ದಾಬಸ್​ಪೇಟೆ ಬಳಿ ಆ್ಯಂಬುಲೆನ್ಸ್ ಅಪಘಾತ: ಐದು ಗಾಯಾಳುಗಳ ಪೈಕಿ ಇಬ್ಬರು ರೋಗಿಗಳ ಸಾವು

ಅಪಘಾತದಲ್ಲಿ ರೋಗಿ ಅಸಿನಾ‌ಗೆ ಸುಟ್ಟ ಗಾಯಗಳಾಗಿದ್ದವು. ಅಸೀನಾ ಸಂಬಂಧಿ ಸಾದಿಕ್‌ಗೆ ಗಂಭೀರ ಗಾಯಗಳಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಮೃತ ದೇಹಗಳನ್ನ ತುಮಕೂರಿನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ದಾಬಸ್​ಪೇಟೆ ಬಳಿ ಆ್ಯಂಬುಲೆನ್ಸ್ ಅಪಘಾತ: ಐದು ಗಾಯಾಳುಗಳ ಪೈಕಿ ಇಬ್ಬರು ರೋಗಿಗಳ ಸಾವು
ದಾಬಸ್​ಪೇಟೆ ಬಳಿ ಲಾರಿ ಡಿಕ್ಕಿಯಾಗಿ ಆ್ಯಂಬುಲೆನ್ಸ್​ನಲ್ಲಿದ್ದ ಐವರ ಪೈಕಿ ಇಬ್ಬರ ಸಾವು
ಸಾಧು ಶ್ರೀನಾಥ್​

Updated on: May 01, 2021 | 8:51 AM

ನೆಲಮಂಗಲ: ಶುಕ್ರವಾರ ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ದಾಬಸ್ ಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಆ್ಯಂಬುಲೆನ್ಸ್​ನಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿತ್ತು. ಗಾಯಾಳು ಪೈಕಿ ಇಬ್ಬರು ರೋಗಿಗಳು ಸಾವಿಗೀಡಾಗಿದ್ದಾರೆ. ರೋಗಿ ಅಸೀನಾ (40) ಮತ್ತು ಸಾದಿಕ್ (23) ಮೃತಪಟ್ಟವರು.

ಅಪಘಾತದಲ್ಲಿ ರೋಗಿ ಅಸಿನಾ‌ಗೆ ಸುಟ್ಟ ಗಾಯಗಳಾಗಿದ್ದವು. ಅಸೀನಾ ಸಂಬಂಧಿ ಸಾದಿಕ್‌ಗೆ ಗಂಭೀರ ಗಾಯಗಳಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಮೃತ ದೇಹಗಳನ್ನ ತುಮಕೂರಿನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ನಿನ್ನೆ ಸಂಜೆ ಅಪಘಾತವಾದ ಬಳಿಕ ಗಾಯಾಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ಬಳಿಕ ನೆಲಮಂಗಲ ಸಾರ್ವಜನಿಕ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗಂಭೀರವಾಗಿ ಗಾಯಗೊಂಡ ಮಹಿಳೆಯರಿಬ್ಬರು, ಕಾಲು ಮುರಿದ ಗಾಯಾಳು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಲಾರಿ ತುಮಕೂರಿನಿಂದ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿತ್ತು. ಅಪಘಾತದ ಬಳಿಕ ಲಾರಿ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಅಪಘಾತ ಬಳಿಕ ಆ್ಯಂಬುಲೆನ್ಸ್​​ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸ್ಥಳೀಯ ನಿವಾಸಿಗಳು ಬೆಂಕಿಯನ್ನ ನಂದಿಸಿದ್ದರು.

ಆ್ಯಂಬುಲೆನ್ಸ್​​ನಲ್ಲಿದ್ದ ಅಸೀನಾ (50), ಶಬೀನಾ (45) ಇಬ್ಬರಿಗೂ ಸುಟ್ಟ ಗಾಯಗಳಾಗಿದ್ದವು. ಸಲ್ಮಾನ್ (20) ಮತ್ತು ಆಂಬುಲೆನ್ಸ್ ಚಾಲಕ ಸಾದಿಖ್ (20) ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

(nelamangala dabaspet road accident lorry rams in to ambulance seriously injured 2 persons died)

ಇದನ್ನೂ ಓದಿ:
ನೆಲಮಂಗಲದಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ.. ಕಾರಿನ ಚಾಲಕ ದುರ್ಮರಣ

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us