ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ; ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ಕೇಸ್ ದಾಖಲು

DK Shivakumar: ಡಿ.ಕೆ. ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಪತ್ರ ಬರೆಯಲಾಗಿದೆ. ಡಿಜಿ- ಐಜಿಪಿ‌ ಪ್ರವೀಣ್ ಸೂದ್​ಗೆ NCPCR ಅಧ್ಯಕ್ಷರು ಪತ್ರ ಬರೆದಿದ್ದಾರೆ.

ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ; ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ಕೇಸ್ ದಾಖಲು
ಡಿಕೆ ಶಿವಕುಮಾರ್
Edited By:

Updated on: Jan 10, 2022 | 10:02 PM

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ (Mekedatu Padayatra) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ (DK Shivakumar) ಮತ್ತೊಂದು ಸಂಕಷ್ಟ ಎದುರಾಗಿದೆ. ಪಾದಯಾತ್ರೆ ವೇಳೆ ಡಿ.ಕೆ. ಶಿವಕುಮಾರ್ ಶಾಲಾ‌ ಮಕ್ಕಳನ್ನು​ ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಪತ್ರ ಬರೆಯಲಾಗಿದೆ. ಡಿಜಿ- ಐಜಿಪಿ‌ ಪ್ರವೀಣ್ ಸೂದ್​ಗೆ NCPCR ಅಧ್ಯಕ್ಷರು ಪತ್ರ ಬರೆದಿದ್ದಾರೆ.

ಪಾದಯಾತ್ರೆ ವೇಳೆ ವಿಶ್ವೋದಯ ಶಾಲೆಗೆ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದರು. ಶಾಲಾ ಮಕ್ಕಳ ಜತೆ ಕುಳಿತು ಫೋಟೋಗೆ ಪೋಸ್ ಕೊಟ್ಟಿದ್ದರು. ಶಿವಕುಮಾರ್ ಕೊವಿಡ್ ನಿಯಮ ಪಾಲಿಸದೇ ಮಕ್ಕಳ ಜತೆ ಬೆರೆತಿದ್ದಾರೆ. ಮಾಸ್ಕ್​ ಧರಿಸಿದೇ ಶಾಲಾಮಕ್ಕಳ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿ ಒಂದು ವಾರದಲ್ಲಿ ವರದಿ ನೀಡುವಂತೆ ಪ್ರವೀಣ್ ಸೂದ್​ಗೆ ಪತ್ರ ಬರೆಯಲಾಗಿದೆ. ಅಷ್ಟೇ ಅಲ್ಲದೆ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ವಿರುದ್ಧ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿದೆ. ಕೊವಿಡ್‌ ನಿಯಮ ಉಲ್ಲಂಘನೆ ಆರೋಪದಡಿ ಕೇಸ್ ದಾಖಲು ಮಾಡಲಾಗಿದೆ.

ಗೃಹ ಸಚಿವರಿಗೆ, ಸಿಎಂ ರಾಜಕೀಯ ಕಾರ್ಯದರ್ಶಿಗೆ ಇಲ್ಲದ ಕೊವಿಡ್ ನಿರ್ಬಂಧ ನಮಗೇಕೆ: ಡಿಕೆ ಶಿವಕುಮಾರ್

ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ವಕ್ಷೇತ್ರದಲ್ಲಿ ಸಾವಿರಾರು ಜನರನ್ನು ಸೇರಿಸಿ ಜಾತ್ರೆ ಮಾಡಿದ್ದಾರೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಆಗ ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಇರಲಿಲ್ಲವೇ ಎಂದು ಸೋಮವಾರ ಸಂಜೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಮಾದಪ್ಪನ ದೊಡ್ಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವರು ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಪಾಲ್ಗೊಂಡಿದ್ದ ಸಮಾರಂಭಗಳು ನಡೆದ ಊರುಗಳಲ್ಲಿ ಯಾವುದೇ ಕರ್ಫ್ಯೂ ಇರಲಿಲ್ಲವೇ? ಕನಕಪುರದಲ್ಲಿ ಮಾತ್ರ ನಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕೊವಿಡ್ ಪ್ರಕರಣಗಳ ಬಗ್ಗೆ ಸುಳ್ಳು ಅಂಕಿಅಂಶಗಳನ್ನು ಕೊಡುತ್ತಿದ್ದಾರೆ. ಇದರ ಬಗ್ಗೆ ನ್ಯಾಯಂಗ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಾಳೆಯಿಂದ (ಜ.11) ಮೂರು ದಿನಗಳ ಕಾಲ ನನ್ನದು ಮೌನ ಮೆರವಣಿಗೆ. ಮಾಧ್ಯಮಗಳೊಂದಿಗೆ ನಮ್ಮ ಶಾಸಕರು, ಹಿರಿಯರು ಮಾತನಾಡುತ್ತಾರೆ. ನನ್ನನ್ನು ರಾಜಕೀಯವಾಗಿ ಸಾಯಿಸಲು ಹೊರಟಿದ್ದಾರೆ. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ 30 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇಷ್ಟೇ ಜನರಿದ್ದ ಬಿಜೆಪಿ ನಾಯಕರಿದ್ದ ಸಮಾರಂಭಗಳಲ್ಲಿ ಪಾಲ್ಗೊಂಡಿದ್ದವರ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಇದರ ಬಗ್ಗೆ ನ್ಯಾಯಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ‘ಸರ್ಕಾರವೇ ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ; ಡಿಕೆ ಶಿವಕುಮಾರ್ ಬಳಿ ಸೋಂಕಿತನನ್ನು ಕಳಿಸಲಾಗಿದೆ’

ಇದನ್ನೂ ಓದಿ: ಗೃಹ ಸಚಿವರಿಗೆ, ಸಿಎಂ ರಾಜಕೀಯ ಕಾರ್ಯದರ್ಶಿಗೆ ಇಲ್ಲದ ಕೊವಿಡ್ ನಿರ್ಬಂಧ ನಮಗೇಕೆ: ಡಿಕೆ ಶಿವಕುಮಾರ್ ನೇರ ಸವಾಲು

Published On - 9:53 pm, Mon, 10 January 22

TV9 Web

TV9 Kannada

Read More
Loading...
Unable to load recommendations.
Follow Us