AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಂಡಹಳ್ಳಿ-ಕೆಂಗೇರಿ ನಡುವೆ ನಮ್ಮ ಮೆಟ್ರೋ ಮಾರ್ಗದಲ್ಲಿ ಕಳಪೆ ರಸ್ತೆಗಳ ನಿರ್ಮಾಣ: ಬಿಬಿಎಂಪಿಗೆ ಆತಂಕ

BMRCL Namma Metro: ನಮ್ಮ ಮೆಟ್ರೋ ಮಾರ್ಗದ ಪಿಲ್ಲರ್ ಗಳ‌ ಸುತ್ತಲೂ ಕಳಪೆ ಕಾಮಗಾರಿಯಿಂದ ರಸ್ತೆ ಸಿಂಕ್ ಆಗುತ್ತಿದೆ. ತಾಂತ್ರಿಕ ದೋಷಗಳಿಂದಾಗಿ ಈ ರಸ್ತೆಗಳು ಪದೇ ಪದೇ ಹದಗೆಡುತ್ತಿವೆ. ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ಭಾಗಶಃ ಪಿಲ್ಲರ್ ಗಳ ಪಕ್ಕದಲ್ಲಿ ರಸ್ತೆ ಕುಸಿತವುಂಟಾಗಿದೆ. ಮೆಟ್ರೋ ಪಿಲ್ಲರ್​ಗಳಿಗೂ ಧಕ್ಕೆಯಾಗುವ ಬಗ್ಗೆ ನಮ್ಮ ಮೆಟ್ರೋ ಅಧಿಕಾರಿಗಳು ಇನ್ನಷ್ಟೇ ಸ್ಪಷ್ಟಪಡಿಸಬೇಕಿದೆ.

ನಾಯಂಡಹಳ್ಳಿ-ಕೆಂಗೇರಿ ನಡುವೆ ನಮ್ಮ ಮೆಟ್ರೋ ಮಾರ್ಗದಲ್ಲಿ ಕಳಪೆ ರಸ್ತೆಗಳ ನಿರ್ಮಾಣ: ಬಿಬಿಎಂಪಿಗೆ ಆತಂಕ
ಬಿಬಿಎಂಪಿಗೆ ಆತಂಕ: ನಾಯಂಡಹಳ್ಳಿಯಿಂದ ಕೆಂಗೇರಿ ನಡುವೆ ನಮ್ಮ ಮೆಟ್ರೋ ಮಾರ್ಗದಲ್ಲಿ ರಸ್ತೆ ಕಾಮಗಾರಿ ಕಳಪೆ
TV9 Web
| Edited By: |

Updated on:Oct 21, 2021 | 10:46 AM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನಿರ್ಮಾಣ, ನಿರ್ವಹಣೆ ಹೊಣೆ ಹೊತ್ತಿರುವ ಬಿಎಂಆರ್​​ಸಿಎಲ್ ವಿರುದ್ಧ ಕಳಪೆ ಕಾಮಗಾರಿ ಆರೋಪ ಕೇಳಿಬಂದಿದೆ. ಖುದ್ದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಈ ಆರೋಪ ಮಾಡಿದ್ದಾರೆ. ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ನಮ್ಮ ಮೆಟ್ರೋ ಮಾರ್ಗದಲ್ಲಿ ಪಿಲ್ಲರ್​​ಗಳ‌ ಸುತ್ತಲೂ ರಸ್ತೆ ಕುಸಿಯುತ್ತಿದ್ದು ಆತಂಕ ಸೃಷ್ಟಿಯಾಗಿದೆ. ನಿನ್ನೆ ಬುಧವಾರ ಬಿಬಿಎಂಪಿ ಮುಖ್ಯವಾಗಿ ಆಯುಕ್ತ ಗೌರವ್ ಗುಪ್ತಾ ಅವರು ಸ್ಥಳ ಪರಿಶೀಲನೆ ನಡೆಸಿದ ಬಳಿಕ ಟಿವಿ9 ಗೆ ಈ ಮಾಹಿತಿ ನೀಡಿದ್ದಾರೆ.

ನಾಯಂಡಹಳ್ಳಿ-ಕೆಂಗೇರಿವರೆಗಿನ ಸುಮಾರು 8 ಕಿ.ಮೀ. ರಸ್ತೆಯು ನಮ್ಮ ಮೆಟ್ರೊ 2ನೇ ಹಂತದ ವಿಸ್ತರಣೆ ಕಾಮಗಾರಿ ಸಲುವಾಗಿ ಬಿಬಿಎಂಪಿಯಿಂದ BMRCLಗೆ ರಸ್ತೆ ಹಸ್ತಾಂತರಿಸಲಾಗಿತ್ತು. ನಮ್ಮ ಮೆಟ್ರೋ ಕಾಮಗಾರಿ ನಂತರ BMRCLನಿಂದ ರಸ್ತೆ ನಿರ್ಮಾಣಗೊಂಡಿದೆ. ಬಿಬಿಎಂಪಿಗೆ ಮತ್ತೆ ರಸ್ತೆ ಹಸ್ತಾಂತರಕ್ಕೆ BMRCLಗೆ ಕೋರಲಾಗಿತ್ತು. ಕೆಂಗೇರಿ ವಲಯದ AE  ಮತ್ತು AEE ಗಳು ರಸ್ತೆ ತಪಾಸಣೆ ನಡೆಸಿ, ವರದಿ ಸಲ್ಲಿಸಿದ್ದಾರೆ. ಆಗ ಪಿಲ್ಲರ್​​ಗಳ ಪಕ್ಕದಲ್ಲಿ ರಸ್ತೆ ಕುಸಿತ ಕಂಡಿರುವುದು ಪತ್ತೆಯಾಗಿದೆ. ಸರಿಯಾಗಿ ರಸ್ತೆ ನಿರ್ಮಿಸದ ಕಾರಣ ಪಿಲ್ಲರ್​​ಗಳ ಪಕ್ಕ ಕುಸಿತ ಕಂಡುಬಂದಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಆರೋಪ ಮಾಡಿದ್ದಾರೆ.

ನಮ್ಮ ಮೆಟ್ರೋ ಮಾರ್ಗದ ಪಿಲ್ಲರ್ ಗಳ‌ ಸುತ್ತಲೂ ಕಳಪೆ ಕಾಮಗಾರಿಯಿಂದ ರಸ್ತೆ ಸಿಂಕ್ ಆಗುತ್ತಿದೆ. ತಾಂತ್ರಿಕ ದೋಷಗಳಿಂದಾಗಿ ಈ ರಸ್ತೆಗಳು ಪದೇ ಪದೇ ಹದಗೆಡುತ್ತಿವೆ. ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ಭಾಗಶಃ ಪಿಲ್ಲರ್ ಗಳ ಪಕ್ಕದಲ್ಲಿ ರಸ್ತೆ ಕುಸಿತವುಂಟಾಗಿದೆ. ಮೆಟ್ರೋ ಪಿಲ್ಲರ್​ಗಳಿಗೂ ಧಕ್ಕೆಯಾಗುವ ಬಗ್ಗೆ ನಮ್ಮ ಮೆಟ್ರೋ ಅಧಿಕಾರಿಗಳು ಇನ್ನಷ್ಟೇ ಸ್ಪಷ್ಟಪಡಿಸಬೇಕಿದೆ.

ಇದನ್ನೂ ಓದಿ: ರಾಮನಗರ, ಮಾಗಡಿ ಕಡೆಗೆ ನಮ್ಮ ಮೆಟ್ರೋ; 4ನೇ ಹಂತದಲ್ಲಿ ಬಿಡದಿಗೂ ಸಿಗಲಿದೆ ಮೆಟ್ರೋ ರೈಲು ಸಂಚಾರ ಭಾಗ್ಯ ಇದನ್ನೂ ಓದಿ: ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ

(nayandahalli kengeri namma metro road construction of poor quality alleges bbmp)

Published On - 10:40 am, Thu, 21 October 21

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ