New Year 2023: ಹೊಸ ವರ್ಷದ ಮೊದಲ ದಿನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಅಲಂಕಾರದಲ್ಲಿ ದೇವರ ದರ್ಶನ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಜನರ ಭೇಟಿ ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರಂನ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ಬೆಳ್ಳಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆ ಆರಂಭವಾಗಿದೆ.

New Year 2023: ಹೊಸ ವರ್ಷದ ಮೊದಲ ದಿನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಅಲಂಕಾರದಲ್ಲಿ ದೇವರ ದರ್ಶನ
ಹೊಸ ವರ್ಷದ ಮೊದಲ ದಿನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ
Follow us
TV9 Web
| Updated By: ಆಯೇಷಾ ಬಾನು

Updated on:Jan 01, 2023 | 10:11 AM

ಬೆಂಗಳೂರು: ಇಂದು ಹೊಸ ವರ್ಷದ ಮೊದಲ ದಿನ. ಕ್ಯಾಲೆಂಡರ್ ಬದಲಾಯಿಸುವ ದಿನ. ಕಳೆದು ಹೋದ ದಿನ, ಕಹಿ ನೆನಪು, ನೋವು ಎಲ್ಲವನ್ನೂ ಮರೆತು. ಹೊಸ ಹರುಷದಿಂದ ಹೊಸ ವರ್ಷವನ್ನು ಬರ ಮಾಡಿಕೊಳ್ಳಲಾಗಿದೆ. ಸದ್ಯ ಬೆಂಗಳೂರಿಗರು ಹೊಸ ವರ್ಷದ ಮೊದಲ ದಿನದಂದು ದೇವಸ್ಥಾನಗಳತ್ತ ಮುಖ ಮಾಡಿದ್ದಾರೆ. ಕೈ ಮುಗಿದು ದೇವರಲ್ಲಿ ಬೇಡಿ ಹೊಸ ವರ್ಷ ಸುಖ, ಸಂತೋಷ, ನೆಮ್ಮದಿ ತೆರಳಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಜನರ ಭೇಟಿ ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರಂನ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ಬೆಳ್ಳಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆ ಆರಂಭವಾಗಿದೆ. ಗಂಗಾಭಿಷೇಕ, ಪಂಚಾಭಿಷೇಕ, ಪುಷ್ಪಾಭಿಷೇಕ ನೆರವೇರಿದ್ದು ಇದನ್ನು ಕಣ್ತುಂಬಿಕೊಂಡ ಭಕ್ತರು ಪುನೀತರಾಗಿದ್ದಾರೆ. ಶಿರಡಿ ಸಾಯಿ ಬಾಬಾ, ಗಣೇಶ ದೇವಸ್ಥಾನ, ಗವಿ ಗಂಗಾಧರ ದೇವಸ್ಥಾನ, ಬನಶಂಕರಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಸ್ಥಾನಗಳಿಗೆ ಬರುವ ಭಕ್ತರಿಗೆ ಅರ್ಚಕರು ತೀರ್ಥ, ಪ್ರಸಾದ ವಿತರಿಸುತ್ತಿದ್ದಾರೆ. ಇಂದು ದೇವರಿಗೆ ವಿಶೇಷ ಅಲಂಕಾರ ಜೊತೆಗೆ ಹೋಮ ಹವನ ಮಾಡಲಾಗುತ್ತಿದೆ.

ಇನ್ನು ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ರಾತ್ರಿ 9 ಗಂಟೆಯವರೆಗೂ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಂಜೆ ಕಲ್ಯಾಣೋತ್ಸವ ನೆರವೇರಲಿದ್ದು ಕೊವಿಡ್ ರೂಲ್ಸ್ ಗಳನ್ನ ಪಾಲನೆ ಮಾಡುವಂತೆ ದೇವಸ್ಥಾನ ಆಡಳಿತ ಮಂಡಳಿ ಭಕ್ತದಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Sabarimala Ayyappa Swamy Temple: ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆ ನಿಂತ ಅಯ್ಯಪ್ಪಸ್ವಾಮಿ ಜನ್ಮ ರಹಸ್ಯ

ಹೊಸ ವರ್ಷದ ಮೊದಲ‌ ದಿನ ದೇವರ ದರ್ಶನಕ್ಕೆ ಭಕ್ತರ ದಂಡು

ಬನಶಂಕರಿ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದು ಬರುತ್ತಿದೆ. ಬೆಳಗ್ಗೆಯಿಂದಲೇ ಬನಶಂಕರಿ ದೇವಸ್ಥಾನದಲ್ಲಿ ವಿವಿಧ ಪೂಜೆಗಳನ್ನು ಮಾಡಲಾಗುತ್ತಿದೆ. ದೇವಸ್ಥಾನದಲ್ಲಿ ಇಂದು ಬಳೆ ಅಲಂಕಾರ ಜೊತೆಗೆ ಹೋಮ ಹವನ ಮಾಡಲಾಗಿದೆ.

ಇಸ್ಕಾನ್ ದೇವಾಲಯದಲ್ಲಿ ಬೆಳಗ್ಗೆ 4 ಗಂಟೆಯಿಂದ ವಿಶೇಷ ಪೂಜೆ

ಬೆಂಗಳೂರಿನ ರಾಜಾಜಿನಗರದಲ್ಲಿರುವ ಇಸ್ಕಾನ್ ದೇವಾಲಯದಲ್ಲಿ ಬೆಳಗ್ಗೆ 4 ಗಂಟೆಯಿಂದಲೇ ವಿಶೇಷ ಪೂಜೆಗಳು ಆರಂಭವಾಗಿವೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಇಸ್ಕಾನ್​ನ ರಾಧ ಕೃಷ್ಣನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಇಂದು ಇಸ್ಕಾನ್ ನಲ್ಲಿ 9 ಗಂಟೆಗೆ ಲೋಕಕಲ್ಯಾಣಕ್ಕಾಗಿ ಶ್ರೀ ನರಸಿಂಹಸ್ವಾಮಿ ಹೋಮ ಮಾಡಲಾಗಿದೆ. ನಾಳೆ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಕಳೆದ ವರ್ಷ 70 ರಿಂದ 80 ಸಾವಿರ ಭಕ್ತರು ಆಗಮಿಸಿ ದರ್ಶನ ಪಡೆದಿದ್ದರು.

ಚಾಮುಂಡಿಬೆಟ್ಟದಲ್ಲೂ ಭಕ್ತ ಸಾಗರ

ಹೊಸ ವರ್ಷ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮೈಸೂರು, ಮಂಡ್ಯ, ಬೆಂಗಳೂರು, ಕೇರಳ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದಾರೆ. ವರ್ಷದ ಮೊದಲ ದಿನ ನಾಡದೇವತೆ ತಾಯಿ ದರ್ಶನ ಪಡೆದರೆ ಒಳಿತು ಅನ್ನೋ ನಂಬಿಕೆ ಇದೆ.

ಮಲೆ ಮಹದೇಶ್ವರಬೆಟ್ಟದಲ್ಲಿ ಜನವೋ ಜನ

ಹೊಸ ವರ್ಷದಂದು ಮಲೆ ಮಹದೇಶ್ವರಬೆಟ್ಟಕ್ಕೆ ಜನಸಾಗರವೇ ಹರಿದುಬಂದಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಭಕ್ತರು ಮುಂಜಾನೆಯಿಂದಲೇ ಸಾಲಿನಲ್ಲಿ ಬಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಭಕ್ತಿ, ಶ್ರದ್ಧೆಯಿಂದ ಮಾದಪ್ಪನಿಗೆ ಕೈಮುಗಿದು ದರ್ಶನ ಪಡೆಯುತ್ತಿದ್ದಾರೆ. ಮಲೆ ಮಹದೇಶ್ವರನ ದರ್ಶನಕ್ಕೆ ಬರುವ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ.

ಮೇಲುಕೋಟೆಗೆ ನಿರ್ಬಂಧ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಗೆ ನಿರ್ಬಂಧ ಹೇರಲಾಗಿದೆ. ಮೇಲುಕೋಟೆ ಧನುಷ್​ ಕೋಟೆ, ರಾಯಗೋಪುರ, ಪಂಚಕಲ್ಯಾಣಿ, ತೊಟ್ಟಿಲಮಡು, ಬೆಟ್ಟದ ತಪ್ಪಲು, ಪಾಂಡವಪುರ ತಾಲೂಕಿನ ಕುಂತಿಬೆಟ್ಟ, ಕೆರೆತೊಣ್ಣೂರಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಪಾಂಡವಪುರ ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:11 am, Sun, 1 January 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್