ಫೆ.24, 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ -ಸಿಎಂ ಸಿದ್ದರಾಮಯ್ಯ
ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಫೆ.24, 25 ರಾಷ್ಟ್ರೀಯ ಐಕ್ಯತಾ ಸಮಾವೇಶ ಬೆಂಗಳೂರಿನಲ್ಲಿ ನಡೆಯುತ್ತೆ ಎಂದು ತಿಳಿಸಿದರು. ಭಾರತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಿರುವ ದೇಶ. ದೇಶದ ಜನತೆಗಾಗಿ ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ ಎಂದರು.
ಬೆಂಗಳೂರು, ಫೆ.17: ಫೆ.24, 25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಫೆ.24ರಂದು ಉದ್ಘಾಟನೆ, ಫೆ.25ರಂದು ಱಲಿ ಮಾಡಲಾಗುವುದು ಭಾರತದ ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಜನವರಿ 26ರಿಂದ 31 ಜಿಲ್ಲೆಗಳಲ್ಲೂ ಸಂವಿಧಾನ ಜಾಥಾ ಕಾರ್ಯಕ್ರಮ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವ ಕೆಲಸ ಆಗ್ತಿದೆ ಎಂದರು.
ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಕ್ಕೆ ಕಾಲಿಟ್ಟಿದೆ. ಅಮೃತ ಉತ್ಸವದ ಕಾರ್ಯಕ್ರಮವನ್ನ ಅರ್ಥಪೂರ್ಣವಾಗಿ ಆಚರಿಸಬೇಕೆಂದು ತೀರ್ಮಾನ ಮಾಡಿದ್ದೇವೆ. 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ 26 ರಿಂದ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳ 25ರಂದು ಕೊನೆಯಾಗುತ್ತೆ. ಫೆ.24, 25 ರಾಷ್ಟ್ರೀಯ ಐಕ್ಯತಾ ಸಮಾವೇಶ ಬೆಂಗಳೂರಿನಲ್ಲಿ ನಡೆಯುತ್ತೆ ಎಂದು ತಿಳಿಸಿದರು.
ಪ್ರೊ, ಅಶುತೋಷ್, ಪ್ರಶಾಂತ್ ಭೂಷಣ್, ಮೇದಾ ಪಾಟ್ಕರ್ ಸೇರಿದಂತೆ ಅನೇಕ ಮೇದಾವಿಗಳು ಭಾಗವಹಿಸ್ತಿದ್ದಾರೆ. ಜನರ ಭಾವನೆಗಳು, ಸಂವಿಧಾನದ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡ್ತಾರೆ. 24ರಂದು ರಾಷ್ಟ್ರೀಯ ಐಕ್ಯತಾ ಸಮಾವೇಶ ಉದ್ಘಾಟನೆಯಾಗಲಿದೆ. 25ರಂದು ದೊಡ್ಡ ರ್ಯಾಲಿ ಮಾಡಲಾಗುತ್ತೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವ ಕೆಲಸ ಆಗ್ತಿದೆ. ಬಜೆಟ್ ಪುಸ್ತಕದ ಮೊದಲ ಮುಖ ಪುಟದಲ್ಲಿ ಪ್ರಿಯಾಂಬಲ್ ಉಲ್ಲೇಖಮಾಡಲಾಗಿದೆ. ಸಂವಿಧಾನ ಏನು ಕೊಟ್ಟಿದೆ ಅನ್ನೋದು ಜನರಿಗೆ ಗೊತ್ತಾಗಬೇಕು. ಅವರ ಹಕ್ಕುಗಳನ್ನು ಕೇಳಲಿಕ್ಕೆ ಹೋರಾಟ ಮಾಡುವುದಕ್ಕೆ, ಶಿಕ್ಷಣ ಸಂಘಟನೆ ಹೋರಾಟ ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಮೂರು ಅಸ್ತ್ರಗಳು. ಸ್ವಾತಂತ್ರ್ಯ ಬಂದು 77 ವರ್ಷ ಆಗೊಯ್ತು. ಸಂವಿಧಾನ ಜಾರಿಯಾಗಿ 75 ವರ್ಷ ಆದ್ರೂ ಎಲ್ಲರಿಗೂ ಸಮಾನತೆ ಸಿಕ್ಕಿಲ್ಲ. ಸಂವಿಧಾನಕ್ಕೆ ದಕ್ಕೆ ತರುವ ಕೆಲಸ ಮಾಡಿದ್ರೆ ವಿಫಲ ಮಾಡಲೇಬೇಕು. ಇದಕ್ಕೆ ಯಾವುದೇ ಪಕ್ಷ. ವ್ಯಕ್ತಿ ಅಂತಾ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆ ಸ್ಪರ್ಧೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್!
ಭಾರತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಿರುವ ದೇಶ. ದೇಶದ ಜನತೆಗಾಗಿ ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ. ಸಂವಿಧಾನ ಜಾರಿಯಾಗಿ 75 ವರ್ಷವಾಗಿದೆ. ಆದರೂ ಇಂದಿಗೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಬಡವರು, ದಲಿತರು, ಹಿಂದುಳಿದವರು ಅವಕಾಶ ವಂಚಿತರಾಗಿದ್ದಾರೆ. ಶಿಕ್ಷಣ ಪಡೆಯುವುದರಿಂದ ಮೂಢನಂಬಿಕೆಗಳು ನಿರ್ಮೂಲನೆ ಆಗಲಿದೆ. ಕೆಲವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಅಭಿಯಾನ ಆರಂಭ ಮಾಡಿದ್ದೇವೆ ಎಂದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:45 pm, Sat, 17 February 24