ಬೆಂಗಳೂರಿನಲ್ಲಿ ಮತ್ತೆ ಹೆಚ್ಚಾದ ನೇಪಾಳ ಮೂಲದ ಕಳ್ಳರ ಕೈಚಳಕ: ಅಪಾರ್ಟ್​ಮೆಂಟ್​ಗೆ ನುಗ್ಗಿ ಬೈಕ್​ ಕಳವು

ನಗರದಲ್ಲಿ ನೇಪಾಳ ಮೂಲದ ಕಳ್ಳರ ಕೈಚಳಕ ಮತ್ತೆ ಹೆಚ್ಚಾಗಿದ್ದು, ಮೇ 23ರಂದು ಮುಂಜಾನೆ ಅಪಾರ್ಟ್​ಮೆಂಟ್​ಗೆ ನುಗ್ಗಿ ಬೈಕ್​ ಕಳವು ಮಾಡಿರುವಂತಹ ಘಟನೆ ಹೆಚ್​ಎಎಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಾದ ನೇಪಾಳ ಮೂಲದ ಕಳ್ಳರ ಕೈಚಳಕ: ಅಪಾರ್ಟ್​ಮೆಂಟ್​ಗೆ ನುಗ್ಗಿ ಬೈಕ್​ ಕಳವು
ಅಪಾರ್ಟ್​ಮೆಂಟ್​ಗೆ ನುಗ್ಗಿ ಬೈಕ್​ ಕಳವು
Follow us
ಗಂಗಾಧರ​ ಬ. ಸಾಬೋಜಿ
|

Updated on:May 24, 2023 | 9:58 PM

ಬೆಂಗಳೂರು: ನಗರದಲ್ಲಿ ನೇಪಾಳ ಮೂಲದ (Nepal-based) ಕಳ್ಳರ ಕೈಚಳಕ ಮತ್ತೆ ಹೆಚ್ಚಾಗಿದ್ದು, ಮೇ 23ರಂದು ಮುಂಜಾನೆ ಅಪಾರ್ಟ್​ಮೆಂಟ್​ಗೆ ನುಗ್ಗಿ ಬೈಕ್​ ಕಳವು ಮಾಡಿರುವಂತಹ ಘಟನೆ ಹೆಚ್​ಎಎಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪಲ್ಸರ್ ಬೈಕ್ ಹ್ಯಾಂಡಲ್ ಲಾಕ್​ ಮುರಿದು ನೇಪಾಳಿ ಮೂಲದ ಕಳ್ಳ ಕದ್ದೊಯ್ದಿದ್ದಾನೆ. ಬೆಳಂಬೆಳಗ್ಗೆ ಕಳ್ಳತನದ ಕೈಚಳಕ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಹೆಚ್​ಎಎಲ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿ ಕಿಡ್ನಾಪ್​ಗೆ ಯತ್ನ: ಇಬ್ಬರ ಬಂಧನ

ಬೆಂಗಳೂರು ನಗರದಲ್ಲಿ ಯುವತಿ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್​ಐಎಸ್​ಎಫ್ ಪಡೆ ಸಿಬ್ಬಂದಿಗಳಾದ ಪಿಎಸ್​ಐ ನಾರಾಯಾಣ್, ಪ್ರಶಾಂತ್, ನಾಗರಾಜ್​ರಿಂದ ಇಬ್ಬರು ಆರೋಪಿಗಳನ್ನ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ಏಳು ಗಂಟೆಗೆ ವೇಳೆ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮುಗಿಸಿಕೊಂಡು ಯುವತಿ ಮನೆಗೆ ಹೋಗುತ್ತಿದ್ದ ವೇಳೆ ವಿಧಾನಸೌದ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಫಾಲೋ ಮಾಡಿ ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ.

ಇದನ್ನೂ ಓದಿ: Bangalore News: ಬೊಮ್ಮನಹಳ್ಳಿ; ಪೊಲೀಸರು ವಶಕ್ಕೆ ಪಡೆಯಲು ತೆರಳಿದಾಗ ನಾಲ್ಕನೇ ಮಹಡಿಯಿಂದ ನಗ್ನನಾಗಿ ಬಿದ್ದು ಆರೋಪಿ ಸಾವು

ಏಕಾ ಏಕಿ ಯುವತಿಯನ್ನ ಎಳೆದು ಕಾರಿನಲ್ಲಿ ಕೂರಿಸಿದ್ದಾರೆ. ಈ ವೇಳೆ ಅಲ್ಲೇ ಇದ್ದ ಕೆಎಸ್​ಐಎಸ್​ಎಫ್ ತಂಡ ಅಲರ್ಟ್ ಆಗಿದ್ದು, ಇಬ್ಬರನ್ನೂ ವಶಕ್ಕೆ ಪಡೆದು ಯುವತಿಯನ್ನ ರಕ್ಷಿಸಿದ್ದಾರೆ. ಸದ್ಯ ಇಬ್ಬರನ್ನೂ ವಿಧಾನಸೌಧ ಪೊಲೀಸರಿಗೆ ಒಪ್ಪಿಸಿದ್ದಾರೆ. ಇಬ್ಬರನ್ನೂ ವಶಪಡೆದಿರುವ ವಿಧಾನಸೌಧ ಪೊಲೀಸರು ವಿಚಾರಣೆ ಮಾಡುತ್ತಿದ್ದು, ಯುವತಿ ಸಂಬಂಧಿಕರಿಂದಲೇ ಕಿಡ್ನಾಪ್ ಯತ್ನ ಶಂಕೆ ವ್ಯಕ್ತವಾಗಿದೆ.

ಕಳೆದ ಕೆಲ ತಿಂಗಳ ಹಿಂದೆ ಯುವತಿಯ ತಂದೆ ಮೃತರಾಗಿದ್ದರು. ತಂದೆಯ ಎಫ್‌ಡಿಎ ಕೆಲಸ ಮಗಳಿಗೆ ಬಂದಿತ್ತು. ಈ ವಿಚಾರಕ್ಕೆ ಯುವತಿಯ ಮೇಲೆ ಸಂಬಂಧಿಕರು ಕಣ್ಣಿಟ್ಟಿದ್ದರು. ಯುವತಿಯ ತಂದೆಯ ಎರಡನೇ ಪತ್ನಿಯ ಸೋದರ ಎಂದು ಮಾಹಿತಿ ನೀಡಲಾಗಿದೆ. ಎಫ್​ಡಿಎ ಕೆಲಸ ಅಕ್ಕನಿಗೆ ಬರಬೇಕಿತ್ತು ಎಂದು ಕ್ಯಾತೆ ತೆಗೆಯಲಾಗಿದೆ. ಅಲ್ಲದೇ ಯುವತಿಯನ್ನ ಮದುವೆಯಾಗೋದಕ್ಕೆ ಆರೋಪಿ ಪ್ಲಾನ್ ಮಾಡಿಕೊಂಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: Hasan News: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವೆ ಗಲಾಟೆ: ಸಿನಿಮೀಯ ರೀತಿಯಲ್ಲಿ ಮಚ್ಚಿನಿಂದ ಹಲ್ಲೆಗೈದ ಆರೋಪ

ಆದರೆ ಯುವತಿಗೆ ಆರೋಪಿ ಇಷ್ಟ ಇರಲಿಲ್ಲ. ಇಂದು ವಿಧಾನಸೌಧ ಮೆಟ್ರೋ ಸ್ಟೇಷನ್ ಬಳಿ ಕಿಡ್ನಾಪ್ ಯತ್ನಿಸಿದ್ದು, ಈ ವೇಳೆ ಯುವತಿ ಜೋರಾಗಿ ಕಿರುಚಾಡಿದ್ದಾರೆ. ಈ ವೇಳೆ ಸಿಬ್ಬಂದಿ ಅಲರ್ಟ್ ಆಗಿ ಕಾರು ಅಡ್ಡ ಹಾಕಿದ್ದಾರೆ. ಕೂಡಲೇ ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:57 pm, Wed, 24 May 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ