಿ ನಮ್ಮ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುದಿಲ್ಲ ಮತ್ತು ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇವೆ’ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಸದಾಶಿವನಗರಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್​ ಮನೆಯಲ್ಲಿ ಗಣತಿದಾರರು ಸಮೀಕ್ಷೆ ಮಾಡಿದ್ದರು. ಡಿಕೆ ಶಿವಕುಮಾರ್​ ಸೇರಿದಂತೆ ಕುಟುಂಬದವರು ಭಾಗಹಿಸಿದ್ದರು. ಧರ್ಮ, ಜಾತಿ ಸೇರಿದಂತೆ ಪ್ರಮುಖ ಪ್ರಶ್ನೆಗಳನ್ನ ಕೇಳಲಾಗಿತ್ತು. ಅದರಂತೆ ಡಿಕೆ ಶಿವಕುಮಾರ್​ ಸಮಾಧಾನವಾಗಿ ಉತ್ತರ ಕೊಟ್ಟಿದ್ದರು.

ಇದನ್ನೂ ಓದಿ: ನಿಗದಿತ ಗುರಿ ತಲುಪುವಲ್ಲಿ ವಿಫಲ: ರಾಜ್ಯದಲ್ಲಿ ಮತ್ತೆ ವಿಸ್ತರಣೆಯಾಗುತ್ತಾ ಜಾತಿಗಣತಿ ಅವಧಿ?

ಎಷ್ಟೆಲ್ಲಾ ಮಾಹಿತಿ ಕೊಟ್ಟ ಡಿಕೆ ಶಿವಕುಮಾರ್​ಗೆ​ ಗಣತಿದಾರರ ಮತ್ತಷ್ಟು ಪ್ರಶ್ನೆಗಳನ್ನ ಕೇಳಿದ್ದರು. ತರತರ ಪ್ರಶ್ನೆಗೆ ಮರು ಪ್ರಶ್ನೆ ಮಾಡಿದ್ದರು. ಪ್ರಶ್ನೆ ಕೇಳೋಕೆ ಇಷ್ಟೊತ್ತು ಯಾಕೆ ತೆಗೆದುಕೊಳ್ತೀರಾ?, ಟೂ ಮಚ್​ ಕ್ವಶ್ಚನ್ ಎಂದು ಗರಂ ಆಗಿದ್ದರು. ​

ಇದನ್ನೂ ಓದಿ: ಜಾತಿಗಣತಿಯಲ್ಲಿ ಭಾಗವಹಿಸದಿರುವುದು ಉತ್ತಮ: ಹಿರಿಯ ನ್ಯಾಯವಾದಿ ಬಿವಿ ಆಚಾರ್ಯ ಹೀಗೆ ಹೇಳಿದ್ದೇಕೆ?

ಇನ್ನು ಜಾತಿಗಣತಿಯಲ್ಲಿ ಭಾಗವಹಿಸದೆ ಇರುವುದು ಸೂಕ್ತ. ಒಂದು ವೇಳೆ ಭಾಗವಹಿಸಿದರೆ, ವೈಯಕ್ತಿಕ ಮಾಹಿತಿಯ ದುರುಪಯೋಗ ಪಡಿಸಿಕೊಳ್ಳುವ ಅಪಾಯವಿದೆ ಎಂದು ಇತ್ತೀಚೆಗೆ ಹಿರಿಯ ನ್ಯಾಯವಾದಿ ಬಿ.ವಿ ಆಚಾರ್ಯ ಅವರು ಅಭಿಪ್ರಾಯಪಟ್ಟಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:34 pm, Wed, 15 October 25