AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್‌ ಜೈಲು ನೋಡಿದ್ರೆ ರಾಹುಲ್‌ ಗಾಂಧಿ ಚಡ್ಡಿ ಪ್ಯಾಂಟ್‌ ಒದ್ದೆ ಆಗುತ್ತೆ, ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಸಮವಿಲ್ಲ – ಸಿ.ಟಿ.ರವಿ

CT Ravi : ಕಾಂಗ್ರೆಸ್ ಪಕ್ಷ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಭ್ರಷ್ಟಾಚಾರ ಮುಚ್ಚಿಹಾಕಲು ಬೀದಿಗಿಳಿದು ನಾಟಕ ಮಾಡುತ್ತಿದ್ದಾರೆ. ಪ್ರಕರಣದ ಸಮಗ್ರ ತನಿಖೆ ಆಗಬೇಕು, ಮೂಲ ಷೇರುದಾರರಿಗೆ ಆದಾಯ ಹಂಚಿಕೆ ಆಗಬೇಕು ಎಂದು ರವಿ ಆಗ್ರಹಿಸಿದ್ದಾರೆ.

ಅಂಡಮಾನ್‌ ಜೈಲು ನೋಡಿದ್ರೆ ರಾಹುಲ್‌ ಗಾಂಧಿ ಚಡ್ಡಿ ಪ್ಯಾಂಟ್‌ ಒದ್ದೆ ಆಗುತ್ತೆ, ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಸಮವಿಲ್ಲ - ಸಿ.ಟಿ.ರವಿ
ಸಿ ಟಿ ರವಿ
TV9 Web
| Updated By: ಸಾಧು ಶ್ರೀನಾಥ್​|

Updated on:Jun 13, 2022 | 4:08 PM

Share

ಬೆಂಗಳೂರು: ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ (National Herald) ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಜಾರಿ ನಿರ್ದೇಶನಾಲಯ ಬುಲಾವ್ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್​ ಪಕ್ಷ ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದೆ (Congress Protest). ಆದರೆ ಆಡಳಿತಾರೂಢ ಬಿಜೆಪಿ ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಆ ಪಕ್ಷದ ನಡೆ ವಿರುದ್ಧ ಸಿಡಿದೆದ್ದಿದ್ದಾರೆ. ಇ.ಡಿ. ನೋಟಿಸ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಸುದ್ದಿಗೋಷ್ಠಿ ನಡೆಸಿ, ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲಿನವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಹಗರಣಗಳ ಸರದಾರ ಕಾಂಗ್ರೆಸ್ ಪಾರ್ಟಿ. ಕಾಲಿನಿಂದ ತಲೆವರೆಗೂ ಹಗರಣ ಹೊದ್ದುಕೊಂಡಿದೆ. ಆಡು ಮುಟ್ಟದ ಸೊಪ್ಪಿಲ್ಲ, ಹಗರಣ ಮಾಡದ ಕಾಂಗ್ರೆಸ್​ನವರಿಲ್ಲ. ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟರೇ ಬೆಂಬಲ ನೀಡ್ತಿದ್ದಾರೆ. ಗಾಂಧಿ ಕುಟುಂಬವನ್ನ ಕಾಪಾಡಿಕೊಳ್ಳಲು ಕಾರ್ಯಕರ್ತರ ಬಳಕೆ ನಡೆದಿದೆ. ಮೇವು ತಿಂದವರ ಜೊತೆ ಪೇಪರ್ ತಿಂದವರೂ ಜೈಲಿಗೆ ಹೋಗ್ತಾರೆ ಎಂದು ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.

ಇದನ್ನು ಓದಿ:

ಜೂನ್ 20, 21 ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ

ಇನ್ನು, ನಾನು ಸಾವರ್ಕರ್ ಅಲ್ಲ ಅಂತಾ ರಾಹುಲ್ ಗಾಂಧಿ ಪೋಸ್ಟರ್ ರಾರಾಜಿಸುತ್ತಿರುವ ಬಗ್ಗೆ ಮಾತನಾಡಿದ ಸಿ.ಟಿ.ರವಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರವಾಗಿ ಕಿಡಿಕಾರಿದರು. ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಗಾಂಧಿಗೆ ಯೋಗ್ಯತೆ ಇಲ್ಲ. ಅಂಡಮಾನ್‌ ಜೈಲು ನೋಡಿದ್ರೆ ಅವರ ಚಡ್ಡಿ, ಪ್ಯಾಂಟ್‌ನಲ್ಲಿ ಒದ್ದೆ ಆಗುತ್ತೆ. ಈ ಜನ್ಮ, ಮುಂದಿನ ಜನ್ಮದಲ್ಲೂ ಸಾವರ್ಕರ್ ಆಗಲು ಅವರಿಗೆ ಸಾಧ್ಯವಿಲ್ಲ. ಸಾವರ್ಕರ್ ಆಗಲು ರಾಹುಲ್‌ಗಾಂಧಿಗೆ ಸಾಧ್ಯವೇ ಇಲ್ಲ. ಕಾಂಗ್ರೆಸ್ ಪಕ್ಷ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಭ್ರಷ್ಟಾಚಾರ ಮುಚ್ಚಿಹಾಕಲು ಬೀದಿಗಿಳಿದು ನಾಟಕ ಮಾಡುತ್ತಿದ್ದಾರೆ. ಪ್ರಕರಣದ ಸಮಗ್ರ ತನಿಖೆ ಆಗಬೇಕು, ಮೂಲ ಷೇರುದಾರರಿಗೆ ಆದಾಯ ಹಂಚಿಕೆ ಆಗಬೇಕು. ಭ್ರಷ್ಟಾಚಾರ ಮುಚ್ಚಿ ಹಾಕಲು ಈ ಷಡ್ಯಂತ್ರ ಮಾಡಿದ್ದಾರೆ ಎಂದು ರವಿ ಹೇಳಿದ್ದಾರೆ.

ಇದನ್ನು ಓದಿ: ಇಡಿ ವಿಚಾರಣೆಗೆ ಇಂದು ರಾಹುಲ್ ಗಾಂಧಿ ಹಾಜರು, ಕಾಂಗ್ರೆಸ್​ ಪ್ರತಿಭಟನೆಗೆ ದೆಹಲಿ ಪೊಲೀಸರಿಂದ ಅನುಮತಿ ನಿರಾಕರಣೆ

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Mon, 13 June 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?