AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋನ್ ಕಟ್ಟಿಲ್ಲವೆಂದು ಬೆನ್ನಟ್ಟಿ ಬೈಕ್‌ಗೆ ಒದ್ದ ಏಜೆಂಟ್​​​: ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ನೆಲಮಂಗಲದಲ್ಲಿ ಮೈಕ್ರೋ ಫೈನಾನ್ಸ್ ರಿಕವರಿ ಏಜೆಂಟರ ಭೀಕರ ಕೃತ್ಯದಿಂದ ಮುರುಳಿ ಎಂಬುವರು ಪ್ರಾಣ ಕಳೆದುಕೊಂಡಿದ್ದಾರೆ. ಬೈಕ್ ಲೋನ್ ಕಂತು ಪಾವತಿಸದ ಕಾರಣ ಏಜೆಂಟರು ಬೈಕ್‌ಗೆ ಒದ್ದು, ಮುರುಳಿ ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಏಜೆಂಟರ ಅಟ್ಟಹಾಸವೇ ಸಾವಿಗೆ ಕಾರಣವೆಂದು ಪತ್ನಿ ಆರೋಪಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಲೋನ್ ಕಟ್ಟಿಲ್ಲವೆಂದು ಬೆನ್ನಟ್ಟಿ ಬೈಕ್‌ಗೆ ಒದ್ದ ಏಜೆಂಟ್​​​: ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
ಮೈಕ್ರೋ ಫೈನಾನ್ಸ್ ಕಂಪನಿ ಹಿಂಸೆಗೆ ಪ್ರಾಣ ಬಲಿ Image Credit source: Tv9 kannada
ಮಂಜುನಾಥ ಎಚ್​. ವಿ.
| Edited By: |

Updated on: Nov 01, 2026 | 4:14 PM

Share

ನೆಲಮಂಗಲ, ನ.1: ಮೈಕ್ರೋ ಫೈನಾನ್ಸ್ ಕಂಪನಿಯ ರಿಕವರಿ ಏಜೆಂಟ್‌ಗಳು ಮಾಡಿದ ಭೀಕರ ಎಡವಟ್ಟಿನಿಂದಾಗಿ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನೆಲಮಂಗಲದಲ್ಲಿ ಜರುಗಿದೆ. ಬೈಕ್ ಸೀಜ್ ಮಾಡುವ ಭರದಲ್ಲಿ ತೆರಳುತ್ತಿದ್ದ ವ್ಯಕ್ತಿಯ ಬೈಕ್‌ಗೆ ಕಾಲಿನಿಂದ ಒದ್ದು ಕೆಳಗೆ ಉರುಳಿಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ತಾಲೂಕಿನ ಟಿ. ಬೇಗೂರಿನ ನಿವಾಸಿ ಮುರುಳಿ (39) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಘಟನೆಯ ಹಿನ್ನೆಲೆ ಹಾಗೂ ರಸ್ತೆಯಲ್ಲಾದ ಭೀಕರ ಕೃತ್ಯ:

ಮುರುಳಿ ಅವರು ಪಡೆದಿದ್ದ ಬೈಕ್ ಲೋನ್ ಕಂತು ಪಾವತಿಸಿಲ್ಲ ಎಂದು ಎಲ್ ಅಂಡ್ ಟಿ ಮೈಕ್ರೋ ಫೈನಾನ್ಸ್ ಕಂಪನಿಯ ಏಜೆಂಟರು ಇವರ ಬೆನ್ನು ಬಿದ್ದಿದ್ದರು. ಕಳೆದ ಬುಧವಾರದಂದು ಮುರುಳಿ ನೆಲಮಂಗಲದಿಂದ ತಮ್ಮ ಊರಾದ ಟಿ. ಬೇಗೂರಿಗೆ ತೆರಳುತ್ತಿದ್ದ ವೇಳೆ ಬೂದಿಹಾಳು ಬಳಿ ಮೈಕ್ರೋ ಫೈನಾನ್ಸ್ ಕಂಪನಿಯ ಮೂವರು ಏಜೆಂಟರು ಬೈಕ್ ಅಡ್ಡಹಾಕಿದ್ದಾರೆ. “ಮುಂದೆ ನಿಲ್ಲಿಸುತ್ತೇನೆ” ಎಂದು ಹೇಳಿ ಮುರುಳಿ ಮುಂದೆ ತೆರಳುತ್ತಿದ್ದಾಗ, ಅವರನ್ನು ಹಿಡಿಯಲು ಬೆನ್ನಟ್ಟಿದ ಏಜೆಂಟರು ಚಲಿಸುತ್ತಿದ್ದ ಬೈಕ್‌ಗೆ ಕಾಲಿನಿಂದ ಬಲವಾಗಿ ಒದ್ದಿದ್ದಾರೆ. ಏಜೆಂಟರ ಒದ್ದ ರಭಸಕ್ಕೆ ಮುರುಳಿ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮುರುಳಿ ಸಾವು:

ಘಟನೆ ನಡೆದ ತಕ್ಷಣ ಮುರುಳಿ ಅವರ ಪತ್ನಿ ಲಲಿತಾ ಅವರು ಗಾಯಾಳುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಮುರುಳಿ ಅವರು ಈಗಾಗಲೇ ಎರಡೂ ಕಿಡ್ನಿಗಳನ್ನು ಕಳೆದುಕೊಂಡು ನಿರಂತರ ಡಯಾಲಿಸಿಸ್ ಪಡೆಯುತ್ತಿದ್ದರು. ಅನಾರೋಗ್ಯದ ಕಾರಣದಿಂದ ಓಡಾಡುವುದಕ್ಕೂ ಕಷ್ಟಪಡುತ್ತಿದ್ದ ಮುರುಳಿ ಅವರಿಗೆ ಅಪಘಾತದಿಂದ ಉಂಟಾದ ಗಾಯಗಳು ತೀವ್ರವಾಗಿ ಶಮನವಾಗದೆ, ವೈದ್ಯರು ಎಷ್ಟೇ ಚಿಕಿತ್ಸೆ ನೀಡಿದರೂ ದೇಹ ಸ್ಪಂದಿಸಲಿಲ್ಲ. ಪರಿಣಾಮ ನಿನ್ನೆ ತಡರಾತ್ರಿ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. “ಮೈಕ್ರೋ ಫೈನಾನ್ಸ್ ಏಜೆಂಟರ ಅಟ್ಟಹಾಸವೇ ನನ್ನ ಗಂಡನ ಸಾವಿಗೆ ನೇರ ಕಾರಣ,” ಎಂದು ಮೃತ ಮುರುಳಿ ಪತ್ನಿ ಲಲಿತಾ ಹಾಗೂ ಸಂಬಂಧಿಕರು ಕಣ್ಣೀರಿಡುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ರಾಗಿಮುದ್ದೆ-ನಾಟಿಕೋಳಿ ಸಾರಿನ ಮಹಾಯುದ್ಧ: 14 ಮುದ್ದೆ ನುಂಗಿ ಟಗರು ಬಾಚಿಕೊಂಡ ಶಂಭುಗೌಡ

ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುರುಳಿ ಅವರ ಸಾವಿಗೆ ಎಲ್ ಅಂಡ್ ಟಿ ಮೈಕ್ರೋ ಫೈನಾನ್ಸ್ ಕಂಪನಿಯ ಏಜೆಂಟರೇ ನೇರ ಹೊಣೆಯಾಗಿದ್ದು, ಕೃತ್ಯ ಎಸಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಎಚ್​. ವಿ.
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ