AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶ್ರಮ ಶಾಲೆ, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ; ಅಧಿಕಾರಿಗಳಿಗೆ ಸಿಎಂ ತರಾಟೆ

ಇಂದು (ಮಂಗಳವಾರ) ಸಿಎಂ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಆಶ್ರಮ ಶಾಲೆಯ ಮಕ್ಕಳು, ಬಡವರು ಹಾಗೂ ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಅಧಿಕಾರಿಗಳ ವಿರುದ್ದ ಗರಂ ಆದರು.

ಆಶ್ರಮ ಶಾಲೆ, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ; ಅಧಿಕಾರಿಗಳಿಗೆ ಸಿಎಂ ತರಾಟೆ
ಸಿದ್ದರಾಮಯ್ಯ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 18, 2024 | 2:49 PM

Share

ಬೆಂಗಳೂರು, ಜೂ.18: ಆಶ್ರಮ ಶಾಲೆಯ ಮಕ್ಕಳು, ಬಡವರು ಹಾಗೂ ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಗರಂ ಆಗಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು (ಮಂಗಳವಾರ) ಸಿಎಂ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ವಿರುದ್ದ ಫುಲ್​ ಗರಂ ಆಗಿದ್ದಾರೆ.

ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್ ಗಳಿಗೆ ಇಷ್ಟೆಲ್ಲಾ ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ?. ಈ ಬಗ್ಗೆ ನಿರಂತರ ನಿಗಾ ಏಕೆ ವಹಿಸುತ್ತಿಲ್ಲ?, ಫಲಿತಾಂಶದಲ್ಲಿ ಏರಿಕೆ ಏಕೆ ಆಗುತ್ತಿಲ್ಲ ಎಂದು ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದರು. ಜೊತೆಗೆ ನಿಯಮಿತವಾಗಿ ಹಾಸ್ಟೆಲ್ ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು ಹಾಗೂ ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಇದನ್ನೂ ಓದಿ:ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸೋದಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ

ಸಭೆಯ ಮುಖ್ಯಾಂಶಗಳು ಇಂತಿವೆ

  • ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ.
  • ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು – 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ.
  • ಎಸ್‌.ಎಸ್‌.ಎಲ್‌.ಸಿ. ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಿದರು.
  • 2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
  • ಹಾಸ್ಟೆಲ್‌ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
  • ಕೆಲವು ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ. ಈ ಕುರಿತು ಪರಾಮರ್ಶೆ ನಡೆಸಿ, ಪೋಷಕರಿಗೆ ಮನವರಿಕೆ ಮಾಡಲು ಸೂಚಿಸಿದರು.
  • ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್‌ಶೀಟ್‌ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸಿ ಗುಡ್ಡೆಹಾಕಿಕೊಳ್ಳುವುದನ್ನು ಸಹಿಸಲಾಗದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್‌ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
  • ನೀವು ಬಡವರು, ದಲಿತರು, ಆದಿವಾಸಿ, ಬುಡಕಟ್ಟು ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು unfit ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌ ಮತ್ತು ಪರಿಶಿಷ್ಟ ಪಂಗಡಗಳ‌ ಕಲ್ಯಾಣ ಇಲಾಖೆ ನಿರ್ದೇಶಕ ಕಲ್ಲೇಶ್ ಸೇರಿ ಇತರೆ ಅಧಿಕಾರಿಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ