ಹೊಸ ವರ್ಷಾಚರಣೆ: ಬೆಂಗಳೂರು ಎಂಜಿ ರಸ್ತೆ ಬಂದ್, ಪಬ್ಗಳ ಮುಂದೆ ಕ್ಯೂನಿಂತ ಜನರು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕೌಂಟ್ಡೌನ್ ಶುರುವಾಗಿದೆ. ಸದ್ಯ ಬ್ಯಾರಿಕೇಡ್ಗಳಿಂದ ಎಂ.ಜಿ.ರಸ್ತೆಯ ಪ್ರವೇಶದ್ವಾರ ಸಂಪೂರ್ಣ ಬಂದ್ ಮಾಡಲಾಗಿದ್ದು, ವಾಹನಗಳ ಓಡಾಟ ಸಂಪೂರ್ಣ ನಿಷೇಧಿಸಲಾಗಿದೆ. ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಎಂಟ್ರಿಯಾಗುವ ರಸ್ತೆ ಬಂದ್ ಮಾಡಿದ್ದು, ಸಾರ್ವಜನಿಕರ ಓಡಾಟಕ್ಕೆ ಅವಕಾಶ, ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಬೆಂಗಳೂರು, ಡಿಸೆಂಬರ್ 31: ನಗರದಲ್ಲಿ ಹೊಸ ವರ್ಷಾಚರಣೆಗೆ (New Year 2024) ಕೌಂಟ್ಡೌನ್ ಶುರುವಾಗಿದೆ. ಸಮಯವಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಈಗಾಗಲೇ ಬ್ರಿಗೇಡ್ ರಸ್ತೆಯಲ್ಲಿ ಕಿಕ್ಕಿರುದು ಜನರು ತುಂಬಿದ್ದು, 12 ಗಂಟೆ ಅಷ್ಟರಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಸದ್ಯ ಬ್ಯಾರಿಕೇಡ್ಗಳಿಂದ ಎಂ.ಜಿ.ರಸ್ತೆಯ ಪ್ರವೇಶದ್ವಾರ ಸಂಪೂರ್ಣ ಬಂದ್ ಮಾಡಲಾಗಿದ್ದು, ವಾಹನಗಳ ಓಡಾಟ ಸಂಪೂರ್ಣ ನಿಷೇಧಿಸಲಾಗಿದೆ.
ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಎಂಟ್ರಿಯಾಗುವ ರಸ್ತೆ ಬಂದ್ ಮಾಡಿದ್ದು, ಸಾರ್ವಜನಿಕರ ಓಡಾಟಕ್ಕೆ ಅವಕಾಶ, ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಬಾರಿ ಪೊಲೀಸರಿಗೆ ಜನರ ನಿಯಂತ್ರಣವೇ ದೊಡ್ಡ ಸವಾಲಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ. ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುವ ನಿರೀಕ್ಷೆಯಿದ್ದು, ಬ್ರಿಗೇಡ್ ರಸ್ತೆಯಲ್ಲಿ ಈಗಾಗಲೇ ವಾಹನ ಸಂಚಾರ ಬಂದ್ ಮಾಡಲಾಗಿದೆ.
ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಕಪಲ್ ಟಿಕೆಟ್ ಶೇ. 25ರಷ್ಟು ದರ ಏರಿಕೆ
ಸಂಜೆ 6 ಗಂಟೆಯಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ಗೆ ಯುವ ಸಮೂಹ ಆಗಮಿಸುತ್ತಿದೆ. ಫ್ಯಾಮಿಲಿ, ಫ್ರೆಂಡ್ಸ್ ಜೊತೆ ಆಗಮಿಸಿದ ಯುವತಿಯರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಚರ್ಚ್ಸ್ಟ್ರೀಟ್ನ ಬಹುತೇಕ ಪಬ್ಗಳ ಮುಂದೆ ಗ್ರಾಹಕರು ಕ್ಯೂನಿಂತಿದ್ದಾರೆ. ಮಾಸ್ಕ್ ಧರಿಸಿ, ಮುಖ ಮುಚ್ಚಿಕೊಂಡು ಕೆಲವರು ಓಡಾಡುತ್ತಿದ್ದಾರೆ.
ಮೊದಲ ಬಾರಿಗೆ ಮೊಬೈಲ್ ಫೈರ್ ಕಿಟ್ ಬಳಕೆ
ನಗರದಲ್ಲಿ ಇದೇ ಮೊದಲ ಬಾರಿಗೆ ಮೊಬೈಲ್ ಫೈರ್ ಕಿಟ್ ಬಳಕೆ ಮಾಡಲಾಗಿದೆ. ಬ್ರಿಗೇಡ್ ರಸ್ತೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ತುರ್ತು ಅಗ್ನಿ ಅವಘಡದ ವೇಳೆ 10ಕ್ಕೂ ಹೆಚ್ಚು ಮೊಬೈಲ್ ಫೈರ್ ಕಿಟ್ ಬಳಕೆಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬೆಸ್ಕಾಂ ಸಿಬ್ಬಂದಿಯ ನಿಯೋಜನೆ ಮಾಡಲಾಗಿದ್ದು, ವಿದ್ಯುತ್ ಸ್ಥಗಿತಗೊಂಡರೆ ತಕ್ಷಣ ಸ್ಥಳಕ್ಕೆ ತಂಡ ಧಾವಿಸಲಿದೆ.
ಮಹಿಳೆಯರ ಸುರಕ್ಷತೆಗಾಗಿ ಹೆಚ್ಚು ಒತ್ತು: ಡಿಸಿಪಿ ಶೇಖರ್
ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಪ್ರತಿಕ್ರಿಯೆ ನೀಡಿದ್ದು, ಹೆಚ್ಚುವರಿ ಭದ್ರತೆಗಾಗಿ ನಾಲ್ವರು ಡಿಸಿಪಿ, 3000 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಈ ಬಾರಿ ಮಹಿಳೆಯರ ಸುರಕ್ಷತೆಗಾಗಿ ಹೆಚ್ಚು ಒತ್ತು ನೀಡಲಾಗಿದೆ.
ಮಹಿಳೆಯರಿಗಾಗಿ ಪ್ರತ್ಯೇಕ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಮಹಿಳಾ ಸುರಕ್ಷತಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುವರಿ ಸಿಸಿಕ್ಯಾಮರಾ ಅಳವಡಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:19 pm, Sun, 31 December 23