AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕ್ಸಲ್ ಅಂದ್ರೆ ದೇಶಪ್ರೇಮಿಗಳು, ಸಮಾನತೆಗಾಗಿ ಹೋರಾಟ ಮಾಡ್ತಿರೋರು: ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ

ನಕ್ಸಲರು ಅಂದರೆ ದೇಶಪ್ರೇಮಿಗಳು ಮತ್ತು ಸಮಾನತೆಗಾಗಿ ಹೋರಾಡುತ್ತಿರುವವರು ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧವೂ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ನ್ಯಾಯಾಂಗ ವ್ಯವಸ್ಥೆ ಫೇಲ್ ಆಗಿದ್ದು, 75 ವರ್ಷಗಳ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸ್ಕ್ಯಾಮ್ ನಡೆಯುತ್ತಿದೆ. ಪ್ರಪಂಚದಲ್ಲಿ ಇಂತಹ ಸ್ಕ್ಯಾಮ್ ಎಲ್ಲೂ ಕೂಡ ನಡೆದಿಲ್ಲ ಎಂದವರು ದೂರಿದ್ದಾರೆ.

ನಕ್ಸಲ್ ಅಂದ್ರೆ ದೇಶಪ್ರೇಮಿಗಳು, ಸಮಾನತೆಗಾಗಿ ಹೋರಾಟ ಮಾಡ್ತಿರೋರು: ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ
ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ Image Credit source: Tv9 Kannada
ಹರೀಶ್ ಜಿ.ಆರ್​.
| Edited By: |

Updated on: Sep 30, 2026 | 2:26 PM

Share

ಬೆಂಗಳೂರು, ಸೆಪ್ಟೆಂಬರ್​​ 30: ನಕ್ಸಲ್ ಅಂದ್ರೆ ದೇಶಪ್ರೇಮಿಗಳು, ಸಮಾನತೆಗಾಗಿ ಹೋರಾಟ ಮಾಡ್ತಿರೋರು ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಕ್ಸಲೀಯರು ಅಂದರೆ ಯಾರು?, ಅವೆರಿಲ್ಲಾ ಸಾಹಿತಿಗಳು, ಡಾಕ್ಟರ್‌ಗಳು. ಜೆನ್ ಝೀ ಹೋರಾಟದಿಂದ ಭಯ ಬಂದಿದೆಯಲ್ಲಾ, ಅವರನ್ನೆಲ್ಲಾ ನಕ್ಸಲ್ ಅಂತೀರಿ ಎಂದು ಅವರು ಹೇಳಿದ್ದಾರೆ. ಚುನಾವಣಾ ಆಯೋಗದ ವಿರುದ್ಧವೂ ಗೋಪಾಲಗೌಡ ಇದೇ ವೇಳೆ ವಾಗ್ದಾಳಿ ನಡೆಸಿದ್ದಾರೆ.

‘ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಒಬ್ಬ ಫ್ರಾಡ್’

ತಾನೊಬ್ಬ ಸುಪ್ರೀಂಕೋರ್ಟ್ ನೀವೃತ್ತ ನ್ಯಾಯಮೂರ್ತಿ. SIRನಲ್ಲಿ ನನಗೂ ಚುನಾವಣಾ ಆಯೋಗ ನೊಟೀಸ್ ಕೊಟ್ಟಿದೆ. ಹೆಸರಿನ ಮುಂದೆ ನ್ಯಾ. ಹೇಗೆ ಬಂತು ಎಂದು ಸಂವಿಧಾನಬದ್ಧ ಹುದ್ದೆಯಲ್ಲಿ ಇದ್ದವನಿಗೆ ನೊಟೀಸ್ ಕೊಟ್ಟಿದ್ದಾರೆ. ಮುಖ್ಯ ಚುನಾವಣಾ ಆಯುಕ್ತನನ್ನು ಕೇವಲ ರಾಜೀನಾಮೆ ಕೊಡಿಸುವುದಲ್ಲ. ಸಂವಿಧಾನದ ಕಗ್ಗೊಲೆ ಮಾಡಿದ ಆತನನ್ನು ಜೈಲಿಗೆ ಹಾಕಬೇಕು. ಇಬ್ಬರು ಚುನಾವಣಾ ಆಯುಕ್ತರು 10 ತಿಂಗಳಲ್ಲಿ 14 ಸಲ ಆಕ್ಷೇಪಣೆ ಸಲ್ಲಿಸಿದ್ದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಒಬ್ಬ ಫ್ರಾಡ್, ಫ್ರಾಡೆಸ್ಟ್. ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರಲು ಅನಗತ್ಯ ಅಂಶ ಸೇರಿಸಲಾಗಿದೆ. ಆ ಮೂಲಕ ಹೊಸದಾಗಿ ಮತಪಟ್ಟಿಗೆ ಸೇರಲು ಸಾಧ್ಯವಾಗದಂತೆ ಮಾಡಿದ್ದಾರೆ. ಸಾವರ್ನಿಟಿಯನ್ನು ಮುಖ್ಯಚುನಾವಣಾ ಆಯುಕ್ತ ಹೈಜಾಕ್ ಮಾಡಿದ್ದಾರೆ ಎಂದವರು ಆರೋಪಿಸಿದ್ದಾರೆ.

LIVE TV

ಇದನ್ನೂ ಓದಿ: ತೀವ್ರ ವಿರೋಧಕ್ಕೆ ಮಣಿದ ಚುನಾವಣಾ ಆಯೋಗ: ಹೊಸ ಮತದಾರರ ನೋಂದಣಿಗೆ ತಂದಿದ್ದ ವಿವಾದಾತ್ಮಕ ಫಾರಂ-6 ಹೆಚ್ಚುವರಿ ಷರತ್ತು ವಾಪಸ್

ನ್ಯಾಯಾಂಗ ವ್ಯವಸ್ಥೆ ಫೇಲ್ ಆಗಿದ್ದು, 75 ವರ್ಷಗಳ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸ್ಕ್ಯಾಮ್ ನಡೆಯುತ್ತಿದೆ. ಪ್ರಪಂಚದಲ್ಲಿ ಇಂತಹ ಸ್ಕ್ಯಾಮ್ ಎಲ್ಲೂ ಕೂಡ ನಡೆದಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಡಿ ಅಂತಾ ನಾವು ಹೇಳ್ತಿಲ್ಲ. ಆದರೆ ಕಾನೂನುಬದ್ಧವಾಗಿ ಪರಿಷ್ಕರಣೆ ಆಗ್ತಿಲ್ಲ. ಸಿಇಸಿ ಜ್ಞಾನೇಶ್ ಕುಮಾರ್ ಟೆರರಿಸ್ಟ್​​ಗಿಂತ ಮಿಗಿಲಾಗಿದ್ದು, ದೇಶದಲ್ಲಿ 13 ಕೋಟಿ ಮತದಾರರ ಹೆಸರನ್ನು ತೆಗೆದುಹಾಕಿದ್ದಾರೆ ಎಂದವರು ವಾಗ್ದಾಳಿ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ