AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ಬೇಕೇ? ಮೊಬೈಲ್ ಆ್ಯಪ್​ನಲ್ಲೇ ಬುಕ್ ಮಾಡಿ! ಜಲಮಂಡಳಿಯಿಂದ ಹೊಸ ಯೋಜನೆ

ಬೆಂಗಳೂರಿನ ಬೇಸಿಗೆ ನೀರಿನ ಸಮಸ್ಯೆ ಮತ್ತು ಟ್ಯಾಂಕರ್ ಮಾಫಿಯಾ ತಡೆಯಲು, ಜಲಮಂಡಳಿ ಮೊಬೈಲ್ ಆ್ಯಪ್ ಆರಂಭಿಸುತ್ತಿದೆ. ಈ ಆ್ಯಪ್ ಮೂಲಕ ಕಾವೇರಿ ನೀರಿನ ಟ್ಯಾಂಕರ್‌ಗಳನ್ನು ಬುಕ್ ಮಾಡಬಹುದು. ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಒಟಿಪಿ ಪರಿಶೀಲನೆಯ ಮೂಲಕ ಪಾರದರ್ಶಕತೆ ಹೆಚ್ಚಿಸಲಾಗುವುದು ಎಂದು ಜಲಮಂಡಳಿ ತಿಳಿಸಿದೆ. ವಿವರಗಳು ಇಲ್ಲಿವೆ.

ಕಾವೇರಿ ನೀರು ಬೇಕೇ? ಮೊಬೈಲ್ ಆ್ಯಪ್​ನಲ್ಲೇ ಬುಕ್ ಮಾಡಿ! ಜಲಮಂಡಳಿಯಿಂದ ಹೊಸ ಯೋಜನೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Mar 18, 2025 | 8:55 AM

ಬೆಂಗಳೂರು, ಮಾರ್ಚ್ 18: ಬೇಸಗೆಯಲ್ಲಿ ಬೆಂಗಳೂರು (Bengaluru) ನಗರದ ನೀರಿನ ಸಮಸ್ಯೆ ತಪ್ಪಿಸಲು ಮತ್ತು ಟ್ಯಾಂಕರ್ ಮಾಫಿಯಾ ನಿಯಂತ್ರಿಸುವುದಕ್ಕಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಹೊಸ ಯೋಜನೆಯೊಂದನ್ನು ಜಾರಿಗೊಳಿಸಲು ಮುಂದಾಗಿದೆ. ಪೈಪ್​ಲೈನ್ ಮೂಲಕ ಕಾವೇರಿ ನೀರು (Cauvery Water) ಪೂರೈಕೆ ವ್ಯವಸ್ಥೆ ಇಲ್ಲದ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ ಟ್ಯಾಂಕರ್ ಮಾಫಿಯಾ ತಡೆಯುವುದಕ್ಕಾಗಿ ‘ವೆಬ್ ಆಧಾರಿತ ಮೊಬೈಲ್ ಅಡಾಪ್ಟಿವ್ ಅಪ್ಲಿಕೇಶನ್’ ಆರಂಭಿಸಲು ಮುಂದಾಗಿದೆ. ಇದೇ ಮೊದಲ ಬಾರಿಗೆ ಆ್ಯಪ್ ಮೂಲಕ ನೀರು ಬುಕಿಂಗ್ ವ್ಯವಸ್ಥೆ ಆರಂಭಿಸಲಾಗುತ್ತಿದ್ದು, ಆ್ಯಪ್​ನ ಲಿಂಕ್ ಶೀಘ್ರದಲ್ಲೇ BWSSB ವೆಬ್‌ಸೈಟ್‌ನಲ್ಲಿ ದೊರೆಯಲಿದೆ.

ಮಾರ್ಚ್ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. ಆ್ಯಪ್ ಮೂಲಕವೇ ನಗರವಾಸಿಗಳು ನೀರಿನ ಟ್ಯಾಂಕರ್‌ಗಳನ್ನು ಬುಕ್ ಮಾಡಲು ಮತ್ತು ನಿಗದಿತ ಸಮಯದೊಳಗೆ ನೀರು ಪಡೆಯಲು ಪೂರ್ವನಿರ್ಧರಿತ ಶುಲ್ಕವನ್ನು ಪಾವತಿಸಲು ಅವಕಾಶ ಇರಲಿದೆ. ಈ ಯೋಜನೆಯ ಬಹಳ ದೊಡ್ಡ ಪ್ರಯೋಜನವೆಂದರೆ, ಈ ಟ್ಯಾಂಕರ್‌ಗಳು ಬೋರ್‌ವೆಲ್ ನೀರನ್ನು ಪೂರೈಸುವುದಿಲ್ಲ. ಬದಲಿಗೆ ಪೈಪ್ ನೀರು ಸರಬರಾಜು ಲಭ್ಯವಿಲ್ಲದ ಪ್ರದೇಶಗಳಲ್ಲಿ ಸ್ಥಾಪಿಸಲಾದ 100-ಕ್ಕೂ ಹೆಚ್ಚು ಕಾವೇರಿ ನೀರಿನ ಸಂಪರ್ಕ ಕೇಂದ್ರಗಳಿಂದ ಕಾವೇರಿ ನೀರನ್ನು ಪೂರೈಸಲಿವೆ.

ಈ ಯೋಜನೆಗಾಗಿ 200 ಟ್ಯಾಂಕರ್‌ಗಳನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ವಿ ರಾಮ್ ಪ್ರಸಾತ್ ಮನೋಹರ್ ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. 6,000 ಮತ್ತು 12,000 ಲೀಟರ್ ಸಾಮರ್ಥ್ಯದ ಈ ಟ್ಯಾಂಕರ್‌ಗಳು ದಿನಕ್ಕೆ ಸರಾಸರಿ ಎಂಟು ಟ್ರಿಪ್‌ಗಳಷ್ಟು ಕಾರ್ಯನಿರ್ವಹಿಸಬಹುದು. ಲಾಭವೂ ಇಲ್ಲ, ನಷ್ಟವೂ ಇಲ್ಲ ಎಂಬ ತತ್ವದ ಆಧಾರದಲ್ಲಿ ಈ ವ್ಯವಸ್ಥೆ ಕಾರ್ಯಾಚರಿಸಲಿದೆ. ಅಲ್ಲಿ ನೀರು ಮತ್ತು ಟ್ಯಾಂಕರ್ ವೆಚ್ಚವನ್ನು ಮೊದಲೇ ಲೆಕ್ಕಹಾಕಲಾಗುತ್ತದೆ ಮತ್ತು ಶುಲ್ಕವನ್ನು ನಿಗದಿಪಡಿಸಲಾಗುತ್ತದೆ ಎಂದು ಮನೋಹರ್ ಹೇಳಿದ್ದಾರೆ.

ಇದನ್ನೂ ಓದಿ
Image
ಗ್ಯಾರಂಟಿಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಹಣಕ್ಕೆ ವಿರೋಧ: ದಲಿತ ನಾಯಕರಿಂದ ಸಭೆ
Image
ಹಣ..ಕಾರು ಹೊಯ್ತು: ಪರಪ್ಪನ ಅಗ್ರಹಾರ ಪೊಲೀಸರ ನಿರ್ಲಕ್ಷ್ಯಕ್ಕೆ ಚಾಲಕ ಕಂಗಾಲು
Image
ಹೋರಾಟಕ್ಕೆ ಮಣಿದ ನಮ್ಮ ಮೆಟ್ರೋ: ಕನ್ನಡೇತರ ನೇಮಕಾತಿ ಅಧಿಸೂಚನೆ ವಾಪಸ್
Image
ಬನ್ನೇರುಘಟ್ಟ ಉದ್ಯಾನವನ: 3 ತಿಂಗಳಲ್ಲಿ 20ಕ್ಕೂ ಅಧಿಕ ವನ್ಯಜೀವಿಗಳು ಸಾವು

ಹೇಗೆ ಕಾರ್ಯನಿರ್ವಹಿಸಲಿದೆ ಆ್ಯಪ್ ಆಧಾರಿತ ಟ್ಯಾಂಕರ್ ನೀರು ಪೂರೈಕೆ?

ಆ್ಯಪ್ ಆಧಾರಿತ ವ್ಯವಸ್ಥೆಯಲ್ಲಿ ಎಲ್ಲವನ್ನೂ ಸಾಫ್ಟ್‌ವೇರ್‌ನಲ್ಲಿ ಸಂಯೋಜಿಸಲಾಗಿದ್ದು, ಅಲ್ಲಿ ಬುಕಿಂಗ್ ಮತ್ತು ಪಾವತಿಗಳನ್ನು ಡಿಜಿಟಲ್ ರೂಪದಲ್ಲಿ ಮಾಡಲಾಗುತ್ತದೆ ಎಂದು ಮನೋಹರ್ ತಿಳಿಸಿದ್ದಾರೆ. ಇದು ಮನಬಂದಂತೆ ಹಣ ವಸೂಲಿ ಮಾಡುವ ಟ್ಯಾಂಕರ್ ಮಾಫಿಯಾ ಸಮಸ್ಯೆಗೆ ಕಡಿವಾಣ ಹಾಕಲಿದೆ. ಪ್ರತಿ ಟ್ಯಾಂಕರ್‌ಗೆ ಜಿಪಿಎಸ್ ಅಳವಡಿಸಲಾಗುತ್ತದೆ. ಇದರಲ್ಲಿ ಗ್ರಾಹಕರು ಅದನ್ನು ಟ್ರ್ಯಾಕ್ ಮಾಡಬಹುದು ಮತ್ತು ಬುಕಿಂಗ್ ಸಮಯದಲ್ಲಿ ಗ್ರಾಹಕರ ವಿತರಣಾ ವಿಳಾಸದ ಜಿಪಿಎಸ್ ನಿರ್ದೇಶಾಂಕಗಳನ್ನು ಪಡೆಯಲಾಗುತ್ತದೆ. ಗ್ರಾಹಕರಿಗೆ ಒಟಿಪಿ ಕಳುಹಿಸಲಾಗುತ್ತದೆ ಮತ್ತು ಅವರು ಅದನ್ನು ಟ್ಯಾಂಕರ್ ಸಿಬ್ಬಂದಿಯೊಂದಿಗೆ ಹಂಚಿಕೊಂಡ ನಂತರವೇ ಅವರಿಗೆ ನೀರು ಸರಬರಾಜು ಮಾಡಲಾಗುತ್ತದೆ. ಅವರು ಒಟಿಪಿ ನೀಡಿದ ನಂತರವೇ ನೀರನ್ನು ತಲುಪಿಸಲಾಗುತ್ತದೆ. ಟ್ಯಾಂಕರ್‌ನಲ್ಲಿ ಆಟೋಮ್ಯಾಟಿಕ್ ಎನೇಬಲ್ಡ್ ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್ (ಆರ್‌ಎಫ್‌ಐಡಿ) ವ್ಯವಸ್ಥೆ ಇದ್ದು, ಎಷ್ಟು ಲೀಟರ್ ನೀರು ತುಂಬಿದೆ ಎಂಬುದನ್ನು ಅದಾಗಿಯೇ ಲೆಕ್ಕಾಚಾರ ಮಾಡುವ ರೀತಿಯಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್

ನೀರು ಪೂರೈಕೆ ಸಮಯ

ಈ ಯೋಜನೆಯಡಿ ಟ್ಯಾಂಕರ್‌ಗಳಿಗೆ ತುಂಬಿಸುವ ನೀರು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಪ್ರಮಾಣೀಕೃತ ಗುಣಮಟ್ಟದ್ದಾಗಿದೆ. ಬುಕಿಂಗ್‌ಗಳನ್ನು 24 ಗಂಟೆಗಳ ಮುಂಚಿತವಾಗಿ ಮಾಡಬೇಕು ಮತ್ತು ಪೂರೈಕೆ ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗಿ ರಾತ್ರಿ 10 ಗಂಟೆಗೆ ವರೆಗೆ ಇರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 am, Tue, 18 March 25

ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?