ಆಟೋ ರಿಕ್ಷಾ, ಟ್ರಕ್, ಬಸ್ ಚಾಲಕರು, ಸಿಬ್ಬಂದಿಗೆ ಸಂಬಂಧಪಟ್ಟಂತೆ ಮಹತ್ತರ ಬದಲಾವಣೆ: ಶಿವರಾಂ ಹೆಬ್ಬಾರ್

ಒಂದು ಕಾಲಕ್ಕೆ ನಾನು ಚಾಲಕನಾಗಿ ಕೆಲಸಮಾಡಿದ್ದೆ. ನನಗೆ ಚಾಲಕನ ಸಂಕಷ್ಟ ಗೊತ್ತಿದೆ. ಅದಕ್ಕಾಗಿ ಹೊಸ ಬಿಲ್ ತರಲಾಗುತ್ತಿದೆ. ಕಾರ್ಮಿಕ ಇಲಾಖೆಗೆ ಸಂಬಂಧಪಟ್ಟಂತೆ ನೀಡುತ್ತಿರುವ ವಿವಿಧ ಸಹಾಯಧನವನ್ನು ದುಪ್ಪಟ್ಟು ಮಾಡಲು ತಿರ್ಮಾನ ಮಾಡಲಾಗಿದೆ: ಶಿವರಾಂ ಹೆಬ್ಬಾರ್

ಆಟೋ ರಿಕ್ಷಾ, ಟ್ರಕ್, ಬಸ್ ಚಾಲಕರು, ಸಿಬ್ಬಂದಿಗೆ ಸಂಬಂಧಪಟ್ಟಂತೆ ಮಹತ್ತರ ಬದಲಾವಣೆ: ಶಿವರಾಂ ಹೆಬ್ಬಾರ್
ಶಿವರಾಂ ಹೆಬ್ಬಾರ್
Follow us
TV9 Web
| Updated By: Skanda

Updated on: Aug 13, 2021 | 12:34 PM

ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಮಹತ್ತರ ಬದಲಾವಣೆ ತರಲು ನಿರ್ಧರಿಸಿರುವ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಅತಿ ಶೀಘ್ರದಲ್ಲಿಯೇ ಆಟೋ ರಿಕ್ಷಾ, ಟ್ರಕ್, ಬಸ್ ಸೇರಿದಂತೆ ಎಲ್ಲಾ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಸಂಬಂಧಪಟ್ಟಂತೆ ಹೊಸ ಬಿಲ್ ಜಾರಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ದೃಢ ಹೆಜ್ಜೆ ಇಡಲು ನಿರ್ಧರಿಸಿದ್ದೇವೆ. ಅತಿ ಶೀಘ್ರದಲ್ಲಿಯೇ ಹೊಸ ಬಿಲ್ ಮಂಡನೆ ಮಾಡಲಿದ್ದೇವೆ. ಅದು ಆಟೋ ರಿಕ್ಷಾ, ಟ್ರಕ್, ಬಸ್ ಸೇರಿದಂತೆ ಎಲ್ಲಾ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಸಹಾಯ ಆಗಲಿದ್ದು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂಪಾಯಿ ಪರಿಹಾರವೂ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ. ಮುಂದಿನ ಅಧಿವೇಶನದಲ್ಲಿ ಹೊಸ ಬಿಲ್ ಜಾರಿಗೊಳಿಸುತ್ತೇವೆ ಎಂದು ವಿಕಾಸಸೌಧದಲ್ಲಿ ಹೇಳಿಕೆ ನೀಡಿರುವ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಇದೊಂದು ಮಹತ್ತರ ಬದಲಾವಣೆ ಆಗಲಿದೆ ಎಂದು ಬಣ್ಣಿಸಿದ್ದಾರೆ. ಒಂದು ಕಾಲಕ್ಕೆ ನಾನು ಚಾಲಕನಾಗಿ ಕೆಲಸಮಾಡಿದ್ದೆ. ನನಗೆ ಚಾಲಕನ ಸಂಕಷ್ಟ ಗೊತ್ತಿದೆ. ಅದಕ್ಕಾಗಿ ಹೊಸ ಬಿಲ್ ತರಲಾಗುತ್ತಿದೆ. ಕಾರ್ಮಿಕ ಇಲಾಖೆಗೆ ಸಂಬಂಧಪಟ್ಟಂತೆ ನೀಡುತ್ತಿರುವ ವಿವಿಧ ಸಹಾಯಧನವನ್ನು ದುಪ್ಪಟ್ಟು ಮಾಡಲು ತಿರ್ಮಾನ ಮಾಡಲಾಗಿದೆ. ಮುಂದಿನ ಅಧಿವೇಶನದಲ್ಲಿ ಇದು ಈಡೇರಲಿದೆ ಎಂದು ಭರವಸೆ ನೀಡಿದ್ದಾರೆ.

ಕಾರ್ಮಿಕ ಇಲಾಖೆ ಸಂಬಂಧಪಟ್ಟಂತೆ ವಿಜಲೆನ್ಸ್ ಸೆಲ್ ಮಾಡಲಾಗುತ್ತದೆ. ವಲಸೆ ಕಾರ್ಮಿಕರಿಗೆ ಪ್ರಮುಖ ಜಿಲ್ಲೆಯಲ್ಲಿ ವಸತಿ ಸಮುಚ್ಚಯ ಕಟ್ಟಲು ತಿರ್ಮಾನ ಮಾಡಲಾಗಿದೆ. ಅಸಂಘಟಿತ ವಲಯಕ್ಕೆ ಮಾಧ್ಯಮ ಸೇರಿದಂತೆ ಹಲವು ವರ್ಗಗಳನ್ನು ಸೇರಿಸುವಂತೆ ಸಿಎಂಗೆ ಮನವಿ ಮಾಡಲಾಗುವುದು. ಹಲವು ವರ್ಗಗಳು ಅಸಂಘಟಿತ ವಲಯಕ್ಕೆ ಸೇರಬೇಕೆಂದು ಮನವಿ ಮೇರೆಗೆ ತಿರ್ಮಾನ ಮಾಡಲಾಗಿದೆ. ಒಟ್ಟಾರೆಯಾಗಿ ಕಾರ್ಮಿಕ ಇಲಾಖೆಯಲ್ಲಿ ಧೃಢ ಹೆಜ್ಜೆ ಇಡಬೇಕೆಂದು ನಿರ್ಧಾರ ಮಾಡಿದ್ದೇವೆ. ಆಟೋ ರಿಕ್ಷಾ, ಟ್ರಕ್, ಬಸ್ ಸೇರಿದಂತೆ ಎಲ್ಲಾ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಸಂಬಂಧಪಟ್ಟಂತೆ ಹೊಸ ಬಿಲ್ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಫಲಾನುಭವಿಗಳು ಮೃತರಾದರೆ 5 ಲಕ್ಷ ರೂಪಾಯಿ ನೀಡುವುದು ಸೇರಿದಂತೆ ಹಲವು ಸೌಲಭ್ಯಗಳು ಹೊಸ ಬಿಲ್​ನಲ್ಲಿ ಇರಲಿದೆ. ಬರುವ ಅಧಿವೇಶನದಲ್ಲಿ ಹೊಸ ಬಿಲ್ ತರಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಶಾಸಕ ಸತೀಶ್​ ರೆಡ್ಡಿ ಮನೆಯಂಗಳ ಸ್ವಚ್ಛ ಮಾಡಲು 15ಕ್ಕೂ ಹೆಚ್ಚು ಪೌರಕಾರ್ಮಿಕರ ಬಳಕೆ 

ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹಿಸುವ ಕೇಂದ್ರ ಸರ್ಕಾರದ ಪೋರ್ಟಲ್ ಈ ವಾರ ಆರಂಭ ಸಾಧ್ಯತೆ

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ