ನಕಲಿ​ ಪೊಲೀಸ್​ನಿಂದ ಲೈಂಗಿಕ ಕಿರುಕುಳ ಆರೋಪ: ರಕ್ಷಣೆಕೋರಿ ಮನವಿ ಮಾಡಿದ ಮಂಗಳಮುಖಿಯರು

ಫೇಕ್​ ಪೊಲೀಸ್​ ರಾಮಾಂಜಿನಯ್ಯ ಎಂಬುವವರಿಂದ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ನಂಬರ್​ ಪ್ಲೇಟ್​ ಇಲ್ಲದ ಬೈಕ್​ ತಂದು ನಾನು ಬಂದಾಗ ಮಾಮೂಲಿ ಕೊಡಬೇಕು. ಇಲ್ಲದಿದ್ದರೆ ತೊಂದರೆ ಕೊಡ್ತೇನೆಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ರಕ್ಷಣೆ ನೀಡುವಂತೆ ಮಾದನಾಯಕನಹಳ್ಳಿ ಪೊಲೀಸರಿಗೆ ಮಂಗಳಮುಖಿಯರು ಮನವಿ ಮಾಡಿದ್ದಾರೆ. 

ನಕಲಿ​ ಪೊಲೀಸ್​ನಿಂದ ಲೈಂಗಿಕ ಕಿರುಕುಳ ಆರೋಪ: ರಕ್ಷಣೆಕೋರಿ ಮನವಿ ಮಾಡಿದ ಮಂಗಳಮುಖಿಯರು
ಫೇಕ್​ ಪೊಲೀಸ್​ ರಾಮಾಂಜಿನಯ್ಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Apr 08, 2024 | 4:16 PM

ನೆಲಮಂಗಲ, ಏಪ್ರಿಲ್​ 08: ಪೊಲೀಸ್​ ಎಂದು ಹೇಳಿಕೊಂಡು ಮಂಗಳಮುಖಿಯರಿಗೆ (transgender) ಕಿರುಕುಳ ನೀಡಿರುವುದಾಗಿ ಆರೋಪ ಕೇಳಿಬಂದಿದೆ. ಮಾದನಾಯಕನಹಳ್ಳಿಯಲ್ಲಿ ಘಟನೆ ನಡೆದಿದ್ದು, ಫೇಕ್​ ಪೊಲೀಸ್​ ರಾಮಾಂಜಿನಯ್ಯ ಎಂಬುವವರಿಂದ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ನಂಬರ್​ ಪ್ಲೇಟ್​ ಇಲ್ಲದ ಬೈಕ್​ ತಂದು ನಾನು ಬಂದಾಗ ಮಾಮೂಲಿ ಕೊಡಬೇಕು. ಇಲ್ಲದಿದ್ದರೆ ತೊಂದರೆ ಕೊಡ್ತೇನೆಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ರಕ್ಷಣೆ ನೀಡುವಂತೆ ಮಾದನಾಯಕನಹಳ್ಳಿ ಪೊಲೀಸರಿಗೆ ಮಂಗಳಮುಖಿಯರು ಮನವಿ ಮಾಡಿದ್ದಾರೆ.

ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಬಿಜ್ಜೂರಿನಲ್ಲಿ ಕಳ್ಳರು ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿರುವಂತಹ ಘಟನೆ ನಡೆದಿದೆ. ಉದಯ್​ಗೌಡ ಎಂಬುವರ ಮನೆಯಲ್ಲಿ ಚಿನ್ನ ಕಳ್ಳತನವಾಗಿದೆ. ಮನೆಯಲ್ಲಿದ್ದ 34 ಗ್ರಾಂ ಚಿನ್ನವನ್ನು ಖದೀಮರು ಎಗರಿಸಿದ್ದಾರೆ. ಗೋಕರ್ಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಮೃತಪಟ್ಟ ವ್ಯಕ್ತಿ ಮತ್ತೆ ಜೀವಂತ! ರಾಮನಗರ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ

ಶಿರಸಿ ನಗರದಲ್ಲಿ ಬಾರೀ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗಿಗೆ ಕನ್ನಿಕಾ ಪ್ರಿಟಿಂಗ್ ಪ್ಲೆಕ್ಸ್ ಸುಟ್ಟು ಕರಕಲಾಗಿದೆ. ಸುಮಾರು 15 ಲಕ್ಷ ರೂ ಗೂ ಹೆಚ್ಚಿನ ಹಾನಿ ಆಗಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಶಿರಸಿ ನಗರದ ಸೀತಾರಾಮ ಎಂಬುವವರಿಗೆ ಸೇರಿದ ಪ್ರಿಟಿಂಗ್ ಪ್ಲೆಕ್ಸ್ ಇದಾಗಿದೆ. ಬೆಂಕಿ ಕಾಣಿಸಿಕೊಂಡ ಬಗ್ಗೆ ಇದುವರೆಗೂ ಕಾರಣ ತಿಳಿದು ಬಂದಿಲ್ಲ.

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ಅರೆಸ್ಟ್​

ಉಡುಪಿ: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಂಜಾರಕಟ್ಟೆ ನಿವಾಸಿ ರಾಜೇಂದ್ರ ಆಚಾರ್‌ (58) ಬಂಧಿತ. 14 ಮಂದಿ ಅಪ್ರಾಪ್ತ ವಿದ್ಯಾರ್ಥಿನಿಯರ ದೂರಿನ ಹಿನ್ನೆಲೆ ಅರೆಸ್ಟ್‌ ಮಾಡಲಾಗಿದೆ.

ಇದನ್ನೂ ಓದಿ: ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಮುಂಡಗೋಡದ ಒಂದೇ ಕುಟುಂಬದ ಮೂವರು ಸಾವು

ಬಂಧಿತ ರಾಜೇಂದ್ರ ಆಚಾರ್ ಇಚ್ಚೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕರೂ ಆಗಿದ್ದಾರೆ. ಈ ಹಿಂದೆಯೂ ಹಲವು ಬಾರಿ ಆರೋಪ ಕೇಳಿ ಬಂದಿತ್ತು. ಮಕ್ಕಳ ಕಲ್ಯಾಣ ಸಮಿತಿಯ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ