AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​​ವೇ ‌ದಶಪಥ ಅಲ್ಲ, ಟೋಲ್ ದರ ಬಗ್ಗೆಯೂ ಮಾಹಿತಿ ನೀಡಿದ ಯೋಜನಾ ನಿರ್ದೇಶಕ

Bengaluru Mysuru Expressway: ಟೋಲ್​ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಬಿ.ಟಿ.ಶ್ರೀಧರ್ ಪ್ರತಿಕ್ರಿಯೆ ನೀಡಿದ್ದಾರೆ. 20 ಕಿಲೋ ಮೀಟರ್ ಒಳಗೆ ಇರುವವರಿಗೆ ತಿಂಗಳ ಪಾಸ್ ಇದೆ ಎಂದಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​​ವೇ ‌ದಶಪಥ ಅಲ್ಲ, ಟೋಲ್ ದರ ಬಗ್ಗೆಯೂ ಮಾಹಿತಿ ನೀಡಿದ ಯೋಜನಾ ನಿರ್ದೇಶಕ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇImage Credit source: The Hindu
ಆಯೇಷಾ ಬಾನು
|

Updated on:Mar 15, 2023 | 1:58 PM

Share

ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ NHAI ಟೋಲ್‌ ಸಂಗ್ರಹ ಆರಂಭಿಸಿದೆ. ನಿನ್ನೆಯಷ್ಟೇ (ಮಾರ್ಚ್ 14) ಆರಂಭವಾದ ಟೋಲ್ ಸಂಗ್ರಹಕ್ಕೆ ಅನೇಕ ವಿರೋಧಗಳು ವ್ಯಕ್ತವಾಗಿದ್ದವು. ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆಯಲ್ಲಿರೋ ಟೋಲ್ ಪ್ಲಾಜಾ ಬಳಿ ಕನ್ನಡಪರ ಸಂಘಟನೆ, ಸಮಾನ ಮನಸ್ಕ ವಕೀಲರು ಪ್ರತಿಭಟನೆ ನಡೆಸಿದ್ದರು. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿ ಕಪ್ಪು ಬಾವುಟ ಮತ್ತು ಹಾಲಿನ ಕ್ಯಾನ್ ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕೇಂದ್ರ ಸರ್ಕಾರ, NHAI ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿತ್ತು. ಸದ್ಯ ಟೋಲ್​ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಬಿ.ಟಿ.ಶ್ರೀಧರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ವೇ ‌ದಶಪಥ ರಸ್ತೆ ಅಲ್ಲ

ಟೋಲ್ ದರ ಬಗ್ಗೆ ಈಗಾಗಲೇ ಪತ್ರಿಕೆಗಳ ಮೂಲಕ ತಿಳಿಸಿದ್ದೇವೆ. ಕೇಂದ್ರ ಸರ್ಕಾರದ ಗೆಜೆಟ್​​ನಲ್ಲೂ ಟೋಲ್ ಬಗ್ಗೆ​​ ಮಾಹಿತಿ ಇದೆ. 20 ಕಿಲೋ ಮೀಟರ್ ಒಳಗೆ ಇರುವವರಿಗೆ ತಿಂಗಳ ಪಾಸ್ ಇದೆ. ಸ್ಥಳೀಯರಿಗೆ ಡಿಸ್ಕೌಂಟ್ ಇದೆ. ರೋಡ್ ಟೂಲ್ ಪಾಲಿಸಿ ಪ್ರಕಾರ ತಿಳಿಸಿದ್ದೇವೆ. ಕೆಲವು ಕಡೆ ಹೈಕೋರ್ಟ್ ನಿಂದ ತಡೆ ಇತ್ತು. ಇದೀಗ ಅದು ಕ್ಲಿಯರ್ ಆಗಿದೆ. ಕಾನೂನು ತೊಡಕು ಹಿನ್ನೆಲೆ ಸರ್ವಿಸ್ ರಸ್ತೆ ಮಾಡಲು ಆಗಿರಲಿಲ್ಲ ಎಂದರು.

ಇದನ್ನೂ ಓದಿ: ಮೊದಲ ದಿನವೇ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್​ವೇ ಟೋಲ್​ನಲ್ಲಿ ತಾಂತ್ರಿಕ ಸಮಸ್ಯೆ, ವಾಹನ ಸವಾರರ ಆಕ್ರೋಶ

ಇನ್ನು ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ವೇ ‌ದಶಪಥ ರಸ್ತೆ ಅಲ್ಲ. ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿರುವುದು 6 ಪಥಕ್ಕೆ ಮಾತ್ರ. ಸರ್ವಿಸ್ ರಸ್ತೆಯಲ್ಲಿ ಹೋದರೆ ಟೋಲ್ ಕಟ್ಟುವುದು ಯಾರು? ಹಾಗಾಗಿ ಸರ್ವಿಸ್ ರಸ್ತೆ ಕಂಟಿನ್ಯೂಟಿ ಕೊಟ್ಟಿಲ್ಲ ಎಂದ ರಾ.ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಶ್ರೀಧರ್ ಮಾಹಿತಿ ನೀಡಿದರು.

ಯಾವುದಕ್ಕೆ ಎಷ್ಟು ಶುಲ್ಕ?

  • ಕಾರು, ಜೀಪ್​​, ವ್ಯಾನ್​ಗೆ ಏಕಮುಖ ಸಂಚಾರಕ್ಕೆ 135 ರೂ ದರ
  • ಕಾರು, ಜೀಪ್​​​, ವ್ಯಾನ್​​ಗೆ​ ಎರಡು ಕಡೆ ಸಂಚಾರಕ್ಕೆ 205 ರೂ.
  • ಸ್ಥಳೀಯ ವಾಹನಗಳ ಏಕಮುಖ ಸಂಚಾರಕ್ಕೆ 70 ರೂ. ನಿಗದಿ
  • ಕಾರು, ಜೀಪ್​​​, ವ್ಯಾನ್​​ಗಳಿಗೆ ತಿಂಗಳ ಪಾಸ್​​ ದರ 4,425 ರೂ.
  • ಲಘು ಸರಕುವಾಹನ, ಮಿನಿ ಬಸ್​ಗಳ ಏಕಮುಖ ಸಂಚಾರಕ್ಕೆ 220 ರೂ
  • ಲಘು ಸರಕುವಾಹನ, ಮಿನಿ ಬಸ್​ಗಳ ಎರಡು ಕಡೆ ಸಂಚಾರಕ್ಕೆ 330 ರೂ
  • ಲಘು ಸರಕುವಾಹನ, ಮಿನಿ ಬಸ್​ಗಳಿಗೆ ತಿಂಗಳ ಪಾಸ್​ ದರ 7315 ರೂ
  • ಟ್ರಕ್‌/ಬಸ್‌ ಏಕಮುಖ ಸಂಚಾರಕ್ಕೆ ಟೋಲ್​ ದರ 460 ರೂ. ನಿಗದಿ
  • ಟ್ರಕ್‌/ಬಸ್‌ ಎರಡು ಕಡೆ ಸಂಚಾರಕ್ಕೆ 690 ರೂಪಾಯಿ ನಿಗದಿ
  • ಟ್ರಕ್‌/ಬಸ್​​ಗಳ ತಿಂಗಳ ಟೋಲ್ ಪಾಸ್​ ದರ 15,325 ರೂ. ನಿಗದಿ
  • 3 ಆಕ್ಸೆಲ್‌ ವಾಣಿಜ್ಯ ವಾಹನ ಏಕಮುಖ ಸಂಚಾರ ₹500, ಎರಡು ಕಡೆ ₹750
  • ಅತಿ ಭಾರದ ವಾಹನಗಳು ಏಕಮುಖ ಸಂಚಾರಕ್ಕೆ 880 ರೂ. ನಿಗದಿ
  • ಅತಿ ಭಾರದ ವಾಹನಗಳು ಎರಡು ಕಡೆ ಸಂಚಾರಕ್ಕೆ ₹1315 ದರ ನಿಗದಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:58 pm, Wed, 15 March 23

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ