ಬಿಬಿಎಂಪಿ ನಿರ್ಲಕ್ಷ್ಯ; ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ

ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರವಾಸಿಗಳು ಬಲಿಯಾಗುವುದು ಮಾತ್ರ ನಿಲ್ಲುತ್ತಿಲ್ಲ. ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚದೆ ಬಿಟ್ಟಿದ್ದರಿಂದ ಈ ಹಿಂದೆ ಅನೇಕ ಸಾವು-ನೋವುಗಳು ಸಂಭವಿಸಿದ್ದವು. ಇದೀಗ ರಸ್ತೆಗೆ ಬಾಗಿದ ಮರಗಳ ಕೊಂದೆಗಳನ್ನು ತೆರವು ಮಾಡದ ಪರಿಣಾಮ ವಾಹನ ಸವಾರರು ಭೀತಿಯಿಂದ ಹೋಗುವಂತಾಗಿದೆ.

ಬಿಬಿಎಂಪಿ ನಿರ್ಲಕ್ಷ್ಯ; ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ
ಬೆಂಗಳೂರಿನಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ
Follow us
Shivaprasad
| Updated By: Rakesh Nayak Manchi

Updated on: Mar 22, 2024 | 8:02 AM

ಬೆಂಗಳೂರು, ಮಾ.22: ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು (Bengaluru) ನಗರದಲ್ಲಿ ನಡೆದಿದೆ. ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪ ಪ್ರಕರಣ ಸಂಬಂಧ ಖಾಸಗಿ ಶಾಲೆ ಮತ್ತು ಬಿಬಿಎಂಪಿ (BBMP) ವಿರುದ್ಧ ಆಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗರಬಾವಿ ನಿವಾಸಿ ಚಂದನ್ ಬೆನ್ನು ಮೂಳೆ ಮುರಿತಕ್ಕೊಳಗಾದ ಬೈಕ್ ಸವಾರ. ರಿಚ್ಮಂಡ್ ರಸ್ತೆಯ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಚಂದನ್ ಮಾರ್ಚ್ 7 ರಂದು ಬೆಳಗ್ಗೆ ಕಚೇರಿಗೆ ಹೋಗುತ್ತಿದ್ದರು. ಈ ವೇಳೆ ರಸ್ತೆಗೆ ಚಾಚುಕೊಂಡಿದ್ದ ಮರದ ಕೊಂಬೆ ಚಂದನ್ ಮೇಲೆ ಮುರಿದು ಬಿದ್ದಿದೆ.

ಇದನ್ನೂ ಓದಿ: ರೆಂಬೆ ಕಡಿಯಲು ಅನುಮತಿ ಪಡೆದು ಇಡೀ ಮರವನ್ನೇ ಕಡಿದ ಬಿಬಿಎಂಪಿ ಸಿಬ್ಬಂದಿ

ಕೊಂಬೆ ಮೈ ಮೇಲೆ ಬೀಳುತ್ತಿದ್ದಂತೆ ರಸ್ತೆ ಮೇಲೆ ಬಿದ್ದ ಚಂದನ್​ನ ಕುತ್ತಿಗೆ ಗಾಯವಾಗಿದೆ. ಅಲ್ಲದೆ, ಬೆನ್ನು ಮೂಳೆ ಮುರಿದಿದೆ. ಏಳೆಂಟು ನಿಮಿಷಗಳ ಕಾಲ ರಸ್ತೆಯಲ್ಲಿ ನರಳಾಡಿದ್ದ ಚಂದನ್​ನನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 14 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಂದನ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದಾರೆ. ಈ ನಡುವೆ ಆಶೋಕನಗರ ಪೊಲೀಸರಿಗೆ ಚಂದನ್​ ದೂರು ನೀಡಿದ್ದಾರೆ.

ಖಾಸಗಿ ಶಾಲೆ, ಬಿಬಿಎಂಪಿ ವಿರುದ್ಧ ಎಫ್ಐಆರ್

ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರೂ ಅದನ್ನು ತೆರವು ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಖಾಸಗಿ ಶಾಲೆ ಹಾಗೂ ಬಿಬಿಎಂಪಿ ವಿರುದ್ಧ ಪ್ರಕರಣ ದಾಖಲುಸಿಕೊಂಡ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ